ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಕೇಂದ್ರ ಸರ್ಕಾರವು ಕಾಲಕ್ಕೆ ತಕ್ಕಂತೆ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಿ ಮೋಟಾರು ವಾಹನ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಿದೆ. ಒಂದು ದೇಶ, ಒಂದು ರೇಷನ್ ಕಾರ್ಡ್ ಯೋಜನೆಯ ನಂತರ ಕೇಂದ್ರ ಸರ್ಕಾರವು ವಿವಿಧ ಸರ್ಕಾರಿ ಆಧಾರಿತ ಅಪ್ಲಿಕೇಶನ್ ಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನಿಸುತ್ತಿದೆ.

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಈ ಯೋಜನೆಗಳಿಂದಾಗಿ ಕೆಲಸಕ್ಕಾಗಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋಗುವ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ಈಗ ಕೇಂದ್ರ ಸರ್ಕಾರವು ಆಧುನಿಕ ಎಲೆಕ್ಟ್ರಾನಿಕ್ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ವಾಹನಗಳ ರಿಜಿಸ್ಟ್ರೇಷನ್ ಸರ್ಟಿಫಿಕೇಟ್ (ಆರ್‌ಸಿ) ಹಾಗೂ ಡ್ರೈವಿಂಗ್ ಲೈಸೆನ್ಸ್ ಗಳನ್ನು ಪರಿಚಯಿಸಲು ಮುಂದಾಗಿದೆ.

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಈ ಸಂಬಂಧ 1989ರ ಮೋಟಾರು ವಾಹನ ಕಾಯ್ದೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಇದರನ್ವಯ ಅಕ್ಟೋಬರ್ 1ರಿಂದ ದೇಶಾದ್ಯಂತ ವಾಹನಗಳಿಗಾಗಿ ಏಕರೂಪದ ಆರ್‌ಸಿ ಹಾಗೂ ಡ್ರೈವಿಂಗ್ ಲೈಸೆನ್ಸ್ ನೀಡುವ ಹೊಸ ವಿಧಾನವು ಜಾರಿಗೆ ಬರಲಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಆರ್‌ಸಿ ಬುಕ್ ಗಳನ್ನು ಎಲೆಕ್ಟ್ರಾನಿಕ್ ಕಾರ್ಡ್ ರೂಪದಲ್ಲಿ ನೀಡಲಾಗುವುದು. ಡ್ರೈವಿಂಗ್ ಲೈಸೆನ್ಸ್ ಅನ್ನು ಸಹ ಎಲೆಕ್ಟ್ರಾನಿಕ್ ಕಾರ್ಡ್ ರೂಪಕ್ಕೆ ಬದಲಿಸಲಾಗುತ್ತದೆ. ಈ ಲೈಸೆನ್ಸ್ ಕಾರ್ಡ್, ಕ್ಯೂಆರ್ ಕೋಡ್ ಹಾಗೂ ಮೈಕ್ರೋ ಚಿಪ್ ಹೊಂದಿರಲಿದೆ.

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ನಿಯಮ ಉಲ್ಲಂಘಿಸಿ ದಂಡ ಪಾವತಿಸುವ ವಾಹನ ಚಾಲಕರ ವಿವರಗಳನ್ನು ಈ ಕಾರ್ಡ್‌ನಿಂದಾಗಿ ಪೊಲೀಸರು ಹಾಗೂ ಮೋಟಾರು ವಾಹನ ಇಲಾಖೆ ಸುಲಭವಾಗಿ ಪಡೆಯಬಹುದು.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಈ ಹೊಸ ಎಲೆಕ್ಟ್ರಾನಿಕ್ ಕಾರ್ಡ್ ಮೂಲಕ 10 ವರ್ಷಗಳವರೆಗಿನ ಮಾಹಿತಿಯನ್ನು ಪಡೆಯಬಹುದು. ಇದರ ಜೊತೆಗೆ ವಾಹನಗಳ ಎಲ್ಲಾ ದಾಖಲೆ ಹಾಗೂ ವಿವರಗಳನ್ನು ಎಲೆಕ್ಟ್ರಾನಿಕ್ ವ್ಯವಸ್ಥೆಗೆ ಬದಲಿಸಲಾಗುವುದು.

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಹಾಲಿ ಇರುವ ಆರ್‌ಸಿ ಬುಕ್ ಗಳನ್ನು ನವೀಕರಿಸಬೇಕೆ, ಬೇಡವೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಹಲವಾರು ಕೊಡುಗೆಗಳನ್ನು ನೀಡಲಾಗುತ್ತಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಇದರಂತೆ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸುವವರಿಗೆ, ವಹಿವಾಟು ಶುಲ್ಕದಲ್ಲಿ ರಿಯಾಯಿತಿಗಳನ್ನು ನೀಡಲಾಗುತ್ತದೆ. ಅಕ್ಟೋಬರ್ 1ರಿಂದ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸುವವರಿಗೆ ನೀಡಲಾಗುತ್ತಿದ್ದ ರಿಯಾಯಿತಿಯನ್ನು ರದ್ದುಗೊಳಿಸಲಾಗುತ್ತದೆ.

ಅಕ್ಟೋಬರ್ 1ರಿಂದ ಬದಲಾಗಲಿದೆ ಆರ್‌ಸಿ, ಡ್ರೈವಿಂಗ್ ಲೈಸೆನ್ಸ್ ಸ್ವರೂಪ

ಆದರೆ ಡೆಬಿಟ್ ಕಾರ್ಡ್ ಮೂಲಕ ಪಾವತಿಸುವವರಿಗೆ ನೀಡಲಾಗುತ್ತಿದ್ದ ರಿಯಾಯಿತಿಯು ಮುಂದುವರಿಯಲಿದೆ ಎಂದು ವರದಿಯಾಗಿದೆ.

Most Read Articles

Kannada
English summary
Union government to launch new driving licence and RC process from October-1st. Read in Kannada.
Story first published: Tuesday, September 29, 2020, 15:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X