Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಸ್ತೆ ಸಾರಿಗೆಗೆ ಸಂಬಂಧಿಸಿದ ಇಡೀ ವರ್ಷದ ಮಾಹಿತಿಯನ್ನು ಬಿಡುಗಡೆಗೊಳಿಸಿದ ಸಾರಿಗೆ ಇಲಾಖೆ
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು 2020ರಲ್ಲಿ ಪೂರ್ಣಗೊಂಡ ಹೆದ್ದಾರಿ ಹಾಗೂ ರಸ್ತೆ ನಿರ್ಮಾಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಬಿಡುಗಡೆಗೊಳಿಸಿದೆ. ಈ ವರ್ಷ ಡಿಸೆಂಬರ್ 20ರವರೆಗೆ 1,36,155 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

2019-20ರ ಅವಧಿಯಲ್ಲಿ 8,948 ಕಿ.ಮೀ ರಸ್ತೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿತ್ತು. ಈ ವರ್ಷ 10,237 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಗಿದೆ. ಈ ವರ್ಷ ದಿನಕ್ಕೆ ಸರಾಸರಿ 28 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಗಿದೆ. 2013-2014ರಲ್ಲಿ ಪ್ರತಿ ದಿನ ಸರಾಸರಿ 11.7 ಕಿ.ಮೀ ರಸ್ತೆಗಳನ್ನು ನಿರ್ಮಿಸಲಾಗಿತ್ತು.

ಕರೋನಾ ಸಾಂಕ್ರಾಮಿಕದ ಅವಧಿಯಲ್ಲಿ ರಸ್ತೆ ನಿರ್ಮಾಣ ಕಂಪನಿಗಳು ಹಾಗೂ ಗುತ್ತಿಗೆದಾರರು ಸಹ ಇಲಾಖೆಗೆ ನೆರವಾಗಿದ್ದಾರೆ ಎಂದು ಸಾರಿಗೆ ಇಲಾಖೆಯು ತಿಳಿಸಿದೆ. ಹಲವು ಕಾಮಗಾರಿಗಳ ಮುಕ್ತಾಯದ ಗಡುವನ್ನು 3 ತಿಂಗಳಿಂದ 6 ತಿಂಗಳವರೆಗೆ ಹೆಚ್ಚಿಸಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

5 ವರ್ಷಗಳಲ್ಲಿ 60,000 ರಸ್ತೆಗಳ ನಿರ್ಮಾಣ
ಮುಂದಿನ ಐದು ವರ್ಷಗಳಲ್ಲಿ 60,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ, 2,500 ಕಿ.ಮೀ ಎಕ್ಸ್‌ಪ್ರೆಸ್ ಹೆದ್ದಾರಿ, 9,000 ಕಿ.ಮೀ ಎಕಾನಾಮಿಕ್ ಕಾರಿಡಾರ್, ಕರಾವಳಿ ಹಾಗೂ ಬಂದರು ಸಂಪರ್ಕಕ್ಕಾಗಿ 2,000 ಕಿ.ಮೀ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲು ಇಲಾಖೆಯು ನಿರ್ಧರಿಸಿದೆ.

ಈ ಅವಧಿಯಲ್ಲಿ 100 ಪ್ರವಾಸಿ ತಾಣಗಳಿಗೆ ಸಂಪರ್ಕವನ್ನು ಕಲ್ಪಿಸುವ ಹಾಗೂ 45 ನಗರಗಳಿಗೆ ಬೈಪಾಸ್ ನಿರ್ಮಿಸುವ ಯೋಜನೆಯನ್ನು ಇಲಾಖೆಯು ಸಿದ್ಧಪಡಿಸಿದೆ. ಇಲಾಖೆಯ ಖರ್ಚು 2013-14ರಲ್ಲಿ ರೂ.33,745 ಕೋಟಿಗಳಿಂದ 2019-20ರಲ್ಲಿ ರೂ.1,50,841 ಕೋಟಿಗಳಿಗೆ ಏರಿಕೆಯಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

