Just In
- 58 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್‌ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್‌ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮಂಗಳೂರು; ಇಂದಿನಿಂದ ರಂಝಾನ್ ಉಪವಾಸ ಆಚರಣೆ
- Movies
ಕಹಿಯೇ ಹೆಚ್ಚಿದ್ದರು ಸಿಹಿಯಾಗಿ ಯುಗಾದಿ ಶುಭಾಶಯ ಕೋರಿದ ಸಿನಿ ತಾರೆಯರು
- Sports
19 ವರ್ಷದ ಈ ಬ್ಯಾಟ್ಸ್ಮನ್ ಬಾರಿಸಿರೋ 8 ಐಪಿಎಲ್ ಸಿಕ್ಸರ್ ಸಾಮಾನ್ಯದ್ದಲ್ಲ!
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‌ಯುವಿ
ಜಪಾನ್ ಮೂಲದ ಹೋಂಡಾ ಕಂಪನಿಯು ಭಾರತದಲ್ಲಿ ತನ್ನ ಎರಡು ಹೊಸ ಹೈಬ್ರಿಡ್ ವಾಹನಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ. ಈ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ತನ್ನ ಸಿಟಿ ಹೈಬ್ರಿಡ್ ಸೆಡಾನ್ ಮತ್ತು ಹೆಚ್‌ಆರ್-ವಿ ಹೈಬ್ರಿಡ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಿದೆ.

ಇದರಲ್ಲಿ ಹೋಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‌ಯುವಿಯು ದೀಪಾವಳಿ ಹಬ್ಬದ ಬಳಿಕ ಭಾರತದಲ್ಲಿ ಬಿಡುಗಡೆಯಾಗಲಿದ ಎಂದು ವರದಿಗಳಾಗಿದೆ. ಇನ್ನು ಹೋಂಡಾ ಈ ಹೆಚ್‌ಆರ್-ವಿ ಎಸ್‍ಯುವಿಯನ್ನು ಜಪಾನ್‌ನಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತು. ಈ 2021ರ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ. ಜಪಾನ್‌ನಲ್ಲಿ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು ಹೋಂಡಾ ವೆಜೆಲ್ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ.

ಇನ್ನು ಈ ಹೋಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‍ಯುವಿಯು ಜಿ, ಇ: ಹೆಚ್ಇವಿ ಎಕ್ಸ್, ಇ: ಹೆಚ್ಇವಿ ಎಕ್ಸ್, ಇ: ಹೆಚ್ಇವಿ ಝಡ್ ಮತ್ತು ಇ: ಹೆಚ್ಇವಿ ಪ್ಲೇ ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಬಿಡುಗಡೆಯಾಗಲಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಹೋಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರಲ್ಲಿ ಫ್ರಂಟ್ ಗ್ರಿಲ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನಯವಾದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಅಗ್ರೇಸಿವ್ ಫ್ರಂಟ್ ಬಂಪರ್, ಚಿಸೆಲ್ಡ್ ಬಾನೆಟ್ ಮತ್ತು ಸ್ಪೋರ್ಟಿ ಫಾಗ್ ಲ್ಯಾಂಪ್ ಜೋಡಣೆಯೊಂದಿಗೆ ಕೂಪ್ ತರಹದ ಲುಕ್ ಅನ್ನು ಹೊಂದಿದೆ.

ಈ ಎಸ್‍ಯುವಿಯ ಹಿಂಭಾಗದ ಡೋರಿನ ಹ್ಯಾಂಡಲ್‌ಗಳೊಂದಿಗೆ ಕೋನೀಯ ಸಿ-ಪಿಲ್ಲರ್, ಸ್ಲೋಪಿಂಗ್ ರೂಫ್‌ಲೈನ್, ಡ್ಯುಯಲ್-ಟೋನ್ ಮೆಷಿನ್ ಕಟ್ ಅಲಾಯ್ ವ್ಹೀಲ್, ಟರ್ನ್ ಇಂಡಿಕೇಟರ್‌ಗಳೊಂದಿಗೆ ಡ್ಯುಯಲ್ ಟೋನ್ ಒಆರ್‌ವಿಎಂ ಮತ್ತು ಸೈಡ್ ಬಾಡಿ ಕ್ಲಾಡಿಂಗ್‌ನಿಂದ ಅಲಂಕರಿಸಲಾಗಿದೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಇನ್ನು ಹೊಸ ಹೊಂಡಾ ಹೆಚ್‌ಆರ್-ವಿ ಹೈಬ್ರಿಡ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ, ಹೋಂಡಾ ಕನೆಕ್ಟ್, ವೈರ್‌ಲೆಸ್ ಚಾರ್ಜಿಂಗ್, ಹಿಂಭಾಗದ ಎಸಿ ವೆಂಟ್ಸ್, ಪನೋರೊಮಿಕ್ ಸನ್‌ರೂಫ್, ರಿಮೋಟ್ ಬೂಟ್ ಓಪನಿಂಗ್, ಹಿಲ್ ಡಿಸೆಂಟ್ ಮತ್ತು ಹೋಂಡಾ ಸೆನ್ಸಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ.

ಹೊಸ ತಲೆಮಾರಿನ ಹೆಚ್‌ಆರ್-ವಿ ಎಸ್‍ಯುವಿಯಲ್ಲಿ 1.5 ಎಲ್ ಪೆಟ್ರೋಲ್ ಎಂಜಿನ್ ಮತ್ತು ಎರಡು ಎಲೆಕ್ಟ್ರಿಕ್ ಮೋಟರ್‌ಗಳನ್ನು ಒಳಗೊಂಡಿರುವ ಹೋಂಡಾದ ಇ: ಎಚ್‌ಇವಿ ಪವರ್‌ಟ್ರೇನ್‌ನೊಂದಿಗೆ ಬರುತ್ತದೆ. ಇದು ಲಿಥಿಯಂ-ಐಯಾನ್ ಬ್ಯಾಟರಿ ಒಳಗೊಂಡಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹೊಸ ಸ್ಟ್ರಾಂಗ್ ಹೈಬ್ರಿಡ್ ಸಿಸ್ಟಂ 109 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತದೆ. ಇನ್ನು ಈ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು 9.5 ಸೆಕೆಂಡುಗಳಲ್ಲಿ ರಿಂದ 0 ದಿಂದ 100 ವೇಗವನ್ನು ಪಡೆದುಕೊಳ್ಳುತ್ತದೆ.

2021ರ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯಲ್ಲಿ ಎಂಜಿನ್ ಡ್ರೈವ್, ಎಲೆಕ್ಟ್ರಿಕ್ ಡ್ರೈವ್ ಮತ್ತು ಹೈಬ್ರಿಡ್ ಡ್ರೈವ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಹೊಂದಿದೆ. ಇನ್ನು ಈ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯು 27.7 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹೊಸ ಹೊಂಡಾ ಹೆಚ್‌ಆರ್-ವಿ ಎಸ್‍ಯುವಿಯಯು ದೀಪಾವಳಿ ಹಬ್ಬದ ಬಳಿಕ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.