ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಲಾಕ್‌ಡೌನ್ ವೇಳೆ ಸಂಪೂರ್ಣವಾಗಿ ನೆಲಕಚ್ಚಿದ್ದ ಹೊಸ ವಾಹನಗಳ ಮಾರಾಟವು ಇದೀಗ ಚೇತರಿಕೆ ಕಾಣುತ್ತಿದ್ದು, ಕರೋನಾ ವೈರಸ್ ಪರಿಣಾಮ ಸ್ವಂತ ವಾಹನಗಳ ಬಳಕೆಯು ಹೆಚ್ಚುತ್ತಿರುವುದು ಆಟೋ ಕಂಪನಿಗಳಿಗೆ ವರವಾಗಿ ಪರಿಣಮಿಸಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಕಳೆದ ಮೇ ಮತ್ತು ಜೂನ್ ಅವಧಿಯಲ್ಲಿ ಬಿಡುಗಡೆಯಾಗಬೇಕಿದ್ದ ಹಲವಾರು ಹೊಸ ವಾಹನಗಳು ಇದೀಗ ಪರಿಸ್ಥಿತಿ ಸುಧಾರಿಸಿ ಹಿನ್ನಲೆಯಲ್ಲಿ ಬಿಡುಗಡೆಗೆ ಸಜ್ಜುಗೊಂಡಿದ್ದು, ಕಾರು ಮಾರಾಟ ವಿಭಾಗದಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟ ತೀವ್ರ ಬೆಳವಣಿಗೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ವಿವಿಧ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆ ಅನುಸಾರವಾಗಿ ವಿವಿಧ ಮಾದರಿಯ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ರೂ. 10 ಲಕ್ಷ ಬೆಲೆ ಅಂತರ ಖರೀದಿಗೆ ಲಭ್ಯವಾಗಬಹುದಾದ ಕಾರು ಮಾದರಿಗಳ ಬಗೆಗೆ ಇಲ್ಲಿ ಚರ್ಚಿಸಲಾಗಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಕಳೆದ ತಿಂಗಳು ಅನಾವರಣಗೊಂಡಿದ್ದ ಕಿಯಾ ಸೊನೆಟ್ ಕಾರು ಇದೇ ತಿಂಗಳು 18ರಂದು ಬಿಡುಗಡೆಗೊಳ್ಳಲು ಭರ್ಜರಿ ಸಿದ್ದತೆಯಲ್ಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಈಗಾಗಲೇ ಸುಮಾರು 15 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಸಲ್ಲಿಕೆಯಾಗಿವೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.50 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ಅರ್ಬನ್ ಕ್ರೂಸರ್ ರೀಬ್ಯಾಡ್ಜ್ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗುವ ಮಾಹಿತಿ ದೊರೆತಿದೆ. ಮಾಹಿತಿಗಳ ಪ್ರಕಾರ, ಹೊಸ ಅರ್ಬನ್ ಕ್ರೂಸರ್ ಕಾರು ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಎಡ್ಎಕ್ಸ್ಐ ಪ್ಲಸ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 1.5 ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಹೊಂದಿರುವ ಹೊಸ ಕಾರು ಮೂಲ ಕಾರಿನ ಬೆಲೆಗಿಂತಲೂ ತುಸು ದುಬಾರಿಯಾಗಲಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 2 ವರ್ಷಗಳ ವಾರಂಟಿ ಆಫರ್ ಘೋಷಣೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಮಹೀಂದ್ರಾ ನ್ಯೂ ಜನರೇಷನ್ ಥಾರ್

ಅಗಸ್ಟ್ 15ರಂದು ಹೊಸ ತಲೆಮಾರಿನ ಥಾರ್ ಆಫ್ ರೋಡ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ್ದ ಮಹೀಂದ್ರಾ ಕಂಪನಿಯು ಅಕ್ಟೋಬರ್ 2ರಂದು ಅಧಿಕೃತವಾಗಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ಮಾಹಿತಿಗಳ ಪ್ರಕಾರ, ಹೊಸ ಥಾರ್ ಕಾರು ದೆಹಲಿ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 9.75 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.12.25 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಪೂರಕವಾದ ಹಲವಾರು ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಕಳೆದ ತಿಂಗಳ ಹಿಂದಷ್ಟೇ ಅನಾವರಣಗೊಳಿಸಿ ಮುಂದಿನ 2 ತಿಂಗಳ ಅವಧಿಯಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯೊಂದಿಗೆ ಮಾತ್ರವೇ ಬಿಡುಗಡೆಯಾಗಲಿರುವ ಹೊಸ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸಲು ಯತ್ನಿಸುತ್ತಿರುವ ನಿಸ್ಸಾನ್ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.99 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ರೆನಾಲ್ಟ್ ಕಿಗರ್

ರೆನಾಲ್ಟ್ ಕಂಪನಿಯು ತನ್ನ ಬಹುನೀರಿಕ್ಷಿತ ಟ್ರೈಬರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸುತ್ತಿದೆ.

ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳಿವು..

ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಹೊಸ ಕಾರುಗಳ ಅಭಿವೃದ್ದಿಗಾಗಿ ಕೈಜೋಡಿಸುವ ಮೂಲಕ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದು, ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಹೆಚ್ಚು ಕಡಿಮೆ ಒಂದೇ ಮಾದರಿಯಲ್ಲಿ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ. ಜಂಟಿಯಾಗಿ ಅಭಿವೃದ್ದಿಪಡಿಸಿರುವ ಹೊಸ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಕಿಗರ್ ಮತ್ತು ಮ್ಯಾಗ್ನೈಟ್ ಎರಡರಲ್ಲೂ ಬಳಕೆಯಾಗಲಿದ್ದು, ಕಿಗರ್ ಕಾರು ಕೂಡಾ ಎಕ್ಸ್‌ಶೋರೂಂ ಪ್ರಕಾರ ರೂ.6 ಲಕ್ಷದಿಂದ ರೂ. 9 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Article Published On: Tuesday, September 15, 2020, 11:02 [IST]
English summary
Upcoming Cars Under Rs 10 Lakhs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+