ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಮೆರಿಕ ಮೂಲದ ಜೀಪ್ ಕಂಪನಿಯು ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮೂರು ವರ್ಷಗಳ ಬಳಿಕ ಜೀಪ್ ಕಂಪಾಸ್ ಮಿಡ್-ಲೈಫ್ ನವೀಕರಣವನ್ನು ಪಡೆದುಕೊಂಡಿದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯು ವಿನ್ಯಾಸದ ಬಗ್ಗೆ ಹೇಳುದಾದರೆ, ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದ್ದರೆ, ಫೀಚರ್ ಗಳ ವಿಭಾಗದಲ್ಲಿ ಕೆಲವು ಗಣನೀಯ ನವೀಕರಣಗಳನ್ನು ಪಡೆದುಕೊಂಡಿದೆ. ಹೊರಗಿನ ನವೀಕರಣಗಳು ಹತ್ತಿರದಿಂದ ಸೂಕ್ಷವಾಗಿ ಗಮನಿಸಿದರೆ ಮಾತ್ರ ತಿಳಿಯುತ್ತದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ ಆಧಾರಿತ ಆಪರೇಟಿಂಗ್ ಸಿಸ್ಟಂ ಹೊಂದಿರುವ ಎಫ್‌ಸಿಎಯ ಹೊಸ ಯುಕನೆಕ್ಟ್ 5 ತಂತ್ರಜ್ಞಾನವನ್ನು ಆಧರಿಸಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಆದ್ದರಿಂದ ಇದು ಈಗ ವಾಯ್ಸ್ ಕಮಾಂಡ್ ಅಸಿಸ್ಟ್ ಮತ್ತು ಓವರ್-ದಿ-ಏರ್ (ಒಟಿಎ) ಅಪ್‌ಡೇಟ್‌ ಫೀಚರ್ ಗಳನ್ನು ಹೊಂದಿವೆ. ಹಿಲ್ ಅಸಿಸ್ಟ್ (ಎಚ್‌ಎ) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್‌ಡಿಸಿ) ಎಂಬ ಮೋಡ್ ಗಳನ್ನು ಈ ಹೊಸ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಗೆ ನೀಡಲಾಗಿದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು ಮೊದಲಿನಂತೆ, ಹೊಸ ಜೀಪ್ ಕಂಪಾಸ್‌ನಲ್ಲಿ ಏಳು-ಏರ್‌ಬ್ಯಾಗ್‌ಗಳು, ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡಿಸ್ಟ್ರಿಬ್ಯೂಷನ್ (ಇಬಿಡಿ) ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‌ಪಿ) ಮತ್ತು ಬ್ರೇಕ್ ಅಸಿಸ್ಟ್ (ಬಿಎ) ಸೇರಿದಂತೆ ಹಲವಾರು ಎಲೆಕ್ಟ್ರಾನಿಕ್ಸ್ ಫೀಚರ್ ಗಳನ್ನು ಅಳವಡಿಸಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 163 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಎರಡೂ ಎಂಜಿನ್‌ಗಳು ಸ್ಟ್ಯಾಂಡರ್ಡ್‌ನಂತೆ ಆರು-ಸ್ಪೀಡ್ ಮ್ಯಾನ್ಯುವಲ್‌ನೊಂದಿಗೆ ಬರುತ್ತವೆ. ಕಂಪಾಸ್ ಪೆಟ್ರೋಲ್ ಏಳು-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆಯುತ್ತದೆ ಮತ್ತು ಡೀಸೆಲ್ ಒಂಬತ್ತು-ಸ್ಪೀಡ್ ಟಾರ್ಕ್ ಕರ್ನವಾಟರ್ ಆಯ್ಕೆಯನ್ನು ಪಡೆಯುತ್ತದೆ. ಕಂಪಾಸ್ ಫೇಸ್‌ಲಿಫ್ಟ್ ಫ್ಹೂರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಅನಾವರಣವಾಯ್ತು 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಹೊಸ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ. ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಮಾದರಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಹ್ಯಾರಿಯರ್ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Thursday, January 7, 2021, 12:23 [IST]
English summary
2021 Jeep Compass Facelift Unveiled In India Details. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+