ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಜಾಗ್ವಾರ್ ಲ್ಯಾಂಡ್ ರೋವರ್ ತನ್ನ ಮೊದಲ ಆಲ್-ಎಲೆಕ್ಟ್ರಿಕ್ ಎಸ್‌ಯುವಿ ಐ-ಪೇಸ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಜಾಗ್ವಾರ್ ತನ್ನ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಜಾಗ್ವಾರ್ ತನ್ನ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತದಲ್ಲಿ ಇದೇ ತಿಂಗಳ 23 ಬಿಡುಗಡೆಯಾಗಲಿದೆ. ಕಂಪನಿಯು ಜಾಗ್ವಾರ್ ತನ್ನ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಆರಂಭಿಸಿದ್ದಾರೆ. ಈ ಐಷಾರಾಮಿ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಜಾಗ್ವಾರ್ ಡೀಲರುಗಳ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರು ಎಸ್, ಎಸ್ಇ ಮತ್ತು ಎಚ್ಎಸ್ಇ ಎಂಬ ಮೂರು ವೆರಿಯೆಂಟ್ ಗಳಲ್ಲಿ ಲಭ್ಯವಿರುತ್ತದೆ. ಈ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿಯ ವಿತರಣೆಯನ್ನು ಕೂಡ ಮುಂದಿನ ತಿಂಗಳಿನಲ್ಲಿ ಪ್ರಾರಂಭಿಸಬಹುದು.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಜಾಗ್ವಾರ್ ಲ್ಯಾಂಡ್ ರೋವರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಸೂರಿ, ಅವರು ಮಾತನಾಡಿ, ಲ್ಯಾಂಡ್ ರೋವರ್ ಡಿಫೆಂಡರ್ನ ಡಿಜಿಟಲ್ ಬಿಡುಗಡೆಗೆ ಅದ್ಭುತವಾದ ಪ್ರತಿಕ್ರಿಯೆಯ ನಂತರ, ಜಾಗ್ವಾರ್ ಐ-ಪೇಸ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಮತ್ತೊಂದು ಡಿಜಿಟಲ್ ವೇದಿಕೆಯ ಮೂಲಕ ಬಿಡುಗಡೆಗೊಳಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದರು.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಮೊದಲ ಐ-ಪೇಸ್ ಎಲೆಕ್ಟ್ರಿಕ್-ಎಸ್‌ಯುವಿ ಕೆಲವು ದಿನಗಳ ಹಿಂದೆ ಮುಂಬೈ ಬಳಿಯ (ಜೆಎನ್‌ಪಿಟಿ) ಜವಾಹರಲಾಲ್ ನೆಹರು ಬಂದರಿನಲ್ಲಿ ಬಂದು ತಲುಪಿತ್ತು. ಈ ಮೊದಲ ಐ-ಪೇಸ್ ಎಲೆಕ್ಟ್ರಿಕ್-ಎಸ್‌ಯುವಿಯನ್ನು ಭಾರತದಲ್ಲಿ ಟೆಸ್ಟ್ ಮಾಡಲಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಎಸ್‌ಯುವಿನಲ್ಲಿ ಹೆಚ್ಚುವರಿಯಾಗಿ, ಚಾರ್ಜ್ ಮಾಡಲು ಐ-ಪೇಸ್ ಗ್ರಾಹಕರಿಗೆ ಒಂದೆರಡು ಆಯ್ಕೆಗಳನ್ನು ನೀಡುವುದಾಗಿ ಜಾಗ್ವಾರ್ ಘೋಷಿಸಿದೆ. ಟಾಟಾ ತನ್ನ ‘ಇಝಡ್ ಚಾರ್ಜ್' ಇವಿ ಚಾರ್ಜಿಂಗ್ ನೆಟ್‌ವರ್ಕ್‌ನ ಭಾಗವಾಗಿ ದೇಶಾದ್ಯಂತ 200ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಿದೆ.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ‘ಇಝಡ್ ಚಾರ್ಜ್ 'ಇವಿ ಚಾರ್ಜಿಂಗ್ ನೆಟ್‌ವರ್ಕ್‌ಗೆ ಗ್ರಾಹಕರಿಗೆ ಪ್ರವೇಶವಿರುತ್ತದೆ, ಇವುಗಳನ್ನು ನಗರದೊಳಗಿನ ಅನುಕೂಲಕರ ಸ್ಥಳಗಳಲ್ಲಿ ಇರಿಸಲಾಗುತ್ತದೆ. ಇದು ಮಾಲ್‌ಗಳು, ರೆಸ್ಟೋರೆಂಟ್‌ಗಳು, ಕಚೇರಿಗಳು ಮತ್ತು ಹೆದ್ದಾರಿಗಳಂತಹ ಸ್ಥಳಗಳಲ್ಲಿ ಇರಿಸಲಾಗುತ್ತದೆ. ಇದನ್ನು ಸ್ಟ್ಯಾಂಡರ್ಡ್ ಆಗಿ 7.4 ಕಿ.ವ್ಯಾ ಎಸಿ ವಾಲ್-ಮೌಂಟ್ ಚಾರ್ಜರ್ ಸಹ ನೀಡಲಾಗುತ್ತದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಐಷಾರಾಮಿ ಎಲೆಕ್ಟ್ರಿಕ್ ಎಸ್‌ಯುವಿ ಆಕ್ಸಲ್ ಮೇಲೆ ಇರಿಸಲಾಗಿರುವ ಎರಡು ಎಲೆಕ್ಟ್ರಿಕ್ ಮೋಟರ್‌ಗಳಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಅವುಗಳನ್ನು 90 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ಗೆ ಜೋಡಿಸಲಾಗುತ್ತದೆ.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಈ ಎಲೆಕ್ಟ್ರಿಕ್ ಪವರ್‌ಟ್ರೇನ್ 395 ಬಿಹೆಚ್‍ಪಿ ಪವರ್ ಮತ್ತು 696 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತದೆ. ಜಾಗ್ವಾರ್ ಐ-ಪೇಸ್ ಎಸ್‍ಯುವಿ 470 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯುವಿ ಕೇವಲ 4.8 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಹೊಸ ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ 200 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಜಾಗ್ವಾರ್ ಐ-ಪೇಸ್ ಎಸ್‍ಯುವಿ ಹಲವಾರು ಪುರಸ್ಕಾರಗಳನ್ನು ಮತ್ತು 80ಕ್ಕೂ ಹೆಚ್ಚು ಜಾಗತಿಕ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

Most Read Articles

Kannada
English summary
Jaguar I-Pace To Launch On March 23, 2021. Read In Kannada.
Story first published: Tuesday, March 2, 2021, 19:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X