ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಬಿಡುಗಡೆಗೊಂಡಿದ್ದ ಟಿ-ರಾಕ್ ಎಸ್‌ಯುವಿ ಕಾರನ್ನು ಕರೋನಾ ವೈರಸ್ ಹಿನ್ನಲೆಯಲ್ಲಿ ವಿತರಣೆಯನ್ನು ಬಂದ್ ಮಾಡಿದ್ದ ಫೋಕ್ಸ್‌ವ್ಯಾಗನ್ ಕಂಪನಿಯು ಇದೀಗ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವಿತರಣೆಯನ್ನು ಪುನಾರಂಭಿಸಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಹೊಸ ಟಿ-ರಾಕ್ ಬಿಡುಗಡೆಗೊಂಡ ನಂತರ ಎರಡನೇ ದಿನಕ್ಕೆ ಲಾಕ್‌ಡೌನ್ ವಿಧಿಸಿದ್ದರಿಂದ ಕಾರಿನ ವಿತರಣೆ ಮುಂದೂಡಿಕೆ ಮಾಡುತ್ತಲೇ ಬಂದಿದ್ದ ಫೋಕ್ಸ್‌ವ್ಯಾಗನ್ ಕಂಪನಿಯು ಇದೀಗ ಅಂತಿಮವಾಗಿ ವಿತರಣೆಯನ್ನು ಪುನಾರಂಭಿಸಿದ್ದು, ಆಯ್ದ ಕಾರು ಮಾರಾಟ ಮಳಿಗೆಗಳಲ್ಲಿ ಮಾತ್ರವೇ ಹೊಸ ಕಾರಿನ ವಿತರಣೆಗೆ ಚಾಲನೆ ನೀಡಲಾಗಿದೆ. ಸದ್ಯ ದೇಶದ ಪ್ರಮುಖ ನಗರಗಳಲ್ಲಿ ಎರಡನೇ ಬಾರಿಗೆ ಲಾಕ್‌ಡೌನ್ ವಿಧಿಸಿರುವುದರಿಂದ ಕಾರು ಮಾರಾಟಕ್ಕೆ ಬ್ರೇಕ್ ಹಾಕಲಾಗಿದ್ದು, ಕೆಲವು ಕಡೆಗಳಲ್ಲಿ ಆನ್‌ಲೈನ್ ವಹಿವಾಟು ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಟಿ-ರಾಕ್ ಕಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಸದ್ಯ ಭಾರತದಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.19.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಹೊಸ ಕಾರು ಒಂದೇ ಒಂದು ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯ ಮಾರ್ಡನ್ ಡಿಸೈನ್ ಪ್ರೇರಣೆ ಹೊಂದಿರುವ ಟಿ-ರಾಕ್ ಕಾರು ಯುರೋಪಿನ್ ಮಾರುಕಟ್ಟೆಗಳಲ್ಲಿ ಅತಿ ಹೆಚ್ಚು ಬೇಡಿಕೆಯುಳ್ಳ ಎಸ್‌ಯುವಿ ಕಾರು ಮಾದರಿಗಳಲ್ಲಿ ಮುಂಚೂಣಿಯಲ್ಲಿದ್ದು, ಇದೀಗ ದೇಶಿಯ ಮಾರುಕಟ್ಟೆಗೂ ಲಗ್ಗೆಯಿಡುವ ಮೂಲಕ ಐಷಾರಾಮಿ ಫೀಚರ್ಸ್ ಇಷ್ಟಪಡುವ ಎಸ್‌ಯುವಿ ಪ್ರಿಯರ ಆಕರ್ಷಣೆ ಕಾರಣವಾಗಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಈಗಾಗಲೇ ಹೊಸ ಕಾರು ಖರೀದಿಗಾಗಿ ಸುಮಾರು 2,500ಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಕೇವಲ ಒಂದೇ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿರುವ ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಇನ್ನು ಟಿ-ರಾಕ್ ಕಾರು ದುಬಾರಿ ಬೆಲೆಗೆ ತಕ್ಕಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಆಕರ್ಷಕ ಮುಂಭಾಗದ ಗ್ರಿಲ್ ಜೊತೆಗೆ ಫೋಕ್ಸ್‌ವ್ಯಾಗನ್ ಲೊಗೊ, ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಕಾರ್ನರಿಂಗ್ ಲೈಟ್ಸ್, ಎಲ್ಇಡಿ ಫಾಗ್ ಲ್ಯಾಂಪ್ಸ್ ಹೊಂದಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಹಾಗೆಯೇ ಹಲವಾರು ಸ್ಪೋರ್ಟಿ ಫೀಚರ್ಸ್‌ಗಳನ್ನು ಹೊಂದಿರುವ ಟಿ-ರಾಕ್ ಕಾರಿನಲ್ಲಿ 17-ಇಂಚಿನ ಅಲಾಯ್ ವೀಲ್ಹ್, ಆಕರ್ಷಕವಾದ ವೀಲ್ಹ್ ಆರ್ಚ್, ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಟೈಲಿಷ್ ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್‌ಗಳು ಗಮನಸೆಳೆಯಲಿದ್ದು, ಕಾರಿನ ಒಳಭಾಗದ ಫೀಚರ್ಸ್‌ಗಳ ಸಹ ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಹೊಸ ಕಾರಿನಲ್ಲಿ ವರ್ಚುವಲ್ ಕುಕ್‌ಪಿಟ್ ಜೋಡಿಸಲಾಗಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್‍ಟೈನ್‌ಮೆಂಟ್ ಸಿಸ್ಟಂ, ಅತ್ಯುತ್ತಮ ಲೆದರ್ ಆಸನಗಳು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, ಕೀ ಲೆಸ್ ಎಂಟ್ರಿ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಅಳವಡಿಸಲಾಗಿದೆ.

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ 6-ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಜೊತೆಗೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಟಿ-ರಾಕ್ ಎಸ್‌ಯುವಿ ಕಾರಿನ ವಿತರಣೆಯನ್ನು ಆರಂಭಿಸಿದ ಫೋಕ್ಸ್‌ವ್ಯಾಗನ್

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಟಿಎಸ್ಐ(ಇವೊ) ಪೆಟ್ರೋಲ್ ಎಂಜಿನ್ ಹೊಂದಿರುವ ಟಿ-ರಾಕ್ ಕಾರು 7-ಸ್ಪೀಡ್ ಡಿಎಸ್‌ಜಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 148-ಬಿಎಚ್‌ಪಿ ಮತ್ತು 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಪ್ರತಿ ಗಂಟೆಗೆ ಗರಿಷ್ಠ 204 ಕಿ.ಮೀ ಟಾಪ್ ಸ್ಪೀಡ್‌ ಪಡೆದುಕೊಂಡಿದೆ.

More from DriveSpark

Article Published On: Thursday, July 16, 2020, 17:49 [IST]
English summary
Volkswagen T-Roc Deliveries Commence In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+