2019-20ರ ಅವಧಿಯಲ್ಲಿ ಖಾಸಗಿಯವರು ರೂ.21,926 ಕೋಟಿಗಳಷ್ಟು ಹೂಡಿಕೆ ಮಾಡಿದ್ದಾರೆ. ಈ ವರ್ಷ ಎನ್‌ಹೆಚ್‌ಎಐ ನವೆಂಬರ್ ವೇಳೆಗೆ ರೂ.79,415 ಕೋಟಿ ಹೂಡಿಕೆ ಮಾಡಿದ್ದರೆ, ಖಾಸಗಿಯವರು ನವೆಂಬರ್ ವರೆಗೆ ರೂ.8,186 ಕೋಟಿ ಹೂಡಿಕೆ ಮಾಡಿದ್ದಾರೆ.

ವಾಹನ ದಾಖಲೆಗಳ ಸುಲಭ ನಿರ್ವಹಣೆ
ಈ ವರ್ಷ ವಾಹನ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ವಾಹನ್ ಹಾಗೂ ಸಾರಥಿಯಂತಹ ಪೋರ್ಟಲ್‌ಗಳನ್ನು ಆರಂಭಿಸಲಾಗಿದೆ. ಇವುಗಳು ದೇಶಾದ್ಯಂತ 15ಕ್ಕೂ ಹೆಚ್ಚು ವಾಹನ ಅಪ್ಲಿಕೇಶನ್ ಹಾಗೂ ಇತರ ವೆಬ್‌ಸೈಟ್‌ಗಳಿಗೆ ಮೂಲಸೌಕರ್ಯಗಳನ್ನು ಒದಗಿಸುತ್ತವೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಷನ್, ತೆರಿಗೆ, ಮಾಲಿನ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಪಡೆಯಲು ಇಲಾಖೆಯು ಡಿಜಿಟಲೀಕರಣಗೊಳಿಸಿದೆ. ವಾಹನಗಳ ಪೋರ್ಟಲ್‌ನಿಂದ ವಾಹನಗಳ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುವುದು ಸುಲಭವಾಗಲಿದೆ.

ವಾಹನ್ ಪೋರ್ಟಲ್ 4.0 ಮೂಲಕ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಸಂಪರ್ಕಿಸಬಹುದು. ಈ ಪೋರ್ಟಲ್ ಮೂಲಕ 1300 ಆರ್‌ಟಿಒ, 25,000 ವೆಹಿಕಲ್ ಡೀಲರ್'ಗಳನ್ನು ಸಾರ್ವಜನಿಕರು ಸಂಪರ್ಕಿಸಬಹುದು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಮೋಟಾರು ವಾಹನ ಕಾಯ್ದೆ 1988ರ ತಿದ್ದುಪಡಿ
ಸಂಚಾರ ನಿಯಮಗಳನ್ನು ಹೆಚ್ಚು ಪಾರದರ್ಶಕವಾಗಿಸುವ ಸಲುವಾಗಿ ಈ ವರ್ಷ ದೇಶಾದ್ಯಂತ ಇ-ಚಲನ್ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು.

ರಸ್ತೆಗಳಲ್ಲಿ ಜನರ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ಮಾಡಿ ನಿಯಮಗಳನ್ನು ಬಿಗಿಗೊಳಿಸಿ, ದಂಡದ ಪ್ರಮಾಣವನ್ನು ಹೆಚ್ಚಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ವಾಹನ ದಾಖಲೆಗಳ ಸುರಕ್ಷತೆ ಹಾಗೂ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಎಂ-ಪರಿವಾಹನ್ ಅಪ್ಲಿಕೇಷನ್ ಅನ್ನು ಆರಂಭಿಸಿದೆ. ಈ ಅಪ್ಲಿಕೇಶನ್‌ನಲ್ಲಿ ವಾಹನಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವ ಸೌಲಭ್ಯವನ್ನು ವಾಹನ ಸವಾರರಿಗೆ ನೀಡಲಾಗಿದೆ.