ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಫೋಕ್ಸ್‌ವ್ಯಾಗನ್ ಸಂಸ್ಥೆಯು ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು. ಶೀಘ್ರದಲ್ಲೇ ಫೋಕ್ಸ್‌ವ್ಯಾಗನ್ ಸಂಸ್ಥೆಯು ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಫೋಕ್ಸ್‌ವ್ಯಾಗನ್ ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಎರಡು ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಾಗಿದೆ. ಇನ್ನು ಕಂಪನಿಯು ತಮ್ಮ ಘಟಕದಲ್ಲಿ ಉತ್ಪಾದನೆಯನ್ನು ಪುನರಾರಂಭಿಸಿದೆ. ವೋಕ್ಸ್‌ವ್ಯಾಗನ್ ಕಂಪನಿಯು ಈ ವರ್ಷ ಟೈಗನ್ ಎಸ್‍ಯುವಿಯನ್ನು ಬಿಡುಗಡೆಗೊಳಿಸುವುದಿಲ್ಲ. ಮುಂದಿನ ವರ್ಷದಲ್ಲಿ ಆರಂಭದಲ್ಲಿ ಈ ಟ್ವಿಗನ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಈ ಹೊಸ ಟೈಗನ್ ಎಸ್‍ಯುವಿಯು ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಹೊಂದಿರುವುದಿಲ್ಲ. ಈ ಎಸ್‍ಯುವಿಯು ಕೇವಲ 2ಡಬ್ಲ್ಯೂಡಿ ಆಯ್ಕೆಯನ್ನು ಮಾತ್ರ ಹೊಂದಿರುತ್ತದೆ.

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಈ ಎಸ್‍ಯುವಿಯು 1.0 ಲೀಟರ್ ಟಿಎಸ್‌ಐ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿರಲಿದೆ. ಈ ಎಂಜಿನ್ ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ ನೊಂದಿಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ.

MOST READ: ಡೀಲರ್ ಬಳಿ ಕಾಣಿಸಿಕೊಂಡ ಹೊಸ ಸ್ಕೋಡಾ ಸೂಪರ್ಬ್ ಕಾರು

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಇದರೊಂದಿಗೆ ಟೈಗನ್ ಕಾರಿನಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅಳವಡಿಸಲಿದೆ. ಈ ಎಂಜಿನ್ 5-ಸ್ಪಿಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 130-ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸುತ್ತದೆ. ಈ ಎಸ್‍ಯುವಿಯನ್ನು ಡೀಸೆಲ್ ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸುವುದಿಲ್ಲ.

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಈ ಮಧ್ಯಮ ಗಾತ್ರದ ಎಸ್‍‍ಯುವಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದೆ.

MOST READ: ಖಚಿತವಾಗದ ಬಹುನಿರೀಕ್ಷಿತ ಜಿಮ್ನಿ ಎಸ್‍ಯುವಿಯ ಬಿಡುಗಡೆ

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಈ ಹೊಸ ಎಸ್‍ಯುವಿಯು ಫೋಕ್ಸ್‌ವ್ಯಾಗನ್‍‍ನಲ್ಲಿರುವಂತಹ ಡಿಸೈನ್ ಫೀಚರ್‍‍ಗಳನ್ನು ಹೊಂದಿದೆ. ಈ ಫೀಚರ್‍‍ಗಳಲ್ಲಿ ಎಲ್‍ಇಡಿ ಟೇಲ್ ಲೈಟ್ ಹಾಗೂ ಎಲ್‍ಇ‍‍ಡಿ ಲೈಟ್ ಬಾರ್‍‍ಗಳು ಸೇರಿವೆ.

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಆಕರ್ಷಕವಾಗಿರುವ ಈ ಎಸ್‍ಯುವಿಯ ಇಂಟಿರಿಯರ್ ಅಡ್ವಾನ್ಸ್ ಟೆಕ್ನಿಕಲ್ ಫೀಚರ್‍‍ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಹೊಸ ಟೈಗನ್ ಎಸ್‍‍ಯುವಿ ಬಿಡುಗಡೆಯಾದ ಬಳಿಕ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಹಾಗೂ ಎಂಜಿ ಹೆಕ್ಟರ್ ಎಸ್‍ಯುವಿಗಳಿಗೆ ಪೈಪೋಟಿ ನೀಡಲಿದೆ, ಹೊಸ ಎಂಕ್ಯೂಬಿ ಎ0 ಪ್ಲಾಟ್‍‍ಫಾರಂನಡಿಯಲ್ಲಿ ಈ ಕಾರು ಅಭಿವೃದ್ದಿಪಡಿಸಲಾಗುತ್ತದೆ.

ತಡವಾಗಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ ಬಿಡುಗಡೆ

ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಈ ಟೈಗಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ.

More from DriveSpark

Article Published On: Thursday, May 21, 2020, 17:44 [IST]
English summary
Volkswagen Taigun (Seltos, Creta Rival) Launch in early 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+