Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ
ಮೇಡ್ ಇನ್ ಇಂಡಿಯಾ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಜೀಪ್ ರ‍್ಯಾಂಗ್ಲರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಭಾರತೀಯ ಮಾರುಕಟ್ಟೆಗಾಗಿ ಗೋ-ಲೋಕಲ್ ಕಾರ್ಯತಂತ್ರದಲ್ಲಿ ಎರಡನೇ ಹೆಜ್ಜೆ ಇಟ್ಟ ಸ್ಟೆಲ್ಲಾಂಟಿಸ್ ಇಂಡಿಯಾ ಮಹಾರಾಷ್ಟ್ರದ ರಂಜಂಗಾಂವ್ ಉತ್ಪಾದನಾ ಕೇಂದ್ರದಲ್ಲಿ 2021 ಜೀಪ್ ರಾಂಗ್ಲರ್ ಆಫ್-ರೋಡರ್ನ ಸ್ಥಳೀಯವಾಗಿ ಜೋಡಣೆ ಮಾಡುವುದಕ್ಕೆ ಪ್ರಾರಂಭಿಸಿದೆ. ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಸ್ಥಳೀಯವಾಗಿ ಉತ್ಪಾದನೆ ಮಾಡಿರುವುದರಿಂದ ಇದರ ಬೆಲೆ ಇಳಿಮುಖವಾಗುವ ಸಾಧ್ಯತೆಗಳಿದೆ.

ಜೀಪ್ ತನ್ನ ಮೇಡ್ ಇನ್ ಇಂಡಿಯಾ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕವನ್ನು ಕೂಡ ಬಹಿರಂಗಪಡಿಸಿದೆ. ಈ ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮಾರ್ಚ್ 15 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹಿಂದಿನ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.63.94 ಲಕ್ಷಗಳಿಗೆ ಬಿಡುಗಡೆಗೊಳಿಸಲಾಗಿತ್ತು. ಇದರ ಮೊದಲ ಬ್ಯಾಚ್ ಕಳೆದ ವರ್ಷವೇ ಮಾರಾಟವಾಯಿತು. ಇದೀಗ ಹೊಸ ಜೀಪ್ ರ‍್ಯಾಂಗ್ಲರ್ ಇಂಟಿರಿಯರ್ ಸ್ಪೈ ಚಿತ್ರಗಳು ಬಹಿರಂಗವಾಗಿದೆ.

ಇದರಿಂದಾಗಿ ಹೊಸ ರ‍್ಯಾಂಗ್ಲರ್ ಎಸ್‍ಯುವಿಯ ಇಂಟಿರಿಯರ್ ಮಾಹಿತಿಯು ಬಹಿರಂಗವಾಗಿದೆ. ಇದರ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ನ್ಯಾವಿಗೇಷನ್ ಒಳಗೊಂಡಿರುವ ಹೊಸದಾಗಿ ವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್ ಮತ್ತು ಯುಕನೆಕ್ಟ್ 4 ಸಿ ಎನ್‌ಎವಿ 8.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಇನ್ನು ಇದರೊಂದಿಗೆ ವೈಟ್ ಸ್ಟಿಚಿಂಗ್, ಡ್ಯುಯಲ್-ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್, ಕೀಲೆಸ್ ಎಂಟ್ರಿ, ಮತ್ತು ಇನ್ನೂ ಅನೇಕ ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ.

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಫ್ಹೋರ್ ವ್ಹೀಲ್ ಡ್ರೈವ್ ಹೈ ಮತ್ತು ಲೋ ಮೋಡ್ ಗಳನ್ನು ಹೊಂದಿದೆ. ಈ ಹೊಸ ಫ್ಹೋರ್ ವ್ಹೀಲ್ ಡ್ರೈವ್ ಆಟೋ ಮೋಡ್ ಜೊತೆಗೆ ಟ್ರ್ಯಾಕ್ಷನ್ ಸ್ಲಿಪ್ ಸೆನ್ಸರ್ ಗಳನ್ನು ಒಳಗೊಂಡಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಈ ಆಫ್-ರೋಡ್ ಸಾಮರ್ಥ್ಯದ ಎಸ್‍ಯುವಿಯಲ್ಲಿ 2.0-ಲೀಟರ್ ಹೈ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಆಳವಡಿಸಲಾಗುತ್ತದೆ. ಈ ಎಂಜಿನ್ 268 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. 2021ರ ಜೀಪ್ ರ‍್ಯಾಂಗ್ಲರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ. ಆಫ್-ರೋಡ್ ವಾಹನ ಪ್ರೇಮಿಗಳು ಬಹಳ ಕಾತುರದಿಂದ ಕಾಯುರುವ ಎಸ್‍ಯುವಿ ಇದಾಗಿದೆ.