ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ 2021ರ ಔರಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಕೆಲವು ಹೊಸ ನವೀಕರಣಗಳೊಂದಿಗೆ 2021ರ ಹ್ಯುಂಡೈ ಔರಾ ಕಾರು ಬಿಡುಗಡೆಯಾಗುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಹೊಸ ಹ್ಯುಂಡೈ ಔರಾ ಕಾರಿನ ಕೆಲವು ಹೊಸ ಫೀಚರ್ ಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಹ್ಯುಂಡೈ ಔರಾ ಕಾರು ಫ್ಯಾಕ್ಟರಿ ಫಿಟೆಡ್ ಸ್ಪಾಯ್ಲರ್ ಅನ್ನು ಪಡೆಯುತ್ತದೆ. ಇದನ್ನು ಔರಾದ ಎಸ್, ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ರೂಪಾಂತರಗಳಲ್ಲಿ ನೀಡಲಾಗುತ್ತದೆ. ಪ್ರೀಮಿಯಂ ಆಡಿಯೊ ಸಿಸ್ಟಂ ಅನ್ನು ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ರೂಪಾಂತರಗಳಿಂದ ತೆಗೆದುಹಾಕಲಾಗಿದ್ದರೆ, ಇ ರೂಪಾಂತರವು 14 ಇಂಚಿನ ಅನ್ ಬದಲಿಗೆ 13 ಇಂಚಿನ ಸ್ಪೇರ್ ವ್ಹೀಲ್ ಅನ್ನು ಹೊಂದಿರುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಎಸ್ ರೂಪಾಂತರವನ್ನು ಸ್ಟೀಲ್ ಸ್ಟೈಲ್ ವ್ಹೀಲ್ಸ್ ನೊಂದಿಗೆ ನೀಡಲಾಗಿದ್ದರೆ, ಎಎಂಟಿ ಮಾದರಿಗಳು ಗನ್ ಮೆಟಲ್ ಬಣ್ಣದಲ್ಲಿ 3 ಎಂ ಗ್ರಾಫಿಕ್ಸ್ ಪಡೆಯಲಿವೆ. ಟಾಪ್-ಎಂಡ್ ಎಸ್‌ಎಕ್ಸ್ (ಒ) ಟ್ರಿಮ್ ಕ್ರೂಸ್ ಕಂಟ್ರೋಲ್ (1.2 ಎಲ್ ಪೆಟ್ರೋಲ್ ಮಾತ್ರ) ಮತ್ತು ಲೆದರ್ ಸುತ್ತುವರೆದ ಸ್ಟೀಯರಿಂಗ್ ವ್ಹೀಲ್ ಮತ್ತು ಗೇರ್ ನಾಬ್ ಸೇರಿದಂತೆ ಕೆಲವು ವಿಶೇಷ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

2021ರ ಹ್ಯುಂಡೈ ಔರಾ ಕಾರಿನಲ್ಲಿ ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಸಿಎನ್‌ಜಿ ಕಿಟ್‌ನೊಂದಿಗೆ ಮುಂದುವರಿಯಲಿದೆ. ಗ್ರ್ಯಾಂಡ್ ಐ10 ನಿಯೋಸ್‌ನಿಂದ ಎರವಲು ಪಡೆದ 1.2 ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಇನ್ನು ಈ ಕಾಂಪ್ಯಾಕ್ಟ್ ಸೆಡಾನ್ ಅನ್ನು 1.0 ಎಲ್, 3-ಸಿಲಿಂಡರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

2021ರ ಹ್ಯುಂಡೈ ಔರಾ ಕಾರಿನಲ್ಲಿ 1.2 ಎಲ್, 3-ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 74 ಬಿಹೆಚ್‍ಪಿ ಪವರ್ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಔರಾ ಕಾರಿನಲ್ಲಿ ಬೂಮ್‌ಬರ್ಗ್ ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ಸ್, 15-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಎಲ್ಇಡಿ ಟೈಲ್ ಲೈಟ್ಸ್, ಕೀ ಲೆಸ್ ಎಂಟ್ರಿ, 8-0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ, ವಾಯ್ಸ್ ರೆಕಗ್ನಿಷನ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್ ಸೌಲಭ್ಯ ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಜೊತೆಗೆ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್‌ನೊಂದಿಗೆ ಇಬಿಡಿ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಸೀಟ್ ಬೆಲ್ಟ್ ರಿಮೆಂಡರ್, ಸ್ಪೀಡ್ ಅಲರ್ಟ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಚೈಲ್ಡ್ ಸೀಟ್ ಮೌಂಟ್ ಮತ್ತು ಫ್ರಂಟ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಔರಾ ಕಾರು

ಹ್ಯುಂಡೈ ಔರಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಡಿಜೈರ್, ಹೋಂಡಾ ಅಮೇಜ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇನ್ನು 2021ರ ಹ್ಯುಂಡೈ ಔರಾ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Most Read Articles

Kannada
English summary
2021 Hyundai Aura Features Leaked Ahead of Launch. Read In Kannada.
Story first published: Saturday, April 3, 2021, 9:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X