2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

2020ರ ವರ್ಷ ಬಹುತೇಕ ಅಂತ್ಯಗೊಳ್ಳುತ್ತಿದೆ, ಎಲ್ಲಾ ಕ್ಷೇತ್ರಗಳಿಗೂ ಇದು ಅತ್ಯಂತ ಕಠಿಣವಾದ ವರ್ಷವಾಗಿತ್ತು. ಆಟೋಮೊಬೈಲ್ ಕ್ಷೇತ್ರದ ಮೇಲೆ ದೊಡ್ಡ ಪರಿಣಾಮವನು ಬೀರಿತ್ತು. ಆದರೆ ಹಬ್ಬದ ಸೀಸನ್ ಬಳಿಕ ಆಟೋಮೊಬೈಲ್ ಕ್ಷೇತ್ರದಲ್ಲಿ ಚೇತರಿಕೆಯನ್ನು ಕಾಣುತ್ತಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಈ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಹ್ಯುಂಡೈ ಐ20, ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‌ಯುವಿ, ಆಡಿ ಕ್ಯೂ2, ಮತ್ತು ಕಿಯಾ ಸೊನೆಟ್ ನಂತಹ ಹಲವಾರು ಜನಪ್ರಿಯ ಮಾದರಿಗಳು ಬಿಡುಗಡೆಯಾಗಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ. ಇನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಇನ್ನು ಹಲವು ಜನಪ್ರಿಯ ಮಾದರಿಗಳು ಬಿಡುಗಡೆಯಾಗಲಿವೆ. ಇದರ ಕುರಿತು ಹೆಚ್ಚಿನ ಮಾಹಿತಿ ಇಲ್ಲಿವೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಎಕ್ಸ್‌ಇ, ಎಕ್ಸ್‌ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯಲ್ಲಿ 1.0-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ. ಈ ಎಂಜಿನ್ 71 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಜಿನ್ ನೊಂದಿಗೆ 5-ಸ್ಫೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಲಾಗುತ್ತದೆ. ಈ ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್ ಎಸ್‍ಯುವಿಯು ಡಿಸೆಂಬರ್ ತಿಂಗಳ 2 ರಂದು ಬಿಡುಗಡೆಯಾಗಲಿದೆ

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್

ಜನಪ್ರಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಕಂಪನಿಯು ತನ್ನ ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ನಾಲ್ಕು ಡೋರಿನ ಕೂಪ್ ಆಗಿದೆ.

MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ದೊಡ್ಡ ಸಿಂಗಲ್-ಫ್ರೇಮ್ ಗ್ರಿಲ್ ಅನ್ನು ಹೊಂದಿದೆ. ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನಲ್ಲಿ ಹನಿಕ್ಯೂಬ್ ಮಾದರಿಯೊಂದಿಗೆ ದೊಡ್ಡ ಸಿಂಗಲ್-ಫ್ರೇಮ್ ಗ್ರಿಲ್ ಅನ್ನು ಹೊಂದಿದೆ. ಇನ್ನು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳೊಂದಿಗೆ ನಯವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳಿಂದ ಸುತ್ತುವರೆದಿದೆ. ಇದಲ್ಲದೆ ಹೆಡ್‌ಲ್ಯಾಂಪ್‌ಗಳು ಬ್ಲೂ ಸಿಗ್ನೇಚರ್ ಅಂಶಗಳನ್ನು ಹೊಂದಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಆಡಿ ಕಂಪನಿಯು ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್‌ ಅನ್ನು ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಈ ಎಂಜಿನ್ 349 ಬಿಹೆಚ್‌ಪಿ ಪವರ್ ಮತ್ತು 500 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತದೆ. ಈ 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್‌ ನೊಂದಿಗೆ 8-ಸ್ಪೀಡ್ ಟಿಪ್ಟ್ರೋನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯು ಕೇವಲ 4.5 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಬಹುನಿರೀಕ್ಷಿತ ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಎ-ಕ್ಲಾಸ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಈ ಕಾರಿನಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 306 ಬಿ‍‍ಹೆಚ್‍ಪಿ ಪವರ್ ಮತ್ತು 400 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

2020ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳಿವು

ಇದರೊಂದಿಗೆ ಸ್ಟ್ಯಾಂಡರ್ಡ್ ಎ-ಕ್ಲಾಸ್ ಸೆಡಾನ್ ನಲ್ಲಿ 94 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುವ 2.0 ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಮತ್ತು ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಸಹ ಹೊಂದಿರಲಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಮುಂದಿನ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

Article Published On: Saturday, November 28, 2020, 12:41 [IST]
English summary
Upcoming Car Launches In December 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+