ಎಕ್ಸ್‌ಸಿ40 ಎಲೆಕ್ಟ್ರಿಕ್ ಎಸ್‌ಯುವಿ ಕಾರು ಉತ್ಪಾದನೆಗೆ ಅಧಿಕೃತ ಚಾಲನೆ ನೀಡಿದ ವೊಲ್ವೊ

ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾದ ವೊಲ್ವೊ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ವಿಶೇಷ ತಾಂತ್ರಿಕ ಅಂಶಗಳನ್ನು ಒಳಗೊಂಡಿರುವ ಹೊಸ ಕಾರಿನ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಹೈಬ್ರಿಡ್ ವಾಹನಗಳ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ವೊಲ್ವೊ ಕಂಪನಿಯು 2021ರಿಂದ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಮತ್ತು ಸಾಮಾನ್ಯ ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಿದ್ದು, ಕೇವಲ ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಮಾತ್ರವೇ ಉತ್ಪಾದನೆ ಕೈಗೊಳ್ಳಲು ನಿರ್ಧರಿಸಿದೆ. ಹೀಗಾಗಿ ಹೊಸ ಯೋಜನೆಗಾಗಿ ಸಕಲ ಸಿದ್ದತೆ ನಡೆಸಿರುವ ವೊಲ್ವೊ ಕಂಪನಿಯು ಬೆಲ್ಜಿಯಂನಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಎಕ್ಸ್‌ಸಿ40 ಎಲೆಕ್ಟ್ರಿಕ್ ಎಸ್‌ಯುವಿ ಉತ್ಪಾದನೆಯನ್ನು ಅಧಿಕೃತವಾಗಿ ಆರಂಭಿಸಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಜಾಗತಿಕ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಹೊಸ ಯೋಜನೆಗಳನ್ನು ರೂಪಿಸುತ್ತಿರುವ ವೊಲ್ವೊ ಕಂಪನಿಯು ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಮೂರು ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡಲಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಹೊಸ ಎಲೆಕ್ಟ್ರಿಕ್ ಕಾರುಗಳ ತಾಂತ್ರಿಕ ಅಂಶಗಳ ಕುರಿತಾಗಿ ಗ್ರಾಹಕರ ಅಭಿರುಚಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ಕಂಪನಿಯ ಜನಪ್ರಿಯ ಎಸ್‌ಯುವಿ ಮಾದರಿಯಾದ ಎಕ್ಸ್‌ಸಿ40 ಎಸ್‌ಯುವಿ ಮಾದರಿಯನ್ನು ಎಲೆಕ್ಟ್ರಿಕ್ ಮಾದರಿಯಲ್ಲಿ ಪರಿಚಯಿಸಲಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಎಕ್ಸ್‌ಸಿ40 ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 150kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 78kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಅತ್ಯುತ್ತಮ ಮೈಲೇಜ್‌ನೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

150kW ಎಲೆಕ್ಟ್ರಿಕ್ ಮೋಟಾರ್‌ ಸೌಲಭ್ಯದೊಂದಿಗೆ 402-ಬಿಎಚ್‌ಪಿ ಮತ್ತು 659-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿರುವ ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಳ್ಳಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಎಕ್ಸ್‌ಸಿ40 ಇವಿ ಕಾರು 78kWh ಲೀಥಿಯಂ ಅಯಾನ್ ಬ್ಯಾಟರಿಯೊಂದಿಗೆ ಗರಿಷ್ಠ 400ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಳ್ಳಲಿದ್ದು, ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ರೀಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಿರುವ ವೊಲ್ವೊ ಕಂಪನಿಯು ಕಾರು ಬಿಡುಗಡೆಯ ಹೊತ್ತಿಗೆ ತಾಂತ್ರಿಕ ಅಂಶಗಳಲ್ಲಿ ಮತ್ತಷ್ಟು ಬದಲಾವಣೆ ಮಾಡುವ ಸಾಧ್ಯತೆಗಳಿದ್ದು, ಹೊಸ ಕಾರಿನ ಹೊರಭಾಗದ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ಸೇರಿದಂತೆ ಹಲವಾರು ಫೀಚರ್ಸ್‌ಗಳನ್ನು ಸಾಮಾನ್ಯ ಕಾರು ಮಾದರಿಯಂತೆ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಉತ್ಪಾದನೆಗೆ ಸಿಕ್ತು ಅಧಿಕೃತ ಚಾಲನೆ

ತದನಂತರ ವಿವಿಧ ಕಾರು ಮಾದರಿಯಲ್ಲೂ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲಿದ್ದು, ಎಕ್ಸ್‌ಸಿ40 ಇವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 40 ರೂ.45 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ.

Most Read Articles

Kannada
Read more on ವೊಲ್ವೊ volvo
English summary
Volvo Begins Production of its first Electric XC40. Read in Kannada.
Story first published: Saturday, October 3, 2020, 12:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X