ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಪ್ರಮುಖ ಸಂಗತಿಗಳಿವು
ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ.

ಈ ಇಕ್ಯೂಸಿ ಎಸ್‍ಯುವಿಯು ಭಾರತದಲ್ಲಿ ಈಗಾಗಲೇ ಬಿಡುಗಡೆಯಾಗಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯನ್ನು ಮುಂದೂಡಿದ್ದರು. ಆದರೆ ಶೀಘ್ರದಲ್ಲೇ ಮರ್ಸಿಡಿಸ್ ಬೆಂಝ್ ಕಂಪನಿಯು ಈ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ. ಈ ಹೊಸ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು ಇಲ್ಲಿವೆ.

ಸಿಬಿಯು ಮಾರ್ಗದ ಮೂಲಕ ತರಲಾಗುವುದು
ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಇದರಿಂದ ಈ ಎಸ್‍ಯುವಿಯು ಜಾಗತಿಕ ಮಟ್ಟದ ಗುಣಮಟ್ಟವನ್ನು ಹೊಂದಿರುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಎರಡು ಎಲೆಕ್ಟ್ರಿಕ್ ಮೋಟಾರ್ ಮತ್ತು 4ಡಬ್ಲ್ಯೂಡಿ
ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 407 ಬಿಹೆಚ್‍ಪಿ ಪವರ್ ಮತ್ತು 765ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಪವರ್ ಫುಲ್ ಬ್ಯಾಟರಿ ಮತ್ತು ಉತ್ತಮ ಮೈಲೇಜ್
ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 445-471 ಕಿ.ಮೀಗಳವರೆಗೆ ಚಲಿಸುತ್ತದೆ.

ಇಕ್ಯೂ ಕಾನ್ಸೆಪ್ಟ್ ವಿನ್ಯಾಸ
2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ.ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆ
ಮರ್ಸಿಡಿಸ್ ಬೆಂಝ್ ಕಂಪನಿಯು ಈ ಹೊಸ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.5 ಕೋಟಿಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications








