ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಜರ್ಮನ್ ಕಾರು ಉತ್ಪಾದನಾ ಕಂಪನಿಯಾದ ಫೋರ್ಕ್ಸ್‌ವ್ಯಾಗನ್ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಎಸ್‌ಯುವಿ ಕಾರಗಳು ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಕಳೆದ ವರ್ಷ ಅನಾವರಣಗೊಳಿಸಲಾಗಿದ್ದ ಐಡಿ.4 ಇವಿ ಮಾದರಿಯ ಉತ್ಪಾದನಾ ಆವೃತ್ತಿಯನ್ನು ಸಿದ್ದಪಡಿಸುತ್ತಿದೆ.

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಜ್ವಿಕೌದಲ್ಲಿರುವ ತನ್ನ ಕೇಂದ್ರ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಐಡಿ.4 ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯ ಉತ್ಪಾದನೆಗೆ ಚಾಲನೆ ನೀಡಲಾಗಿದ್ದು, ಹೊಸ ಕಾರನ್ನು ಫೋರ್ಕ್ಸ್‌ವ್ಯಾಗನ್ ಕಂಪನಿಯ ಹೊಸ ಮ್ಯಾಡುಲರ್ ಎಲೆಕ್ಟ್ರಿಕ್ ಡ್ರೈವ್ ಮ್ಯಾಟ್ರಿಕ್ಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಪಡಿಸುತ್ತಿದೆ. ಹೊಸ ಎಲೆಕ್ಟ್ರಿಕ್ ಕಾರಿನ ಉತ್ಪಾದನಾ ಆವೃತ್ತಿಯು ಸೆಪ್ಟೆಂಬರ್ ಅಂತ್ಯಕ್ಕೆ ಅನಾವರಣಗೊಳ್ಳಲಿದ್ದು, 2021ರ ಆರಂಭದಲ್ಲಿ ಹೊಸ ಕಾರು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳ್ಳಲಿದೆ.

ಸದ್ಯ ಯುರೋಪಿನಲ್ಲಿ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಹಲವಾರು ಕಠಿಣಕ್ರಮಗಳನ್ನು ಜಾರಿಗೆ ತರುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ ಉತ್ಪಾದನೆಯತ್ತ ಹೆಚ್ಚು ಗಮಹರಿಸುತ್ತಿವೆ.

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕೂಡಾ ಡೀಸೆಲ್ ಎಂಜಿನ್ ಹಗರಣದಲ್ಲಿ ಸಿಲುಕಿ ಭಾರೀ ದಂಡ ಪಾವತಿ ಮಾಡಿದ್ದು, ಇದೇ ಕಾರಣಕ್ಕೆ ಹಲವಾರು ಕಾರು ಮಾದರಿಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ಮಾರಾಟವನ್ನೇ ಸ್ಥಗಿತಗೊಳಿಸಿ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಮುಂಬರುವ ದಿನಗಳಲ್ಲಿ ಪೆಟ್ರೋಲ್ ಕಾರುಗಳ ಮಾರಾಟವನ್ನು ಸಹ ಹಂತ-ಹಂತವಾಗಿ ಸ್ಥಗಿತ ಮಾಡಲಿರುವ ಆಟೋ ಕಂಪನಿಗಳು ಹೈಬ್ರಿಡ್ ಅಥವಾ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮಾದರಿಗಳ ಬಿಡುಗಡೆಯತ್ತ ಗಮನಹರಿಸಿದ್ದು, ಫೋಕ್ಸ್‌ವ್ಯಾಗನ್ ಕೂಡಾ ಇದಕ್ಕಾಗಿಯೇ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಚಾಲನೆ ನೀಡಿದೆ.

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಐಡಿ.4 ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಹಿಂದಿರುಗಿಸುವ ವೈಶಿಷ್ಟ್ಯತೆ ಹೊಂದಿದೆ. ಜೊತೆಗೆ ಹೊಸ ಕಾರಿನಲ್ಲಿ ಸಾಮಾನ್ಯ ಕಾರುಗಳಂತೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ರಿಯರ್ ವೀಲ್ಹ್ ಡ್ರೈವ್ ಸಿಸ್ಟಂ ಪಡೆದುಕೊಂಡಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಆರಂಭಿಕ ಹಂತವಾಗಿ ಐಡಿ.4 ಎಲೆಕ್ಟ್ರಿಕ್ ಕಾರಿನಲ್ಲಿ ರಿಯರ್ ಡ್ರೈವ್ ಸಿಸ್ಟಂ ನೀಡಲಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಮುಂದಿನ ದಿನಗಳಲ್ಲಿ ಆಲ್ ವೀಲ್ಹ್ ಡ್ರೈವ್ ಸಿಸ್ಟಂ ನೀಡಲಿದ್ದು, ರಿಯರ್ ಡ್ರೈವ್ ಸಿಸ್ಟಂ ಹೊಂದಿರುವ ಕಾರು ಮಾದರಿಯು 200-ಬಿಎಚ್‌ಪಿ ಮಾಡಿದ್ದಲ್ಲಿ ಆಲ್ ವೀಲ್ಹ್ ಡ್ರೈವ್ ಮಾದರಿಯು 310-ಬಿಎಚ್‌ಪಿ ಉತ್ಪಾದನೆ ಮಾಡಲಿದೆ.

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಇನ್ನು 4,592-ಎಂಎಂ ಉದ್ದ, 1,852-ಎಂಎಂ ಅಗಲ ಮತ್ತು 1,629-ಎಂಎಂ ಎತ್ತರ ಹೊಂದಿರುವ ಹೊಸ ಕಾರು ಅತ್ಯುತ್ತಮ ಆಸನ ಸೌಲಭ್ಯದೊಂದಿಗೆ ಹಲವಾರು ತಾಂತ್ರಿಕ ಅಂಶಗಳನ್ನು ಧ್ವನಿ ಗ್ರಹಿಕೆಯ ಮೂಲಕ ನಿಯಂತ್ರಣ ಮಾಡಬಹುದಾದ ಸೌಲಭ್ಯಗಳ ಜೋಡಣೆಯನ್ನು ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಐಡಿ.4 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಫೋಕ್ಸ್‌ವ್ಯಾಗನ್

ಹಾಗೆಯೇ ಹೊಸ ಕಾರಿನಲ್ಲಿ 30 ನಿಮಿಷದಲ್ಲಿ ಶೇ.80 ರಷ್ಟು ಚಾರ್ಜ್ ಆಗಬಲ್ಲ 83ಕೆಡಬ್ಲ್ಯುಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಹೊಸ ಕಾರು ಭಾರತದಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾದ ಸಾಧ್ಯತೆಗಳಿವೆ.

Most Read Articles

Kannada
English summary
Volkswagen ID.4 All-Electric SUV Production Begins. Read in Kannada.
Story first published: Saturday, August 22, 2020, 12:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X