Just In
- 7 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 8 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 9 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 9 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ಸನಿಹದಲ್ಲಿ 2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ
ಅಮೆರಿಕ ಮೂಲದ ಜೀಪ್ ಕಂಪನಿಯು ತನ್ನ ಹೊಸ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿದೆ.
ಇತ್ತೀಚೆಗೆ ಈ ಹೊಸ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತ್ತು. ಕೆಲವು ವರದಿಗಳ ಪ್ರಕಾರ, ಹೊಸ 2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯು ಫೆಬ್ರವರಿ 4 ರಂದು ಬಿಡುಗಡೆಯಾಗಬಹುದು. ಈ ಎಸ್ಯುವಿಯು ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಕೆಲವು ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳು ಹತ್ತಿರದಿಂದ ಸೂಕ್ಷವಾಗಿ ಗಮನಿಸಿದರೆ ಮಾತ್ರ ತಿಳಿಯುತ್ತದೆ.
ಈ ಹೊಸ ಎಸ್ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ. ಅಲ್ಲದೇ ಹೊಸ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು
ಈ ಹೊಸ ಎಸ್ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಹೆಡ್ಲೈಟ್ಗಳು, ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.
ಹೊಸ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಈ ಹೊಸ ಎಸ್ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಆಧರಿಸಿದೆ.
ಆದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್ಡೇಟ್ ಫೀಚರ್ ಗಳನ್ನು ಹೊಂದಿವೆ. ಹಿಲ್ ಅಸಿಸ್ಟ್ (ಎಚ್ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್ಡಿಸಿ) ಎಂಬ ಮೋಡ್ ಗಳನ್ನು ಈ ಹೊಸ 2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿಗೆ ನೀಡಲಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ
ಇನ್ನು ಮೊದಲಿನಂತೆ, ಹೊಸ ಜೀಪ್ ಕಂಪಾಸ್ನಲ್ಲಿ ಏಳು-ಏರ್ಬ್ಯಾಗ್ಗಳು, ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡಿಸ್ಟ್ರಿಬ್ಯೂಷನ್ (ಇಬಿಡಿ) ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ಪಿ) ಮತ್ತು ಬ್ರೇಕ್ ಅಸಿಸ್ಟ್ (ಬಿಎ) ಸೇರಿದಂತೆ ಹಲವಾರು ಎಲೆಕ್ಟ್ರಾನಿಕ್ಸ್ ಫೀಚರ್ ಗಳನ್ನು ಅಳವಡಿಸಿದೆ.
2021ರ ಜೀಪ್ ಕಂಪಾಸ್ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಎರಡೂ ಎಂಜಿನ್ಗಳು ಸ್ಟ್ಯಾಂಡರ್ಡ್ನಂತೆ ಆರು-ಸ್ಪೀಡ್ ಮ್ಯಾನ್ಯುವಲ್ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ. ಕಂಪಾಸ್ ಫೇಸ್ಲಿಫ್ಟ್ ಫ್ಹೂರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ.