Just In
- 1 min ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- 40 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರನ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
Don't Miss!
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೊಲ್ವೊ ಮೊದಲ ಎಕ್ಸ್ಸಿ40 ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಹಿತಿ ಬಹಿರಂಗ
ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾದ ವೊಲ್ವೊ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದ್ದು, ವಿಶೇಷ ತಾಂತ್ರಿಕ ಅಂಶಗಳನ್ನು ಒಳಗೊಂಡಿರುವ ಹೊಸ ಕಾರಿನ ಉತ್ಪಾದನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.
ಹೈಬ್ರಿಡ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಸಾಧಿಸಿರುವ ವೊಲ್ವೊ ಕಂಪನಿಯು 2021ರಿಂದ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಮತ್ತು ಸಾಮಾನ್ಯ ಪೆಟ್ರೋಲ್ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಿದ್ದು, ಕೇವಲ ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಮಾತ್ರವೇ ಉತ್ಪಾದನೆ ಕೈಗೊಳ್ಳಲು ನಿರ್ಧರಿಸಿದೆ. ಹೀಗಾಗಿ ಹೊಸ ಯೋಜನೆಗಾಗಿ ಸಕಲ ಸಿದ್ದತೆ ನಡೆಸಿರುವ ವೊಲ್ವೊ ಕಂಪನಿಯು ಬೆಲ್ಜಿಯಂನಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಎಕ್ಸ್ಸಿ40 ಎಲೆಕ್ಟ್ರಿಕ್ ಎಸ್ಯುವಿ ಉತ್ಪಾದನೆಯನ್ನು ಅಧಿಕೃತವಾಗಿ ಆರಂಭಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಹೊಸ ಯೋಜನೆಗಳನ್ನು ರೂಪಿಸುತ್ತಿರುವ ವೊಲ್ವೊ ಕಂಪನಿಯು ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಮೂರು ಎಲೆಕ್ಟ್ರಿಕ್ ಎಸ್ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು 2021ರ ಜುಲೈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಖತಿತಪಡಿಸಿದೆ.
ಹೊಸ ಎಲೆಕ್ಟ್ರಿಕ್ ಕಾರುಗಳ ತಾಂತ್ರಿಕ ಅಂಶಗಳ ಕುರಿತಾಗಿ ಗ್ರಾಹಕರ ಅಭಿರುಚಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ಕಂಪನಿಯ ಜನಪ್ರಿಯ ಎಸ್ಯುವಿ ಮಾದರಿಯಾದ ಎಕ್ಸ್ಸಿ40 ಎಸ್ಯುವಿ ಮಾದರಿಯನ್ನು ಎಲೆಕ್ಟ್ರಿಕ್ ಮಾದರಿಯಲ್ಲಿ ಪರಿಚಯಿಸಲಿದೆ.
ಎಕ್ಸ್ಸಿ40 ಎಲೆಕ್ಟ್ರಿಕ್ ಎಸ್ಯುವಿ ಆವೃತ್ತಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 150kW ಎಲೆಕ್ಟ್ರಿಕ್ ಮೋಟಾರ್ನೊಂದಿಗೆ 78kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಅತ್ಯುತ್ತಮ ಮೈಲೇಜ್ನೊಂದಿಗೆ ಪರ್ಫಾಮೆನ್ಸ್ನಲ್ಲೂ ಗಮನಸೆಳೆಯಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
150kW ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ 402-ಬಿಎಚ್ಪಿ ಮತ್ತು 659-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿರುವ ಎಕ್ಸ್ಸಿ40 ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಳ್ಳಲಿದೆ.
ಎಕ್ಸ್ಸಿ40 ಇವಿ ಕಾರು 78kWh ಲೀಥಿಯಂ ಅಯಾನ್ ಬ್ಯಾಟರಿಯೊಂದಿಗೆ ಗರಿಷ್ಠ 400ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಳ್ಳಲಿದ್ದು, ಕೇವಲ 40 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ರೀಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು
ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಿರುವ ವೊಲ್ವೊ ಕಂಪನಿಯು ಕಾರು ಬಿಡುಗಡೆಯ ಹೊತ್ತಿಗೆ ತಾಂತ್ರಿಕ ಅಂಶಗಳಲ್ಲಿ ಮತ್ತಷ್ಟು ಬದಲಾವಣೆ ಮಾಡುವ ಸಾಧ್ಯತೆಗಳಿದ್ದು, ಹೊಸ ಕಾರಿನ ಹೊರಭಾಗದ ಫೀಚರ್ಸ್ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ಸೇರಿದಂತೆ ಹಲವಾರು ಫೀಚರ್ಸ್ಗಳನ್ನು ಸಾಮಾನ್ಯ ಕಾರು ಮಾದರಿಯಂತೆ ನೀಡಲಾಗಿದೆ.
ತದನಂತರ ವಿವಿಧ ಕಾರು ಮಾದರಿಯಲ್ಲೂ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡಲಿದ್ದು, ಎಕ್ಸ್ಸಿ40 ಇವಿ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 40 ಲಕ್ಷದಿಂದ ರೂ.45 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ.