ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ವೊಲ್ವೊ
ವೊಲ್ವೊ ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಎಕ್ಸ್‌ಸಿ40 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ವಿಶೇಷ ತಾಂತ್ರಿಕ ಅಂಶಗಳನ್ನು ಒಳಗೊಂಡಿರುವ ಹೊಸ ಕಾರಿನ ಉತ್ಪಾದನೆಗೆ ಈಗಾಗಲೇ ಚಾಲನೆ ಕೂಡಾ ನೀಡಲಾಗಿದೆ.

ಹೈಬ್ರಿಡ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಸಾಧಿಸಿರುವ ವೊಲ್ವೊ ಕಂಪನಿಯು 2021ರಿಂದ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಮತ್ತು ಸಾಮಾನ್ಯ ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಿದ್ದು, ಕೇವಲ ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಮಾತ್ರವೇ ಉತ್ಪಾದನೆ ಕೈಗೊಳ್ಳಲು ನಿರ್ಧರಿಸಿದೆ. ಹೀಗಾಗಿ ಹೊಸ ಯೋಜನೆಗಾಗಿ ಸಕಲ ಸಿದ್ದತೆ ನಡೆಸಿರುವ ವೊಲ್ವೊ ಕಂಪನಿಯು ಆರಂಭಿಕವಾಗಿ ಎಕ್ಸ್‌ಸಿ40 ಇವಿ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಶೀಘ್ರದಲ್ಲೇ ರಸ್ತೆಗಿಳಿಯಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಹೊಸ ಯೋಜನೆಗಳನ್ನು ರೂಪಿಸುತ್ತಿರುವ ವೊಲ್ವೊ ಕಂಪನಿಯು ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಮೂರು ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಎಕ್ಸ್‌ಸಿ40 ಎಲೆಕ್ಟ್ರಿಕ್ ಮಾದರಿಯನ್ನು 2021ರ ಮಧ್ಯಂತರದಲ್ಲಿ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದೆ.

ಹೊಸ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಯ ಕುರಿತಂತೆ ಎಸ್60 ಕಾರು ಮಾದರಿಯ ಅನಾವರಣ ಸಂದರ್ಭದಲ್ಲಿ ಖಚಿತಪಡಿಸಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 150kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 78kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

150kW ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ 402-ಬಿಎಚ್‌ಪಿ ಮತ್ತು 659-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿರುವ ಎಕ್ಸ್‌ಸಿ40 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಳ್ಳಲಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

78kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಫಾಸ್ಟ್ ಚಾರ್ಜರ್ ಮೂಲಕ ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ರೀಚಾರ್ಜ್ ಮಾಡಬಹುದಾಗಿದ್ದು, ಹಲವಾರು ಐಷಾರಾಮಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.


Click it and Unblock the Notifications








