ಮುಂದಿನ ವಾರದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಿವು
ಭಾರತೀಯ ಮಾರುಕಟ್ಟೆಯಲ್ಲಿ ಹಲವು ಪ್ರಮುಖ ಕಾರು ತಯಾರಕ ಕಂಪನಿಗಳು ಹಬ್ಬದ ಸೀಸನ್‌ನಲ್ಲಿ ತಮ್ಮ ಜನಪ್ರಿಯ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದಾರೆ. ಮುಂದಿನ ವಾರದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎರಡು ಬಹುನಿರೀಕ್ಷಿತ ಕಾರುಗಳು ಬಿಡುಗಡೆಯಾಗಲಿವೆ.

ಮುಂದಿನ ವಾರದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20 ಮತ್ತು ಮರ್ಸಿಡಿಸ್ ಬೆಂಝ್ ಎಎಂಜಿ ಜಿಎಲ್‌ಸಿ 43 ಕೂಪೆ ಕಾರುಗಳು ಬಿಡುಗಡೆಯಾಗಲಿವೆ. ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ಇಂಡಿಯಾ ಹೊಸ ಎಎಂಜಿ ಜಿಎಲ್‌ಸಿ 43 ಕೂಪೆ ಕಾರನ್ನು ಮೊದಲ ಬಾರಿಗೆ ಸ್ಥಳೀಯವಾಗಿ ತಯಾರಿಸಿ ಬಿಡುಗಡೆಗೊಳಿಸಲಿದೆ. ಇನ್ನು ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಬಹುನಿರೀಕ್ಷಿತ ಮೂರನೇ ತಲೆಮಾರಿನ ಐ20 ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಮೊದಲಿಗೆ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಕಾರಿನ ಬಗ್ಗೆ ಹೇಳುವುದಾದರೆ. ಈ ಐಷಾರಾಮಿ ಕಾರು ಮುಂದಿನ ತಿಂಗಳ 3 ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಮರ್ಸಿಡಿಸ್ ಬೆಂಝ್ ಕಂಪನಿಯು ಭಾರತದಲ್ಲಿ ಸ್ಥಳೀಯವಾಗಿ ತಯಾರಿಸುವ ಮೊದಲ ಕಾರು ಇದಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಮೇಡ್ ಇನ್ ಇಂಡಿಯಾ ಮರ್ಸಿಡಿಸ್ ಬೆಂಝ್ ಎಎಂಜಿ ಜಿಎಲ್‌ಸಿ 43 ಕೂಪೆ ಸೇರುತ್ತದೆ. ಈ ಹೊಸ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ ಕಾರಿನಲ್ಲಿ ವಿ6 ಬೈ-ಟರ್ಬೊ ಎಂಜಿನ್ ಅನ್ನು ಹೊಂದಿರಲಿದೆ.

ಈ ಎಂಜಿನ್ 385 ಬಿಹೆಚ್‌ಪಿ ಪವರ್ ಮತ್ತು 520 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹೊಸ ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 43 ಕೂಪೆ 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಮರ್ಸಿಡಿಸ್ ಬೆಂಝ್ ಎಎಂಜಿ ಜಿಎಲ್‌ಸಿ 43 ಕೂಪೆ ಕೇವಲ 4.9 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಸಾಧಿಸುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಹ್ಯುಂಡೈ ಕಂಪನಿಯ ಹೊಸ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮಂದಿನ ತಿಂಗಳ 05ರಂದು ಬಿಡುಗಡೆಯಾಗಲಿದೆ. ಹ್ಯುಂಡೈ ಕಂಪನಿಯು ತನ್ನ ಹೊಸ ಐ20 ಕಾರಿಗಾಗಿ ಅಧಿಕೃತವಾಗಿ ಪ್ರಿ ಬುಕ್ಕಿಂಗ್ ಸ್ವೀಕರಿಸಲು ಈಗಾಗಲೇ ಪ್ರಾರಂಭಿಸಲಾಗಿದೆ. ಮೂರನೇ ತಲೆಮಾರಿನ ಐ20 ಕಾರನ್ನು ಖರೀದಿಸುವ ಗ್ರಾಹರು ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 83 ಬಿಹೆಚ್‌ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಸಿವಿಟಿ ಆಯ್ಕೆಗೆ ಜೋಡಿಸಲಾಗುವುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 7-ಸ್ಪೀಡ್ ಮತ್ತು ಸ್ಪೀಡ್ ಐಎಂಟಿ ಆಯ್ಕೆಯನ್ನು ನೀಡಲಾಗುತ್ತದೆ.

ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 100 ಬಿಹೆಚ್‌ಪಿ ಪವರ್ 240 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬಲೆನೊ, ಟಾಟಾ ಆಲ್ಟ್ರೋಜ್, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications