ಬಹುನೀರಿಕ್ಷಿತ ಫೋಕ್ಸ್‌ವ್ಯಾಗನ್ ಟಿ-ರಾಕ್ ಖರೀದಿಗೆ ಅಧಿಕೃತ ಬುಕ್ಕಿಂಗ್ ಶುರು..!

ಟಿ-ರಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಸಿದ್ದತೆಯಲ್ಲಿರುವ ಫೋಕ್ಸ್‌ವ್ಯಾಗನ್ ಸಂಸ್ಥೆಯು ಹೊಸ ಕಾರಿನ ಮಾಹಿತಿ ಕುರಿತಾಗಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟಿ-ರಾಕ್ ಹೆಸರು ಸೇರ್ಪಡೆಗೊಳಿಸುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು ಶೀಘ್ರದಲ್ಲೇ ಮಾರುಕಟ್ಟೆಗೆ ಪ್ರವೇಶಿಸುವುದು ಖಚಿತವಾಗಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿರುವ ಹೊಸ ಟಿ-ರಾಕ್ ಕಾರು ಮಾದರಿಯನ್ನು ಫೋಕ್ಸ್‌ವ್ಯಾಗನ್ ಸಂಸ್ಥೆಯು ಮುಂದಿನ ತಿಂಗಳು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳು ಈಗಾಗಲ ಬಹಿರಂಗಗೊಂಡಿದೆ. ಟಿ-ರಾಕ್ ಕಾರು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟಗೊಳ್ಳಲಿದ್ದು, ಟಾಪ್ ಎಂಡ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಗಳಿಗೆ ಹೊಸ ಕಾರು ಪ್ರಬಲ ಪೈಪೋಟಿಯಾಗಲಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಫೋಕ್ಸ್‌ವ್ಯಾಗನ್ ಸಂಸ್ಥೆಯು ಸ್ಕೋಡಾ ಜೊತೆಗೂಡಿ ಕಾರು ಉತ್ಪಾದನೆ ಮಹತ್ವದ ಬದಲಾವಣೆ ತರುತ್ತಿರುವುದಲ್ಲದೇ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿ ಹಲವು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ಉದ್ದೇಶಿಸಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಇದರಲ್ಲಿ ಐಷಾರಾಮಿ ಫೀಚರ್ಸ್ ಹೊಂದಿರುವ ಟಿ-ರಾಕ್ ಕೂಡಾ ಒಂದಾಗಿದ್ದು, ಹೊಸ ಕಾರು ಇದೇ ವರ್ಷ ಮಾರ್ಚ್ ಅಂತ್ಯದೊಳಗೆ ಖರೀದಿಗೆ ಲಭ್ಯವಿರುವುದಾಗಿ ಫೋಕ್ಸ್‌ವ್ಯಾಗನ್ ಸಂಸ್ಥೆಯೇ ಮಾಹಿತಿ ಹಂಚಿಕೊಂಡಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಹೊಸ ಕಾರಿನಲ್ಲಿ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೌಲಭ್ಯಗಳಿವೆ. ಹಾಗೆಯೇ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿವೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದ್ದು, ಕಾರಿನ ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಎಂಜಿನ್ ಸಾಮರ್ಥ್ಯ

ಹೊಸ ಟಿ-ರಾಕ್ ಕಾರು 1.5-ಲೀಟರ್ ಫೋರ್ ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 150-ಬಿಎಚ್‌ಪಿ ಮತ್ತು 340-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಇನ್ನು ಹೊಸ ಟಿ-ರಾಕ್ ಕಾರು ಫೋಕ್ಸ್‌ವ್ಯಾಗನ್ ಸಂಸ್ಥೆಯ ಎಂಕ್ಯೂಬಿ ಕಾರು ಉತ್ಪಾದನಾ ಪ್ಲ್ಯಾ‌ಟ್‌ಫಾರ್ಮ್ ಮೇಲೆ ಅಭಿವೃದ್ದಿಗೊಂಡಿದ್ದು, ಗುಣಮಟ್ಟ ಮತ್ತು ಅತ್ಯಧಿಕ ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಗಮನಸೆಳೆಯಲಿವೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಟಿ-ರಾಕ್ ಬೆಲೆ(ಅಂದಾಜು)

ಬಿಡುಗಡೆಗೆ ಸಿದ್ದವಾಗಿರುವ ಟಿ-ರಾಕ್ ಕಾರು ಐಷಾರಾಮಿ ಫೀಚರ್ಸ್‌ಗಳಿಂದಾಗಿ ತುಸು ದುಬಾರಿಯಾಗಿರಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.17 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.19 ಲಕ್ಷ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಫೋಕ್ಸ್‌ವ್ಯಾಗನ್ ಅಧಿಕೃತ ವೆಬ್‌ಸೈಟ್ ಲಿಸ್ಟ್‌ನಲ್ಲಿ ಸ್ಥಾನ ಪಡೆದ ಹೊಸ ಟಿ-ರಾಕ್

ಇದಲ್ಲದೇ ಹೊಸ ಕಾರನ್ನು ಫೋಕ್ಸ್‌ವ್ಯಾಗನ್ ಸಂಸ್ಥೆಯು ಸಿಬಿಯು ನೀತಿಯಡಿ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಲಿದ್ದು, ಕೇಂದ್ರ ಸರ್ಕಾರವು ನೀಡಿರುವ ಆಮದು ನೀತಿಯಲ್ಲಿನ ಕೆಲವು ವಿನಾಯ್ತಿಗಳು ಕಾರು ಉತ್ಪಾದನಾ ಸಂಸ್ಥೆಗಳಿಗೆ ಭರ್ಜರಿ ಲಾಭ ತಂದುಕೊಡಲಿದೆ.

Most Read Articles

Kannada
English summary
German car maker, Volkswagen has listed T-Roc SUV on India website. The carmaker has already started accepting pre-bookings for the car.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X