ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಜರ್ಮನಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯನ್ನು 2020ರ ಮಾರ್ಚ್ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.19.99 ಲಕ್ಷಗಳಾಗಿದೆ.

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಫೋಕ್ಸ್‌ವ್ಯಾಗನ್ ಕಂಪನಿಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಯೋಜನೆ ಅಡಿ ಈ ಟಿ-ರಾಕ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಟಿ-ರಾಕ್ ಎಸ್‍ಯುವಿಯಲ್ಲಿ ಐಷಾರಾಮಿ ಫೀಚರ್ಸ್ ಹೊಂದಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಎಸ್‍‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಭಾರತದಲ್ಲಿ ಟಿ-ರಾಕ್ ಎಸ್‍ಯುವಿಯ 1,000 ಯು‍‍ನಿ‍‍ಟ್‍ಗಳನ್ನು ಬಿಡುಗಡೆಗೊಳಿಸಿದ್ದರು.

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಇದೀಗ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಎಲ್ಲಾ ಯು‍‍ನಿ‍‍ಟ್‍ಗಳು ಮಾರಾಟವಾಗಿವೆ. ಇದರಿಂದಾಗಿ ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಎಸ್‍ಯುವಿಯ ಬುಕ್ಕಿಂಗ್ ಸ್ವೀಕಿರಿಸುವುದನ್ನು ನಿಲ್ಲಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಮೊದಲ ಬ್ಯಾಚ್‌ನ ಯು‍‍ನಿ‍‍ಟ್‍ಗಳು ಮಾರಾಟವಾಗಿರುವುದರಿಂದ ಎರಡನೇ ಬ್ಯಾಚ್ ಆಮದುಮಾಡಿಕೊಳ್ಳಲಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಎರಡನೇ ಬ್ಯಾಚ್‌ನಲ್ಲಿ 2,500 ಯು‍‍ನಿ‍‍ಟ್‍ಗಳನ್ನು ಸಿಬಿಯು ಮಾರ್ಗದ ಮೂಲಕ ಆಮದುಮಾಡಿಕೊಳ್ಳಲಿದೆ.

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಈ ಹೊಸ ಟಿ-ರಾಕ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಎಸ್‍‍ಯುವಿಯು ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಈ ಎಸ್‍‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍‍ಟೇಕ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಈ ಎಸ್‍‍ಯುವಿಯ ಮುಂಭಾಗದಲ್ಲಿ ಎಲ್‍ಇ‍ಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್‍ ಲೈಟ್‍‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍‍ಗಳನ್ನು ಹೊಂದಿದೆ.

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಟಿ-ರಾಕ್ ಎಸ್‍‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 148 ಬಿ‍ಹೆಚ್‍ಪಿ ಪವರ್ ಮತ್ತು 250 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ನೀಡಲಾಗಿದೆ.

ಬಹುಬೇಡಿಕೆ ಪಡೆದುಕೊಂಡ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಸೋಲ್ಡ್ ಔಟ್

ಈ ಎಸ್‍ಯುವಿ ದೇಶಿಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಸ್ಕೋಡಾ ಕರೋಕ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡಲಿದೆ. ಫೋಕ್ಸ್‌ವ್ಯಾಗನ್‍ನ ಹೊಸ ಟಿ-ರಾಕ್ ಮಾದರಿಯು ಮಿಡ್ ಎಸ್‍‍ಯುವಿ ಸೆಗ್‍‍ಮೆಂಟ್‍‍ ಆಗಿದೆ.

Most Read Articles

Kannada
English summary
Volkswagen T-Roc Sold Out In India; Bookings Closed. Read In Kannada.
Story first published: Wednesday, September 9, 2020, 17:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X