ಸ್ಥಳೀಯವಾಗಿ ತಯಾರಾಗಲಿದೆ ಫೋಕ್ಸ್‌ವ್ಯಾಗನ್ ಹೊಸ ಎಸ್‌ಯುವಿ
ಜರ್ಮನ್ ಕಾರು ತಯಾರಕ ಕಂಪನಿ ಫೋಕ್ಸ್‌ವ್ಯಾಗನ್ ತನ್ನ ಜನಪ್ರಿಯ ಎಸ್‌ಯುವಿ ಆವೃತ್ತಿಯಾದ ಟಿ-ರಾಕ್ ಮಾದರಿಯನ್ನು ಭಾರತದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಟಿ-ರಾಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.19.99 ಲಕ್ಷಗಳಾಗಿದೆ.

ಈ ಟಿ-ರಾಕ್ ಎಸ್‍ಯುವಿಗಳನ್ನು ಸಿಬಿಯು ಮಾರ್ಗದ ಮೂಲಕ ಭಾರತಕ್ಕೆ ತರಲಾಗಿದೆ. ಆದರೆ ಇನ್ನು ಈ ಟಿ-ರಾಕ್ ಎಸ್‍ಯುವಿಯನ್ನು ಭಾರತದ ಔರಂಗಭಾದ್‍ನಲ್ಲಿರುವ ಘಟಕದಲ್ಲಿ ಸ್ಥಳಿಯವಾಗಿ ಅಭಿವೃದ್ದಿಪಡಿಸಲು ಚಿಂತಿಸುತ್ತಿದೆ. ಫೋಕ್ಸ್‌ವ್ಯಾಗನ್ ಈ ಮಾಹಿತಿಯನ್ನು ಅಧಿಕೃತವಾಗಿ ಹೇಳಿಲ್ಲ. ಈ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ವ್ಯಕ್ತವಾಗುವ ಬೇಡಿಕೆಯನ್ನು ನೋಡಿ ಈ ನಿರ್ಧಾರವನ್ನು ಕೈಗೊಳ್ಳಬಹುದು. ಈಗಾಗಲೇ ಆಮದು ಮಾಡಿಗೊಂಡ ಮೊದಲ ಬ್ಯಾಚ್‍ನಎಲ್ಲಾ ಯುನಿಟ್ ಗಳು ಮಾರಾಟವಾಗಿವೆ.

ಟಿ-ರಾಕ್ ಎಸ್‍ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ಈ ಎಸ್‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍ಟೇಕ್ ಅನ್ನು ಹೊಂದಿದೆ.
MOST READ: ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಈ ಎಸ್‍ಯುವಿಯ ಮುಂಭಾಗದಲ್ಲಿ ಎಲ್‍ಇಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್ ಲೈಟ್‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍ಗಳನ್ನು ಹೊಂದಿದೆ.

ಈ ಎಸ್‍ಯುವಿನಲ್ಲಿ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೌಲಭ್ಯಗಳಿವೆ.
MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್ಯುವಿ

ಟಿ-ರಾಕ್ ಎಸ್‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.

ಹೊಸ ಟಿ-ರಾಕ್ ಎಸ್‍ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 240 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಈ ಎಂಜಿನ್‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ಅಳವಡಿಸಲಾಗಿದೆ. ಟಿ-ರಾಕ್ ಎಸ್‍ಯುವಿಯು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟವಾಗುತ್ತಿದೆ.

ಫೋಕ್ಸ್‌ವ್ಯಾಗನ್‍ನ ಹೊಸ ಟಿ-ರಾಕ್ ಮಾದರಿಯು ಮಿಡ್ ಎಸ್‍ಯುವಿ ಸೆಗ್‍ಮೆಂಟ್‍ನಲ್ಲಿರಲಿದೆ. ಈ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ಸ್ಕೋಡಾ ಕರೋಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ.


Click it and Unblock the Notifications








