Just In
- 50 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕ್ರೆಟಾ, ಸೆಲ್ಟೋಸ್ ಎಸ್‌ಯುವಿಗಳಿಗೆ ಟಕ್ಕರ್ ನೀಡಲು ಬರುತ್ತಿದೆ ಫೋಕ್ಸ್‌ವ್ಯಾಗನ್ ಟೈಗನ್
ಭಾರತೀಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಅತಿ ಹೆಚ್ಚು ಪೈಪೋಟಿಯನ್ನು ಹೊಂದಿರುವ ವಿಭಾಗವಾಗಿದೆ. ಇದೇ ಕಾಂಪ್ಯಾಕ್ಟ್ ವಿಭಾಗದಲ್ಲಿ ಜರ್ಮನ್ ಮೂಲದ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯನ್ನು ಬಿಡುಗಡೆಗೊಳಿಸಲಿದೆ.

ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ಭಾರತದಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿದೆ. ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗದಿಂದ ಹೇಗೆ ಕಾಣುತ್ತದೆ ಮತ್ತು ಅದರ ಬಿಡುಗಡೆ ಮಾಹಿತಿ, ವಿನ್ಯಾಸ, ಪ್ಲಾಟ್‌ಫಾರ್ಮ್, ಎಂಜಿನ್ ಮತ್ತು ಗೇರ್ ಬಾಕ್ಸ್ ಆಯ್ಕೆಗಳ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸವು ಟಿ-ಕ್ರಾಸ್ ಎಸ್‍ಯುವಿಗೆ ಹೋಲುತ್ತದೆ. ಮುಂಭಾಗದಲ್ಲಿ ಸಾಕಷ್ಟು ಪ್ರಮಾಣದ ಕ್ರೋಮ್ ಅನ್ನು ಬಳಸಲಾಗುತ್ತದೆ ಗ್ರಿಲ್ ಕ್ರೋಮ್ ಅಲಂಕರಿಸುವಿಕೆಯೊಂದಿಗೆ ಸ್ಲ್ಯಾಟ್‌ಗಳನ್ನು ಪಡೆಯುತ್ತದೆ.

ಹೆಡ್‌ಲ್ಯಾಂಪ್‌ಗಳು ನಯವಾದ ಯುನಿಟ್ ಗಳಾಗಿವೆ ಮತ್ತು ಗ್ರಿಲ್‌ನ ವಿಸ್ತೃತ ಭಾಗದಂತೆ ಕಾಣುತ್ತವೆ. ಫಾಗ್ ಲ್ಯಾಂಪ್ ಗಳ ಸುತ್ತ ಕ್ರೋಮ್ ಸ್ಟ್ರಿಪ್ ಇದೆ ಮತ್ತು ಸ್ಕಿಡ್ ಪ್ಲೇಟ್ ಇದಕ್ಕೆ ಬಹಳ ಮಸ್ಕಲರ್ ನಿಲುವನ್ನು ನೀಡುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಈ ಎಸ್‍ಯುವಿಯ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ, ವ್ಹೀಲ್ ಅರ್ಚಾರ್ ಸುತ್ತಲೂ ಒರಟಾದ ನೋಟವನ್ನು ನೀಡುತ್ತದೆ. ಎಸ್‌ಯುವಿ ಸ್ವತಃ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಮೆಷಿನ್ ಕಟ್ ಅಲಾಯ್ ವೀಲ್ಸ್ ಮತ್ತು ಬ್ಲ್ಯಾಕ್ಡ್ ಔಟ್ ರೂಫ್ ತುಂಬಾ ಚೆನ್ನಾಗಿ ಕಾಣುತ್ತದೆ.

ಇನ್ನು ಎಸ್‍ಯುವಿಯ ಹಿಂಭಾಗದ ಬಗ್ಗೆ ಹೇಳುವುದಾದರೆ, ಅನನ್ಯವಾಗಿ ವಿನ್ಯಾಸಗೊಳಿಸಲಾದ ಟೈಲ್ ಲ್ಯಾಂಪ್ ಅನ್ನು ಹೊಂದಿದೆ. ಇದು ಆಲ್-ಎಲ್ಇಡಿ ಆಗಿದ್ದು, ಅದು ಬೂಟ್‌ನಾದ್ಯಂತ ಚಲಿಸುತ್ತದೆ. ಮಧ್ಯದಲ್ಲಿ ಫೋಕ್ಸ್‌ವ್ಯಾಗನ್ ಲೋಗೋವನ್ನು ಇರಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮುಂಭಾಗದಲ್ಲಿರುವಂತೆಯೇ, ಹಿಂಭಾಗದಲ್ಲಿ ಸ್ಕಿಡ್ ಪ್ಲೇಟ್ ಮತ್ತು ಅದರ ಮೇಲೆ ಕ್ರೋಮ್ ಅಲಂಕರಿಸುವ ಬಂಪರ್ ಹೊಂದಿದೆ. ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯುವ ನಿರೀಕ್ಷೆಯಿದೆ.

ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮುಂತಾದ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎ0 ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಈ ಪ್ಲಾಟ್‌ಫಾರ್ಮ್ ಪಡೆದ ಭಾರತದ ಮೊದಲ ವಾಹನವಾಗಿದೆ. ಇತರ ಅನೇಕ ತಯಾರಕರಂತೆ, ಫೋಕ್ಸ್‌ವ್ಯಾಗನ್ ಸಹ ಡೀಸೆಲ್ ಎಂಜಿನ್‌ಗಳಿಂದ ದೂರ ಸರಿದಿದೆ.

ಈ ಹೊಸ ಟೈಗನ್ ಎಸ್‌ಯುವಿ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಅಥವಾ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆಯುವ ನಿರೀಕ್ಷೆಯಿದೆ. ಮುಂದಿನ ವರ್ಷದ ಕೊನೆಯಲ್ಲಿ ಫೋಕ್ಸ್‌ವ್ಯಾಗನ್ ಹೊಸ ಟೈಗನ್ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.