Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾಹನ ಮಾಲೀಕರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ, ದಾಖಲೆಗಳ ಮಾನ್ಯತಾ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ
ಲಾಕ್‌ಡೌನ್ ನಂತರ ದೇಶಾದ್ಯಂತವಿರುವ ಆರ್‌ಟಿಒ ಕಚೇರಿಗಳು ಹಂತಹಂತವಾಗಿ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಕೇಂದ್ರ ಸಾರಿಗೆ ಇಲಾಖೆಯು ಮೋಟಾರು ವಾಹನ ದಾಖಲೆಗಳ ಮಾನ್ಯತಾ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಮೋಟಾರು ವಾಹನ ಕಾಯ್ದೆ 1988 ಹಾಗೂ ಸೆಂಟ್ರಲ್ ಮೋಟಾರು ವಾಹನ ನಿಯಮ 1989ರಡಿಯಲ್ಲಿ ಬರುವ ವಾಹನಗಳ ಸಿಂಧುತ್ವ, ಲೈಸೆನ್ಸ್, ರಿಜಿಸ್ಟ್ರೇಷನ್ ಹಾಗೂ ಇನ್ನಿತರ ದಾಖಲೆಗಳ ಸಿಂಧುತ್ವವನ್ನು ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇವುಗಳ ಸಿಂಧುತ್ವವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು.

ಸಾರಿಗೆ ಇಲಾಖೆಯು ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ಮೋಟಾರು ವಾಹನ ದಾಖಲೆಗಳಮಾನ್ಯತೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಇದರಿಂದ ಇವುಗಳ ಮಾನ್ಯತಾ ಅವಧಿ ಮುಗಿದು ಚಿಂತೆಗೀಡಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಫೆಬ್ರವರಿ 1ರಿಂದ ಮಾನ್ಯತೆ ಅವಧಿ ಮುಗಿದಿರುವ ದಾಖಲೆಗಳನ್ನು ಡಿಸೆಂಬರ್ 31ರವರೆಗೆ ಮಾನ್ಯವೆಂದು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ದೇಶಾದ್ಯಂತ ಆರ್‌ಟಿಒಗಳು ತೆರೆದಿದ್ದರೂ ಜನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ.

ಕೇಂದ್ರ ಸರ್ಕಾರವು ವಾಹನ ನೋಂದಣಿ ದಾಖಲೆಯನ್ನು ತಿದ್ದುಪಡಿ ಮಾಡಲು ಮುಂದಾಗಿದೆ. ಸದ್ಯ ಮೋಟಾರು ವಾಹನ ಕಾಯ್ದೆಯಡಿ ನೋಂದಣಿಯಾಗಿರುವ ದಾಖಲೆಗಳು ವಾಹನಗಳ ಮಾಲೀಕತ್ವವನ್ನು ಸರಿಯಾಗಿ ಪ್ರತಿಬಿಂಬಿಸಿಲ್ಲ ಎಂದು ಸಾರಿಗೆ ಇಲಾಖೆ ಹೇಳಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಮೋಟಾರು ವಾಹನಗಳ ಮಾಲೀಕತ್ವದಲ್ಲಿ ಸ್ಪಷ್ಟತೆ ತರುವ ಉದ್ದೇಶದಿಂದ ಮೋಟಾರು ವಾಹನ ಕಾಯ್ದೆ 1989ರ ಫಾರಂ 20ರನ್ನು ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಅಂಗೀಕರಿಸಿದೆ.

ಮೋಟಾರು ವಾಹನಗಳ ಖರೀದಿ, ಮಾಲೀಕತ್ವ, ಕಾರ್ಯಾಚರಣೆಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ದೈಹಿಕವಾಗಿ ಅಂಗವಿಕಲರು, ಜಿಎಸ್ ಟಿ ಹಾಗೂ ಇನ್ನಿತರ ರಿಯಾಯಿತಿಗಳನ್ನು ಪಡೆಯಲು ಈ ತಿದ್ದುಪಡಿಯು ನೆರವಾಗಲಿದೆ ಎಂದು ಸಾರಿಗೆ ಇಲಾಖೆ ಹೇಳಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಇದರ ಜೊತೆಗೆ ದೇಶದಲ್ಲಿ ವಾಹನ ಸ್ಕ್ರ್ಯಾಪ್ ನೀತಿಯನ್ನು ಸಹ ಜಾರಿಗೆ ತರಬೇಕಾಗಿದೆ. ಇದರ ಅಡಿಯಲ್ಲಿ ಹಳೆಯ ವಾಹನಗಳನ್ನು ಜಂಕ್ ಆಗಿ ಪರಿವರ್ತಿಸಲಾಗುವುದು. ಈ ನೀತಿಯನ್ನು ಜಾರಿಗೊಳಿಸಲು ವಿಳಂಬವಾಗುತ್ತಿರುವುದಕ್ಕೆ ಎನ್‌ಜಿಟಿ ಸಾರಿಗೆ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತ್ತು.