ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಮೇಡ್ ಇನ್ ಇಂಡಿಯಾ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಜೀಪ್ ರ‍್ಯಾಂಗ್ಲರ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಭಾರತೀಯ ಮಾರುಕಟ್ಟೆಗಾಗಿ ಗೋ-ಲೋಕಲ್ ಕಾರ್ಯತಂತ್ರದಲ್ಲಿ ಎರಡನೇ ಹೆಜ್ಜೆ ಇಟ್ಟ ಸ್ಟೆಲ್ಲಾಂಟಿಸ್ ಇಂಡಿಯಾ ಮಹಾರಾಷ್ಟ್ರದ ರಂಜಂಗಾಂವ್ ಉತ್ಪಾದನಾ ಕೇಂದ್ರದಲ್ಲಿ 2021 ಜೀಪ್ ರಾಂಗ್ಲರ್ ಆಫ್-ರೋಡರ್ನ ಸ್ಥಳೀಯವಾಗಿ ಜೋಡಣೆ ಮಾಡುವುದಕ್ಕೆ ಪ್ರಾರಂಭಿಸಿದೆ. ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಸ್ಥಳೀಯವಾಗಿ ಉತ್ಪಾದನೆ ಮಾಡಿರುವುದರಿಂದ ಇದರ ಬೆಲೆ ಇಳಿಮುಖವಾಗುವ ಸಾಧ್ಯತೆಗಳಿದೆ.

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಜೀಪ್ ತನ್ನ ಮೇಡ್ ಇನ್ ಇಂಡಿಯಾ ರ‍್ಯಾಂಗ್ಲರ್ ಎಸ್‍ಯುವಿಯ ಬಿಡುಗಡೆ ದಿನಾಂಕವನ್ನು ಕೂಡ ಬಹಿರಂಗಪಡಿಸಿದೆ. ಈ ಹೊಸ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಮಾರ್ಚ್ 15 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಹಿಂದಿನ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.63.94 ಲಕ್ಷಗಳಿಗೆ ಬಿಡುಗಡೆಗೊಳಿಸಲಾಗಿತ್ತು. ಇದರ ಮೊದಲ ಬ್ಯಾಚ್ ಕಳೆದ ವರ್ಷವೇ ಮಾರಾಟವಾಯಿತು. ಇದೀಗ ಹೊಸ ಜೀಪ್ ರ‍್ಯಾಂಗ್ಲರ್ ಇಂಟಿರಿಯರ್ ಸ್ಪೈ ಚಿತ್ರಗಳು ಬಹಿರಂಗವಾಗಿದೆ.

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಇದರಿಂದಾಗಿ ಹೊಸ ರ‍್ಯಾಂಗ್ಲರ್ ಎಸ್‍ಯುವಿಯ ಇಂಟಿರಿಯರ್ ಮಾಹಿತಿಯು ಬಹಿರಂಗವಾಗಿದೆ. ಇದರ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ನ್ಯಾವಿಗೇಷನ್ ಒಳಗೊಂಡಿರುವ ಹೊಸದಾಗಿ ವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್ ಮತ್ತು ಯುಕನೆಕ್ಟ್ 4 ಸಿ ಎನ್‌ಎವಿ 8.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಇನ್ನು ಇದರೊಂದಿಗೆ ವೈಟ್ ಸ್ಟಿಚಿಂಗ್, ಡ್ಯುಯಲ್-ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್, ಕೀಲೆಸ್ ಎಂಟ್ರಿ, ಮತ್ತು ಇನ್ನೂ ಅನೇಕ ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿದೆ.

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಫ್ಹೋರ್ ವ್ಹೀಲ್ ಡ್ರೈವ್ ಹೈ ಮತ್ತು ಲೋ ಮೋಡ್ ಗಳನ್ನು ಹೊಂದಿದೆ. ಈ ಹೊಸ ಫ್ಹೋರ್ ವ್ಹೀಲ್ ಡ್ರೈವ್ ಆಟೋ ಮೋಡ್ ಜೊತೆಗೆ ಟ್ರ್ಯಾಕ್ಷನ್ ಸ್ಲಿಪ್ ಸೆನ್ಸರ್ ಗಳನ್ನು ಒಳಗೊಂಡಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಇನ್ನು ಈ ಆಫ್-ರೋಡ್ ಸಾಮರ್ಥ್ಯದ ಎಸ್‍ಯುವಿಯಲ್ಲಿ 2.0-ಲೀಟರ್ ಹೈ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಆಳವಡಿಸಲಾಗುತ್ತದೆ. ಈ ಎಂಜಿನ್ 268 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ ಉತ್ಪಾದನೆ ಆರಂಭ

ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ. 2021ರ ಜೀಪ್ ರ‍್ಯಾಂಗ್ಲರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ. ಆಫ್-ರೋಡ್ ವಾಹನ ಪ್ರೇಮಿಗಳು ಬಹಳ ಕಾತುರದಿಂದ ಕಾಯುರುವ ಎಸ್‍ಯುವಿ ಇದಾಗಿದೆ.

Most Read Articles

Kannada
English summary
2021 Jeep Wrangler Local Production Begins. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X