ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆಗೊಳಿಸಿದ ಫೋಕ್ಸ್‌ವ್ಯಾಗನ್
ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಅಭಿವೃದ್ದಿ ಪಡಿಸುತ್ತಿದೆ. ಇದೀಗ ಈ ಕಾಂಪ್ಯಾಕ್ಟ್ ಎಸ್‍ಯುವಿಯ ಮೊದಲ ಟೀಸರ್ ಚಿತ್ರವನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಬಿಡುಗಡೆಗೊಳಿಸಿದೆ.

ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯು ಟಿಗ್ವಾನ್ ಎಸ್‍ಯುವಿಯ ಕೆಳಗಿನ ಸ್ಥಾನದಲ್ಲಿರುತ್ತದೆ. ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು 2020ರ ಅಕ್ಟೋಬರ್ 13 ರಂದು ಅಧಿಕೃತವಾಗಿ ಅನಾವರಣಗೊಳಿಸಲಿದೆ. ಇನ್ನು ಕಂಪನಿಯು ಬಿಡುಗಡೆಗೊಳಿಸಿದ ಟೀಸರ್ ಚಿತ್ರದಲ್ಲಿ ವಿನ್ಯಾಸದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ.

ಟೀಸರ್ ಚಿತ್ರದಲ್ಲಿ ತೆಳುವಾದ ಎಲ್ಇಡಿ ಲೈಟ್ ಗಳನ್ನು ಹೊಂದಿರುವ ಹೆಡ್‌ಲೈಟ್‌ಗಳು ಮತ್ತು ಕಾರಿನ ಮೇಲಿನ ಭಾಗದ ಸಿಲೂಯೆಟ್ ಟಿ-ಕ್ರಾಸ್ ಮಾದರಿಗಿಂತ ಭಿನ್ನವಾಗಿ ಕಾಣುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಕಾಂಪ್ಯಾಕ್ಟ್ ಎಸ್‍ಯುವಿಗೆ ತಾರೆಕ್ ಎಂಬ ನೀಡಲಾಗಿದೆ. ತಾರೆಕ್ ಯೋಜನೆಯ ಭಾಗವಾಗಿ ಬ್ರ್ಯಾಂಡ್ ಮೊದಲ ಎಸ್‍ಯುವಿಯಾಗಿ ಇದನ್ನು ಉತ್ಪಾದನೆ ಮಾಡುತ್ತಿದೆ.

ಅರ್ಜೆಂಟೀನಾದ ಪ್ಯಾಚೆಕೊದ ಕೈಗಾರಿಕಾ ಕೇಂದ್ರದಲ್ಲಿ ಸುಮಾರು 650 ಮಿಲಿಯನ್ ಡಾಲರ್ ವೆಚ್ಚದಲ್ಲಿ ತಾರೆಕ್ ಯೋಜನೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಟಿ-ಕ್ರಾಸ್‌ನಂತೆಯೇ ಜಾಗತಿಕ ಎಮ್‌ಕ್ಯೂಬಿ ಪ್ಲಾಟ್‌ಫಾರ್ಮ್ ಅನ್ನು ಅಭಿವೃದ್ದಿ ಪಡಿಸಲಾಗುತ್ತಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್

ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯನ್ನು ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತು. ಟಿಗ್ವಾನ್ ಮಾದರಿಯು ಫೋಕ್ಸ್‌ವ್ಯಾಗನ್ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಟಿಗ್ವಾನ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2007ರಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿದರು. ಹಿಂದಿನ ಮಾದರಿ ಟಿಗ್ವಾನ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಟಿಗ್ವಾನ್ ಎಸ್‍ಯುವಿಯಲ್ಲಿ 2.0-ಲೀಟರ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಉತ್ಪಾದಿಸುತ್ತದೆ. ಇನ್ನು ಪ್ಲಗ್-ಇನ್ ಹೈಬ್ರಿಡ್ ರೂಪಾಂತರವು 241 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ.

ಜರ್ಮನ್ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಆರಂಭದಲ್ಲಿ ಉತ್ತರ ಅಮೆರಿಕದ ಮಾರುಕಟ್ಟೆಗಾಗಿ ತಯಾರಿಸಲಾಗುತ್ತದೆ. ನಂತರದಲ್ಲಿ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಭಾರತೀಯ ಮಾರುಕಟ್ಟೆಯಲ್ಲಿಯು ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








