ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ದೇಶಿಯ ಮಾರುಕಟ್ಟೆಯಲ್ಲಿ ಕಾರು ಮಾರಾಟ ಭಾರೀ ಬದಲಾವಣೆ ಪರಿಚಯಿಸುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಟಿ-ರಾಕ್ ನಂತರ ಟೈಗನ್ ಕಾರು ಬಿಡುಗಡೆಗೆ ಸಿದ್ದತೆ ನಡೆಸಿದೆ.

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾರು ಅಭಿವೃದ್ದಿ ಯೋಜನೆ ಅಡಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇವುಗಳಲ್ಲಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕೂಡಾ ಒಂದಾಗಿದ್ದು, ಬಿಡುಗಡೆಗೂ ಮುನ್ನ ಹೊಸ ಕಾರಿನ ಕೆಲವು ಪ್ರಮುಖ ತಾಂತ್ರಿಕ ಮಾಹಿತಿಗಳು ಲಭ್ಯವಾಗಿವೆ.

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಟೈಗನ್ ಎಸ್‍‍ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಎಂಕ್ಯೂಬಿ ಎ0 ಪ್ಲಾಟ್‍ಫಾರ್ಮ್‌ ಅಡಿಯಲ್ಲಿ ಈ ಕಾರು ಅಭಿವೃದ್ದಿಗೊಳ್ಳಲಿದೆ.

MOST READ: ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಎಲೆಕ್ಟ್ರಿಕ್ ಕಾರುಗಳಿವು..

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಸದ್ಯ ಅನಾವರಣಗೊಂಡಿರುವ ಟೈಗನ್ ಎಸ್‍‍ಯುವಿಯನ್ನು ಕಾನ್ಸೆಪ್ಟ್ ಆವೃತ್ತಿ ಎಂದು ಹೇಳಲಾಗಿದ್ದು, ಈ ಎಸ್‍‍ಯುವಿ ಕಾರು ಉತ್ಪಾದನಾ ಆವೃತ್ತಿಯಲ್ಲಿ ಇನ್ನು ಹಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ.

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಮಾದರಿಯು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತಲೂ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಎಲ್‍ಇಡಿ ಟೈಲ್ ಲೈಟ್ ಹಾಗೂ ಎಲ್‍ಇ‍‍ಡಿ ಲೈಟ್ ಬಾರ್‌ಗಳನ್ನು ಹೊಂದುವ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿದೆ.

MOST READ: ಅತಿ ಕಡಿಮೆ ಬೆಲೆಯ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಆಕರ್ಷಕವಾಗಿರುವ ಈ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದೆ.

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿನ್ ಸಾಮರ್ಥ್ಯ

ಹೊಸ ಟೈಗನ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, ನಗರ ಪ್ರದೇಶದಲ್ಲಿನ ಓಡಾಟಕ್ಕೆ ಅನುಕೂಲಕರವಾಗುವಂತೆ ಎಂಜಿನ್ ಆಯ್ಕೆ ನೀಡುತ್ತಿದೆ. ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲೂ ಜೋಡಿಸಲಾಗುತ್ತಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಸುರಕ್ಷತೆ ನೀಡಲಾಗಿದ್ದು, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಸನ್‌ರೂಫ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಸದ್ಯ ಟಿ-ರಾಕ್ ಮಾದರಿಯನ್ನು ಬಿಡುಗಡೆಗೊಳಿಸಿರುವ ಫೋಕ್ಸ್‌ವ್ಯಾಗನ್ ಮುಂಬರುವ ದಿನಗಳಲ್ಲಿ ಕೆಲವು ಉನ್ನತೀಕರಿಸಿದ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ. ತದನಂತರವಷ್ಟೇ 2021ರ ಆರಂಭದಲ್ಲಿ ಟೈಗನ್ ಬಿಡುಗಡೆ ಮಾಡಲಿರುವ ಫೋಕ್ಸ್‌ವ್ಯಾಗನ್, ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.8.50 ಲಕ್ಷದಿಂದ ರೂ.11 ಲಕ್ಷದೊಳಗೆ ನಿಗದಿಪಡಿಸಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಬ್ರೆಝಾ ಮತ್ತು ವೆನ್ಯೂ ಪ್ರತಿಸ್ಪರ್ಧಿ ಫೋಕ್ಸ್‌ವ್ಯಾಗನ್ ಟೈಗನ್ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಫೋಕ್ಸ್‌ವ್ಯಾಗನ್‍ ಕಂಪನಿಯು ಇಂಡಿಯಾ 2.0 ಯೋಜನೆಯಡಿ ಸ್ಕೋಡಾ ಸಹಭಾಗಿತ್ವದೊಂದಿಗೆ ಉತ್ಪಾದನಾ ಯೋಜನೆಗೆ ಚಾಲನೆ ನೀಡುತ್ತಿದ್ದು, ಹೊಸ ಯೋಜನೆಗಾಗಿ ಭಾರತದಲ್ಲಿ ಬರೋಬ್ಬರಿ ರೂ.7,900 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುತ್ತದೆ.

Most Read Articles

Kannada
English summary
Volkswagen Taigun India-Spec Details Revealed: Will Rival The Hyundai Venue. Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X