ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್
ಸುಜುಕಿ ಕಂಪನಿಯು ಕಳೆದ ವರ್ಷ ತನ್ನ ತಾಯ್ನಾಡು ಜಪಾನ್‌ನಲ್ಲಿ ನಾಲ್ಕನೇ ತಲೆಮಾರಿನ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಿತ್ತು. ಇದೀಗ ಭಾರತದಲ್ಲಿ ಮಾರುತಿ ಸುಜುಕಿ ಈ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಈ ಹೊಸ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲವಾದರೂ, ಈ ವರ್ಷದ ಮಧ್ಯಾಂತರ ಅವಧಿಯಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದವರೆಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಈ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗೆ ಹೋಲಿಸಿದರೆ ಮುಂಭಾಗದಲ್ಲಿ ಕೆಲವು ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ.

ಹೊಸ ರೇಡಿಯೇಟರ್ ಗ್ರಿಲ್ ವಿನ್ಯಾಸವನ್ನು ಹೊಂದಿದೆ ಮತ್ತು ಬ್ಲ್ಯಾಕ್ ರೂಫ್ ಮತ್ತು ಡ್ಯುಯಲ್ ಟೋನ್ ಬಣ್ಣಗಳ ಅಂಶಗಳನ್ನು ಹೊಂದಿರುತ್ತದೆ. ಮುಂಭಾಗದ ಏರ್ ಟೆಕ್ ಭಾಗವನ್ನು ಕವರ್ ಮಾಡಲಾಗಿದೆ. ಆದ್ದರಿಂದ ಈ ಸಮಯದಲ್ಲಿ, ನಾವು ಹೊಸ ವಿನ್ಯಾಸದ ಬಗ್ಗೆ ಮಾತನಾಡಲು ಸಾಧ್ಯವಾಗುವುದಿಲ್ಲ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಗ್ಲೋಬಲ್-ಸ್ಪೆಕ್ ಕಾರಿನ ಆಧಾರದ ಮೇಲೆ, ಸ್ವಿಫ್ಟ್ ಡೈಮಂಡ್-ಸ್ಟಡ್-ಪ್ಯಾಟರ್ನ್ ಮೆಶ್ ಗ್ರಿಲ್ ಪಡೆಯುವ ಸಾಧ್ಯತೆಯಿದೆ. ಚಿತ್ರಗಳಲ್ಲಿ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವನೆಗಳನ್ನು ಕಂಡುಬಂದಿಲ್ಲ. ನವೀಕರಿಸಿದ ಸ್ವಿಫ್ಟ್‌ನ ಕ್ಯಾಬಿನ್ ಚಿತ್ರಗಳು ಬಹಿರಂಗವಾಗಿಲ್ಲ.

ಜಾಗತಿಕ ಸ್ಪೆಕ್ ಕಾರಿನ ಆಧಾರದ ಮೇಲೆ, ಯಾವುದೇ ಪ್ರಮುಖ ಬದಲಾವಣೆಗಳನ್ನು ನಾವು ನಿರೀಕ್ಷಿಸುವುದಿಲ್ಲ. ಇದು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗೆ ಸ್ಮಾರ್ಟ್ ಸ್ಟುಡಿಯೋ 2.0 ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇದರೊಂದಿಗೆ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸೆನ್ಸಾರ್ ಗಳೊಂದಿಗೆ ರೇರ್ ಕ್ಯಾಮೆರಾ, ಇಬಿಡಿಯೊಂದಿಗೆ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುತ್ತದೆ.

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು. ಇನ್ನು ಹೊಸ ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಇದುವುದಿಲ್ಲ.


Click it and Unblock the Notifications