ಬಿಡುಗಡೆಯ ಸನಿಹದಲ್ಲಿ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಗಾಡಿವಾಡಿ ಪ್ರಕಾರ, 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಇದೇ ತಿಂಗಳ 17 ಅಥವಾ 18 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದಿಂದ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ.

ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗೆ ಹೋಲಿಸಿದರೆ ಮುಂಭಾಗದಲ್ಲಿ ಕೆಲವು ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ. ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರಗಳಲ್ಲಿ ನೋಡಿದಂತೆ ಹೊಸ ರೇಡಿಯೇಟರ್ ಗ್ರಿಲ್ ವಿನ್ಯಾಸವನ್ನು ಹೊಂದಿದೆ ಮತ್ತು ಬ್ಲ್ಯಾಕ್ ರೂಫ್ ಮತ್ತು ಡ್ಯುಯಲ್ ಟೋನ್ ಬಣ್ಣಗಳ ಅಂಶಗಳನ್ನು ಹೊಂದಿರುತ್ತದೆ. ಮುಂಭಾಗದ ಏರ್ ಟೆಕ್ ಭಾಗವನ್ನು ಕವರ್ ಮಾಡಲಾಗಿದೆ. ಆದ್ದರಿಂದ ಈ ಸಮಯದಲ್ಲಿ, ನಾವು ಹೊಸ ವಿನ್ಯಾಸದ ಬಗ್ಗೆ ಮಾತನಾಡಲು ಸಾಧ್ಯವಾಗುವುದಿಲ್ಲ.

ಗ್ಲೋಬಲ್-ಸ್ಪೆಕ್ ಕಾರಿನ ಆಧಾರದ ಮೇಲೆ, ಸ್ವಿಫ್ಟ್ ಡೈಮಂಡ್-ಸ್ಟಡ್-ಪ್ಯಾಟರ್ನ್ ಮೆಶ್ ಗ್ರಿಲ್ ಪಡೆಯಬಹುದು. ಚಿತ್ರಗಳಲ್ಲಿ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವನೆಗಳನ್ನು ಕಂಡುಬಂದಿಲ್ಲ. ನವೀಕರಿಸಿದ ಸ್ವಿಫ್ಟ್‌ನ ಕ್ಯಾಬಿನ್ ಚಿತ್ರಗಳು ಇನ್ನು ಕೂಡ ಬಹಿರಂಗವಾಗಿಲ್ಲ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಜಾಗತಿಕ ಸ್ಪೆಕ್ ಕಾರಿನ ಆಧಾರದ ಮೇಲೆ, ಯಾವುದೇ ಪ್ರಮುಖ ಬದಲಾವಣೆಗಳನ್ನು ನಾವು ನಿರೀಕ್ಷಿಸುವುದಿಲ್ಲ. ಇದು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗೆ ಸ್ಮಾರ್ಟ್ ಸ್ಟುಡಿಯೋ 2.0 ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ.

ಇದರೊಂದಿಗೆ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸೆನ್ಸಾರ್ ಗಳೊಂದಿಗೆ ರೇರ್ ಕ್ಯಾಮೆರಾ, ಇಬಿಡಿಯೊಂದಿಗೆ ಎಬಿಎಸ್ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳಂತಹ ಫೀಚರ್ ಗಳನ್ನು ಒಳಗೊಂಡಿರುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿದೆ.

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು. ಇನ್ನು ಹೊಸ ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಇರುವುದಿಲ್ಲ. ವರದಿಗಳ ಪ್ರಕಾರ ಬಹುನಿರೀಕ್ಷಿತ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಇದೇ ತಿಂಗಳು ಬಿಡುಗಡೆಯಾಗಲಿದೆ.


Click it and Unblock the Notifications








