ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಜರ್ಮನ್ ಕಾರು ಉತ್ಪಾದನಾ ಕಂಪನಿ ಫೋಕ್ಸ್‌ವ್ಯಾಗನ್ ಭಾರತದಲ್ಲಿ ಮೊದಲ ಬಾರಿಗೆ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದು, ದಾಸ್ ವೆಲ್ಟ್ ಆಟೋ 3.0 ಮೂಲಕ ಒಂದೇ ಸೂರಿನಡಿ ವಿವಿಧ ಬ್ರಾಂಡ್ ಕಾರುಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಸದ್ಯ ಕರೋನಾ ವೈರಸ್ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಇದೇ ಮೊದಲು ಬಾರಿಗೆ ಬಳಕೆ ಮಾಡಿದ ಕಾರುಗಳನ್ನು ಹೊಸ ವ್ಯವಸ್ಥೆಯೊಂದಿಗೆ ಮಾರಾಟ ಮಾಡಲು ಮುಂದಾಗಿದ್ದು, ದಾಸ್ ವೆಲ್ಟ್ ಆಟೋ 3.0 ಕಂಪನಿಯೊಂದಿಗೆ ಕೈಜೋಡಿಸಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಒಂದೇ ಸೂರಿನಡಿ ವಿವಿಧ ಬ್ರಾಂಡ್ ಕಾರುಗಳನ್ನು ಮಾರಾಟ ಮಾರಾಟ ಮಾಡಲಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪ್ರತ್ಯೇಕ ವೆಬ್‌ಸೈಟ್ ತೆರೆದಿದ್ದು, ಇಂಡಿಯನ್ ಬ್ಲ್ಯೂ ಬುಕ್ ಎನ್ನುವ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ಗೆ ಚಾಲನೆ ನೀಡಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಆಸಕ್ತ ಗ್ರಾಹಕರ ತಮ್ಮ ಇಷ್ಟದ ವಾಹನಗಳನ್ನು ಖರೀದಿಗೂ ಮುನ್ನ ಟೆಸ್ಟ್ ಡ್ರೈವ್‌ಗೆ ವೆಬ್‌ಸೈಟ್ ಮೂಲಕವೇ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಆಕರ್ಷಕ ಬೆಲೆಗಳಲ್ಲಿ ಬಳಕೆ ಮಾಡಿದ ಕಾರುಗಳನ್ನು ಮಾರಾಟ ಮಾಡುತ್ತಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಜೊತೆಗೆ ಹೊಸ ಕಾರು ಮಾರಾಟ ಮಾದರಿಯಲ್ಲೇ ಬಳಕೆ ಮಾಡಿದ ಕಾರುಗಳಿಗೂ ವಾರಂಟಿ, ಬ್ಯಾಂಕ್ ಸಾಲ ಸೌಲಭ್ಯಗಳು ಒದಗಿಸಲಿದ್ದು, ಅತ್ಯಂತ ವ್ಯವಸ್ಥಿತವಾಗಿ ಕಾರು ಖರೀದಿ ಪ್ರಕ್ರಿಯೆಯನ್ನು ಇಂಡಿಯನ್ ಬ್ಲ್ಯೂ ಬುಕ್ ವೆಬ್‌ತಾಣದಲ್ಲಿ ನೀಡಲಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಹಾಗೆಯೇ ಕಾರು ಮಾರಾಟಕ್ಕೂ ಇದೊಂದು ಉತ್ತಮ ವೇದಿಕೆಯಾಗಿದ್ದು, ಕರೋನಾ ವೈರಸ್ ಪರಿಣಾಮ ಹೊಸ ವಾಹನಗಳ ಮಾರಾಟ ಪ್ರಮಾಣಕ್ಕಿಂತಲೂ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮತ್ತು ಮಾರಾಟ ಪ್ರಮಾಣವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದ್ದು , ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸುತ್ತಿವೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಮೇ ಅವಧಿಯಲ್ಲಿ ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ವಾಹನಗಳ ಮಾರಾಟದಲ್ಲಿ ಶೇ.70ರಿಂದ ಶೇ.97ರಷ್ಟು ಕುಸಿತ ಕಂಡುಬಂದಿದೆ. ಹೀಗಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಲಿದೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

Most Read Articles

Kannada
English summary
Volkswagen India Introduces Das WeltAuto 3.0 — Buying And Selling Pre-Owned Cars. Read in Kannada.
Story first published: Friday, June 5, 2020, 19:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X