Just In
Don't Miss!
- News
ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್
- Finance
ಬಜೆಟ್ 2021: ಆದಾಯ ತೆರಿಗೆ ಇಳಿಕೆ ಅನುಮಾನ; ವಿನಾಯಿತಿಗಳ ಕಡೆಗೆ ಗಮನ
- Sports
ಧೋನಿ ಜೊತೆಗೆ ನನ್ನನ್ನು ಹೋಲಿಸುವುದು ನ್ಯಾಯ ಅಲ್ಲ ಎಂದ ರಿಷಭ್ ಪಂತ್
- Movies
Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
- Lifestyle
ನೀವು ರಾತ್ರಿ ಭಾರೀ ಭೋಜನ ಮಾಡೋರಾದ್ರೆ ಈ ಸ್ಟೋರಿ ಓದಲೇಬೇಕು...!
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು..!
ಇಂಧನ ಚಾಲಿತ ವಾಹನಗಳಿಂದಾಗಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ವಿಶ್ವಾದ್ಯಂತ ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಭಾರತದಲ್ಲೂ ಈಗಾಗಲೇ ಪ್ರಮುಖ ಕಾರು ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, 2021ರ ಅವಧಿಯಲ್ಲಿ ಮತ್ತಷ್ಟು ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲು ಸಜ್ಜುಗೊಂಡಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಇವಿ ಕಾರುಗಳು ಯಾವವು? ಅವುಗಳ ವಿಶೇಷತೆ ಏನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ.

ಮಾರುತಿ ಸುಜುಕಿ ವ್ಯಾಗನ್ಆರ್ ಎಲೆಕ್ಟ್ರಿಕ್
ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯು ಭಾರತೀಯ ಮಾರುಕಟ್ಟೆಯಲ್ಲಿ ಬಹುನೀರಿಕ್ಷಿತ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಮೂಲಕ ಹಲವಾರು ಬಾರಿ ರೋಡ್ ಟೆಸ್ಟಿಂಗ್ ನಡೆಸಲಾಗಿದೆ.

ಮಾರುತಿ ಸುಜುಕಿ ಕಂಪನಿಯು ಹೊಸ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯ ಯಾವುದೇ ಮಾಹಿತಿಯನ್ನು ಅಧಿಕೃತ ಬಹಿರಂಗಪಡಿಸಿಲ್ಲವಾದರೂ ಈ ಎಲೆಕ್ಟ್ರಿಕ್ ಆವೃತ್ತಿಯು ಉತ್ತಮ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಹೊಂದಿರುವ ನೀರಿಕ್ಷೆಗಳಿದ್ದು, ಮುಂಬರುವ 2021ರ ಮಧ್ಯಂತರದಲ್ಲಿ ಅಧಿಕೃತವಾಗಿ ಲಭ್ಯವಾಗಲಿದೆ. ಪ್ರತಿ ಚಾರ್ಜ್‌ಗೆ 150 ಕಿ.ಮೀ ನಿಂದ 180 ಕಿ.ಮೀ ಮೈಲೇಜ್ ಹೊಂದಲಿರುವ ಹೊಸ ಕಾರು ರೂ. 10 ಲಕ್ಷ ಬಜೆಟ್‌ನಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಮಹೀಂದ್ರಾ ಇಕೆಯುವಿ100
2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಂಡಿದ್ದ ಮಹೀಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಂಡಿದ್ದರೂ ಕರೋನಾ ವೈರಸ್ ಪರಿಣಾಮ ಕಾರಿನ ವಿತರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದೀಗ ಹೊಸ ಕಾರಿನ ವಿತರಣೆಯನ್ನು ಆರಂಭಿಸುತ್ತಿರುವ ಮಹೀಂದ್ರಾ ಕಂಪನಿಯು ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಕಾರು 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಹೀಂದ್ರಾ ಇಎಕ್ಸ್‌ಯುವಿ300
ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ನಂತರ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯ ಬಿಡುಗಡೆ ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಎಂಜಿ ಜೆಡ್ಎಸ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಪ್ರತಿ ಚಾರ್ಜ್‌ಗೆ 350 ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ರೂ. 14 ಲಕ್ಷದಿಂದ ರೂ.18 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ರೆನಾಲ್ಟ್ ಡಾಸಿಯಾ
ರೆನಾಲ್ಟ್ ಕಂಪನಿಯು ಯುರೋಪ್ ಮಾರುಕಟ್ಟೆಯಲ್ಲಿನ ತನ್ನ ಸಹಭಾಗೀತ್ವದ ಕಂಪನಿಯಾದ ಡಾಸಿಯಾ ಬ್ರಾಂಡ್‌ನ ಸ್ಪ್ರಿಂಗ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ವಿವಿಧ ಹೆಸರಿನೊಂದಿಗೆ ಮಾರಾಟ ಮಾಡಲು ಸಿದ್ದವಾಗಿದ್ದು, ಹೊಸ ಕಾರು ಭಾರತದಲ್ಲೂ ಬಿಡುಗಡೆಯಾಗುವ ನೀರಿಕ್ಷೆಗಳಿವೆ. ಹೊಸ ಕಾರು 2021ರ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬಜೆಚ್ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಪ್ರತಿ ಚಾರ್ಜ್‌ಗೆ 150 ಕಿ.ಮೀ ನಿಂದ 200 ಕಿ.ಮೀ ಮೈಲೇಜ್ ರೇಂಜ್ ಹೊಂದಿರಲಿದೆ.

ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್
ನೆಕ್ಸಾನ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೆ ಆಲ್‌ಟ್ರೊಜ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡಲಿದೆ. ಹೊಸ ಕಾರು 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಆಕರ್ಷಕ ಬೆಲೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಕನಿಷ್ಠ 250 ರಿಂದ ಗರಿಷ್ಠ 300 ಕಿ.ಮೀ ಪ್ರಯಾಣ ಮಾಡಬಹುದಾಗಿದೆ.

ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್
ಜಾಗ್ವಾರ್ ಲ್ಯಾಂಡ್ ರೋವರ್ ಕಂಪನಿಯು ತನ್ನ 2021ರ ಐ-ಪೇಸ್ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. 2021ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿಗಾಗಿ ಈಗಾಗಲೇ ಬುಕ್ಕಿಂಗ್ ಆರಂಭವಾಗಿದ್ದು, 90 ಕಿವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ಗೆ ಜೋಡಿಸಲಾಗುತ್ತದೆ. ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಐ-ಪೇಸ್ ಕಾರು ಗರಿಷ್ಠ 8 ವರ್ಷಗಳ ವಾರಂಟಿ ಪಡೆದುಕೊಂಡಿದೆ.

ಆಡಿ ಇ-ಟ್ರಾನ್
ಯುರೋಪ್ ಮಾರುಕಟ್ಟೆಯಲ್ಲಿ ಪ್ರಸ್ತುಕ ವರ್ಷದ ಹಣಕಾಸು ಅವಧಿಯಲ್ಲಿ ಒಟ್ಟು 18 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಬೆಸ್ಟ್ ಸೆಲ್ಲಿಂಗ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಹೊರಹೊಮ್ಮಿರುವ ಇ-ಟ್ರಾನ್ ಕಾರು ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. 95kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಗಂಟೆಗೆ 200ಕಿ.ಮಿ ಟಾಪ್ ಸ್ಪೀಡ್ ಪಡೆದುಕೊಂಡಿರುವ ಇ-ಟ್ರಾನ್ ಕಾರು ತಿ ಚಾರ್ಜ್‌ಗೆ 430ಕಿ.ಮೀ ಅಧಿಕ ಮೈಲೇಜ್ ಹಿಂದಿರುಗಿಸುತ್ತದೆ.

ಟೆಸ್ಲಾ ಮಾಡೆಲ್ 3
ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಆಟೋ ಉತ್ಪಾದನಾ ಕಂಪನಿಯಾದ ಟೆಸ್ಲಾ ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ಮಾರಾಟ ಜಾಲವನ್ನು ವಿಸ್ತರಣೆ ಮಾಡಲು ಮುಂದಾಗಿದ್ದು, ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಭಾರತದಲ್ಲೂ ಹೊಸ ಕಾರುಗಳನ್ನು ಪರಿಚಯಿಸಲು ಉತ್ಸುಕವಾಗಿದೆ.

2021ರ ಜನವರಿಯಲ್ಲಿ ಬುಕ್ಕಿಂಗ್ ಆರಂಭಿಸಲಿರುವ ಟೆಸ್ಲಾ ಕಂಪನಿಯು ಜೂನ್ ಆರಂಭದಲ್ಲಿ ಹೊಸ ಕಾರು ವಿತರಣೆ ಚಾಲನೆ ನೀಡಲಿದ್ದು, ಬಿಡುಗಡೆಯಾಗಲಿರುವ ಮಾಡೆಲ್ 3 ಕಾರು ಮಾದರಿಯು ಪ್ರತಿ ಚಾರ್ಜ್‌ಗೆ 500ಕಿ.ಮೀ ಗೂ ಹೆಚ್ಚು ಮೈಲೇಜ್‌ನೊಂದಿಗೆ ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.