Just In
- 30 min ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 57 min ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- 1 hr ago Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- 2 hrs ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Movies 'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಾರುತಿ ಸುಜುಕಿ ಸೆಲೆರಿಯೊ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ತನ್ನ 2021ರ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ. ಈ 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
ಭಾರತದಲ್ಲಿ ಸೆಲೆರಿಯೊ ಹ್ಯಾಚ್ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಭಾರತದಲ್ಲಿ ಹಲವು ಬಾರಿ ರೋಡ್ ಟೆಸ್ಟ್ ನಡೆಸಿದೆ.
ವರದಿಗಳ ಪ್ರಕಾರ, ಹೊಸ ಸೆಲೆರಿಯೊ ಹ್ಯಾಚ್ಬ್ಯಾಕ್ ಮಾದರಿಯು ಇದೇ ವರ್ಷದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಆದರೆ ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಆದರೆ 2021ರ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹರ್ಟೆಕ್ಟ್ ಪ್ಲಾಟ್ಫಾರ್ಮ್ ನಡಿಯಲ್ಲಿ ಇದನ್ನು ಅಭಿವೃದ್ದಿಪಡಿಸಲಾಗುತ್ತದೆ. ಇನ್ನು 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ಎಂಜಿನ್ ಅನ್ನು ಬದಲಾಯಿಸಲಾಗಿದೆ.
ಇದರಲ್ಲಿ ಹೊಸ ಪವರ್ ಫುಲ್ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಈ ಎಂಜಿನ್ 68 ಬಿಹೆಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್ಬಾಕ್ಸ್ ಆಯ್ಕೆಯನ್ನು ನೀಡಲಾಗುತ್ತದೆ.
ಹೊಸ ಮಾರುತಿ ಸುಜುಕಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ. ಮುಂಭಾಗದಲ್ಲಿ ಸಣ್ಣ ಗ್ರಿಲ್ ಮತ್ತು ಏರ್ ಡ್ಯಾಮ್, ಹ್ಯಾಲೊಜೆನ್ ಹೆಡ್ಲ್ಯಾಂಪ್ಗಳು, ಹೊಸ ಡೋರ್ ಹ್ಯಾಂಡಲ್ಗಳು, ನವೀಕರಿಸಿದ ಬಂಪರ್ ಮತ್ತು ಟ್ವೀಕ್ಡ್ ಟೈಲ್ಲ್ಯಾಂಪ್ಗಳನ್ನು ಒಳಗೊಂಡಿರುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
2021ರ ಸೆಲೆರಿಯೊ ಹ್ಯಾಚ್ಬ್ಯಾಕ್ ನಲ್ಲಿ 7.0-ಇಂಚಿನ ಸ್ಮಾರ್ಟ್ಪ್ಲೇ ಸ್ಟುಡಿಯೋ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಒಳಗೊಂಡಿರಬಹುದು.
ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ. 2021ರ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಹೆಚ್ಚಿನ ಪ್ರೀಮಿಯಂ ಫೀಚರ್ ಗಳನ್ನು ಹೊಂದಿರಬಹುದು.
ಈ ಹ್ಯಾಚ್ಬ್ಯಾಕ್ ಸ್ಟ್ಯಾಂಡರ್ಡ್ ಸೀಟ್ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್ ಅನ್ನು ಕೂಡ ಹೊಂದಿರುತ್ತದೆ.
ಮಾರುತಿ ಸುಜುಕಿ ಸೆಲೆರಿಯೊ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.