ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿನ ಎಲೆಕ್ಟ್ರಿಕ್ ವಾಹನ ಹಾಗೂ ಸಂಚಾರ ವ್ಯವಸ್ಥೆಯ ಬಗ್ಗೆ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಈ ಸಭೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ 75%ನಿಂದ 100%ವರೆಗೆ ತೆರಿಗೆ ವಿನಾಯಿತಿ ನೀಡುವ ಹಾಗೂ ಸಂಚಾರ ನಿಯಮ ಉಲ್ಲಂಘನೆಗಾಗಿ ಭಾರಿ ಪ್ರಮಾಣದ ದಂಡ ವಿಧಿಸುವ ಪ್ರಸ್ತಾಪವನ್ನು ಅಂಗೀಕರಿಸಲಾಗಿದೆ. ಪ್ರಸ್ತಾವನೆಯ ಪ್ರಕಾರ, ಉತ್ತರಪ್ರದೇಶದಲ್ಲಿ ಇನ್ನು ಮುಂದೆ ತಪ್ಪಾಗಿ ಪಾರ್ಕ್ ಮಾಡುವ ವಾಹನಗಳಿಗೆ ರೂ.500, ನಿಯಮ ಉಲ್ಲಂಘನೆಗೆ ರೂ.1,500, ಹೆಲ್ಮೆಟ್ ಇಲ್ಲದೆ ವಾಹನ ಸವಾರಿ ಮಾಡಿದರೆ ರೂ.1,000 ಹಾಗೂ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳಿಗೆ ದಾರಿ ನೀಡದಿದ್ದರೆ ರೂ.10,000 ದಂಡ ವಿಧಿಸಲಾಗುವುದು.

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಇದರ ಜೊತೆಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ರೂ.2,000 ದಂಡ ವಿಧಿಸಲಾಗುವುದು. ನಕಲಿ ಲೈಸೆನ್ಸ್ ತಯಾರಿ ಹಾಗೂ ವಂಚನೆಗಾಗಿ ರೂ.10,000 ದಂಡ ವಿಧಿಸಲಾಗುವುದು. ಇದರ ಜೊತೆಗೆ ಆದಿತ್ಯನಾಥ್‌ರವರು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ತೆರಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಸಹ ಅಂಗೀಕರಿಸಿದ್ದಾರೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಪ್ರಸ್ತಾವನೆಯ ಪ್ರಕಾರ, ಮೊದಲ ಒಂದು ಲಕ್ಷ ದ್ವಿಚಕ್ರ ವಾಹನಗಳಿಗೆ 100% ಹಾಗೂ ನಾಲ್ಕು ಚಕ್ರ ವಾಹನಗಳಿಗೆ 75%ನಷ್ಟು ರಸ್ತೆ ತೆರಿಗೆ ವಿನಾಯಿತಿ ನೀಡಲಾಗುವುದು. ಲಾಕ್‌ಡೌನ್‌ನಿಂದ ಉಂಟಾಗಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು 2020-21ರ ಅಬಕಾರಿ ನೀತಿಯಲ್ಲಿ ಕೆಲವು ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಸಹ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಕೇಂದ್ರ ಸರ್ಕಾರದ ಫೇಮ್ -1 ವಾಹನ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ವಾಹನ, ಹೈಬ್ರಿಡ್ ಎಲೆಕ್ಟ್ರಿಕ್ ವಾಹನ ಹಾಗೂ ಮೂಲಸೌಕರ್ಯಗಳನ್ನು ಒದಗಿಸಲು ರೂ.795 ಕೋಟಿಗಳ ಪ್ಯಾಕೇಜ್ ನೀಡಲಾಗಿದ್ದು, ಫೇಮ್ -2 ನೀತಿಯಡಿ ರೂ.8,730 ಕೋಟಿಗಳ ಪ್ಯಾಕೇಜ್ ನೀಡಲಾಗಿದೆ. ಈ ಮೊತ್ತದಲ್ಲಿ ನಗರಗಳಿಗೆ ಎಲೆಕ್ಟ್ರಿಕ್ ಬಸ್ಸುಗಳನ್ನು ಒದಗಿಸಲು ಯೋಜಿಸಲಾಗಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಕೇಂದ್ರ ಸರ್ಕಾರವು ಈ ನೀತಿಯ ಜೊತೆಗೆ ಸಾರ್ವಜನಿಕ ಸಾರಿಗೆ, ಶೇರ್ಡ್ ಮೊಬಿಲಿಟಿ ಹಾಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಯೋಜಿಸಿದೆ. ಸರ್ಕಾರಿ ಬೆಂಬಲಿತ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ದೇಶಾದ್ಯಂತ 20,000 ಎಲೆಕ್ಟ್ರಿಕ್ ವಾಹನಗಳನ್ನು ಸರ್ಕಾರದ ಬಳಕೆಗಾಗಿ ನಿಯೋಜಿಸಲು ಟೆಂಡರ್ ಹಾಕಿದೆ.

ಎಲೆಕ್ಟ್ರಿಕ್ ವಾಹನ ನೀತಿಗೆ ಜೈ ಎಂದ ಸರ್ಕಾರ

ಇದರೊಂದಿಗೆ 2030ರ ವೇಳೆಗೆ 30% ನಷ್ಟು ಖಾಸಗಿ ಕಾರು, 70%ನಷ್ಟು ವಾಣಿಜ್ಯ ಕಾರು, 40%ನಷ್ಟು ಬಸ್‌ ಹಾಗೂ 80%ನಷ್ಟು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

Most Read Articles

Kannada
English summary
UP cabinet passes electric vehicle policy. Read in Kannada.
Story first published: Wednesday, June 17, 2020, 14:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X