ಕೋವಿಡ್ 19: ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಕರೋನಾ ವೈರಸ್ ವಿರುದ್ಧ ಹೋರಾಟಕ್ಕೆ ನಿರಂತರವಾಗಿ ಸಹಕಾರ ನೀಡುತ್ತಿರುವ ವೊಲ್ವೊ ಐರಿಷ್ ಕರ್ಮಿಷಿಲ್ ವೆಹಿಕಲ್ ಕಂಪನಿಯು ಇದುವರೆಗೆ ಲಕ್ಷಾಂತರ ಜನರ ಹಸಿವು ನೀಗಿಸಿದ್ದು, ವೈರಸ್ ವಿರುದ್ಧ ಹೋರಾಡಲು ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ವಿತರಣೆ ಮಾಡಿದೆ.

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಲಾಕ್‌ಡೌನ್ ವೇಳೆ ಉದ್ಯೋಗ ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರದಾಟುತ್ತಿದ್ದ ಕೂಲಿ ಕಾರ್ಮಿಕರ ನೆರವಿಗೆ ಧಾವಿಸಿದ ವೊಲ್ವೊ ಐರಿಷ್ ಕಂಪನಿಯು ವಿವಿಧ ಸಂಘ-ಸಂಸ್ಥೆಗಳ ಜೊತೆಗೂಡಿ ಇದುವರೆಗೆ 1.20 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಣೆ ಮಾಡಿದ್ದು, ಇದರ ಜೊತೆಗೆ 4,500 ಫೇಸ್ ಮಾಸ್ಕ್‌ಗಳ ಪ್ಯಾಕೇಟ್‌ಗಳನ್ನು ಸಹ ವಿತರಿಸಿ ವೈರಸ್ ಹರಡುವಿಕೆಯನ್ನು ತಡೆಯಲು ಸಹಕರಿಸಿದೆ.

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಹಾಗೆಯೇ ಮಧ್ಯಪ್ರದೇಶ ಮೂಲದ ಆಕ್ಷನ್ ಏರ್ ಎನ್‌ಜಿಒ ಸಂಸ್ಥೆಯೊಂದರ ಜೊತೆಗೂಡಿ ಸುಮಾರು 500 ಕಟ್ಟಡ ಕಾರ್ಮಿಕರಿಗೆ ಸ್ಯಾಟಿಟೈಜ್ ಕಿಟ್‌ಗಳನ್ನು ವಿತರಣೆ ಮಾಡಲಾಗಿದ್ದು, ಸುಮಾರು 1,600 ಸರ್ಕಾರಿ ವಾಹನಗಳನ್ನು ನಂಜು ನಿರೋಧಕದಿಂದ ಸ್ವಚ್ಛಗೊಳಿಸಿದೆ.

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಈ ಮೂಲಕ ಲಾಕ್‌ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಜನರಿಗೆ ಸಹಕಾರಿಯಾಗಿರುವ ವೊಲ್ವೊ ಐರಿಷ್ ಕಂಪನಿಯು ತನ್ನ ನೆಚ್ಚಿನ ಗ್ರಾಹಕರಿಗೆ ವಿವಿಧ ಮಾದರಿಯ ಪರಿಹಾರ ಕಾರ್ಯಕ್ರಮಗಳನ್ನು ಘೋಷಿಸಿದ್ದು, ವಾರಂಟಿ ಅವಧಿಯನ್ನು ಮುಂದಿನ 2 ತಿಂಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.

MOST READ: ಲಾಕ್‌ಡೌನ್ ಎಫೆಕ್ಟ್: ನಿಯಮ ಉಲ್ಲಂಘಿಸಿದ ಜಿಲ್ಲಾಧಿಕಾರಿ ಕಾರನ್ನೇ ತಡೆದ ಕಾನ್ಸ್‌ಸ್ಟೆಬಲ್..!

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಇನ್ನು ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ.

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಇದರಿಂದ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸುತ್ತಿವೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಹಸಿದವರಿಗೆ ಅನ್ನ, ವೈದ್ಯಕೀಯ ಸೌಲಭ್ಯಗಳನ್ನು ನೀಡಿದ ವೊಲ್ವೊ ಐರಿಷ್

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

Most Read Articles

Kannada
Read more on ವೋಲ್ವೊ volvo
English summary
Volvo Eicher Commercial Vehicles Announce Multiple Aid Measures To Fight Covid-19 Pandemic. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X