ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಕರೋನಾ ವೈರಸ್ ಭೀತಿಯಿಂದಾಗಿ ಸ್ವಂತ ವಾಹನ ಬಳಕೆಯು ಹೆಚ್ಚುತ್ತಿರುವುದರಿಂದ ಆಟೋ ಕಂಪನಿಗಳಿಗೆ ವರವಾಗಿ ಪರಿಣಮಿಸಿದ್ದು, ಹೊಸ ವಾಹನಗಳ ಮಾರಾಟ ಜೊತೆ ಜೊತೆಗೆ ಸೆಕೆಂಡ್ ಹ್ಯಾಂಡ್ ವಾಹನ ಮಾರಾಟದ ಮೇಲೂ ಹೆಚ್ಚು ಗಮನಹರಿಸಿವೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಹೊಸ ವಾಹನಗಳ ಜೊತೆಗೆ ಬಳಕೆ ಮಾಡಿದ ವಾಹನಗಳಿಗೂ ಹೆಚ್ಚು ಬೇಡಿಕೆ ಬರುತ್ತಿರುವ ಹಿನ್ನಲೆಯಲ್ಲಿ ಅಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿರುವ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಉದ್ಯಮವನ್ನು ವ್ಯವಸ್ಥಿತವಾಗಿ ಮಾರಾಟ ಮಾಡುವ ಗುರಿ ಯೋಜನೆ ಹೊಂದಿರುವ ಹಲವಾರು ಆಟೋ ಕಂಪನಿಯು ಹೊಸ ಉದ್ಯಮದ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಜರ್ಮನ್ ಕಾರು ತಯಾರಿಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಕೂಡಾ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳನ್ನು ಹಂತ-ಹಂತವಾಗಿ ದೇಶದ ಪ್ರಮುಖ ನಗರಗಳಿಗೆ ವಿಸ್ತರಣೆ ಮಾಡುತ್ತಿದೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ದಾಸ್ ವೆಲ್ಟ್ ಆಟೋ 3.0 ಮಳಿಗೆಗಳ ಮೂಲಕ ಒಂದೇ ಸೂರಿನಡಿ ವಿವಿಧ ಬ್ರಾಂಡ್‌ಗಳ ಸೆಕೆಂಡ್ ಹ್ಯಾಂಡ್ ಕಾರುಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಅತ್ಯಂತ ವ್ಯವಸ್ಥಿತವಾಗಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಮತ್ತು ಮರುಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಲಾಕ್‌ಡೌನ್‌ಗೂ ಮೊದಲು ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಇದೀಗ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದು, ವೈರಸ್ ಭೀತಿ ಪರಿಣಾಮ ಹೊಸ ವಾಹನಗಳ ಮಾರಾಟ ಪ್ರಮಾಣಕ್ಕಿಂತಲೂ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮರು ಮಾರಾಟ ಪ್ರಮಾಣವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಒಂದೇ ಸೂರಿನಡಿ ವಿವಿಧ ಬ್ರಾಂಡ್ ಕಾರುಗಳನ್ನು ಮಾರಾಟ ಮಾರಾಟ ಮಾಡಲಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಇದಕ್ಕಾಗಿಯೇ ಪ್ರತ್ಯೇಕ ವೆಬ್‌ಸೈಟ್ ತೆರೆದಿದ್ದು, ಇಂಡಿಯನ್ ಬ್ಲ್ಯೂ ಬುಕ್ ಎನ್ನುವ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಆಸಕ್ತ ಗ್ರಾಹಕರ ತಮ್ಮ ಇಷ್ಟದ ವಾಹನಗಳನ್ನು ಖರೀದಿಗೂ ಮುನ್ನ ಟೆಸ್ಟ್ ಡ್ರೈವ್‌ಗೆ ವೆಬ್‌ಸೈಟ್ ಮೂಲಕವೇ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಆಕರ್ಷಕ ಬೆಲೆಗಳಲ್ಲಿ ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡಬಹುದಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಜೊತೆಗೆ ಹೊಸ ಕಾರು ಮಾರಾಟ ಮಾದರಿಯಲ್ಲೇ ಬಳಕೆ ಮಾಡಿದ ಕಾರುಗಳಿಗೂ ವಾರಂಟಿ, ಬ್ಯಾಂಕ್ ಸಾಲ ಸೌಲಭ್ಯ, ಎಕ್ಸ್‌ಚೆಂಜ್ ಆಫರ್ ಮತ್ತು ಆಕ್ಸೆಸರಿಸ್ ಪ್ಯಾಕೇಜ್ ಒದಗಿಸಲಿದ್ದು, ಒಂದೇ ಸೂರಿನಡಿಯಲ್ಲಿ ಬಳಕೆ ಮಾಡಿದ ವಾಹನಗಳನ್ನು ಕೂಡಾ ಆಕರ್ಷಕ ಬೆಲೆಯಲ್ಲಿ ಮರು ಮಾಡಬಹುದಾಗಿದೆ.

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಇದಕ್ಕಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮತ್ತು ಖರೀದಿ ಪ್ರಕ್ರಿಯೆಗಾಗಿ ನುರಿತ ಉದ್ಯೋಗಿಗಳನ್ನು ತಂಡದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟದ ವೇಳೆ ಆಗುವ ಮೋಸದ ವ್ಯವಹಾರಗಳಿಗೆ ಬ್ರೇಕ್ ಹಾಕಲು ಅತ್ಯುತ್ತಮ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ವೈರಸ್ ಭೀತಿ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆ ಹೆಚ್ಚಿಸಿದ ಫೋಕ್ಸ್‌ವ್ಯಾಗನ್

ಸದ್ಯ ಬೆಂಗಳೂರು, ಹೈದ್ರಾಬಾದ್, ಕೊಯಮತ್ತೂರು, ಕೊಚ್ಚಿ ಮತ್ತು ತ್ರಿಶೂರ್ ನಗರಗಳಲ್ಲಿ 105 ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಳಿಗೆಗಳನ್ನು ತೆರೆಯುವ ಯೋಜನೆಯಿದೆ.

Most Read Articles

Kannada
English summary
Volkswagen Updates Pre-Owned Cars Centers In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X