ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಮಾರುತಿ ಸುಜುಕಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಪ್ರೀಮಿಯಂ ಆವೃತ್ತಿಯಾದ ಮಾರುತಿ ಎಕ್ಸ್‌ಎಲ್5 ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಈ ಹೊಸ ಮಾರುತಿ ಎಕ್ಸ್‌ಎಲ್5 ಪ್ರೀಮಿಯಂ ಕಾರು ಭಾರತದಲ್ಲಿ ಸ್ಪಾಟ್ ನಡೆಸಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಹೊಸ ಮಾರುತಿ ಎಕ್ಸ್‌ಎಲ್5 ಕಾರು ದೆಹಲಿಯಲ್ಲಿ ಸ್ಫಾಟ್ ಟೆಸ್ಟ್ ನಡಿಸಿದೆ. ಈ ಪ್ರೀಮಿಯಂ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳು ಬಹಿರಂಗವಾಗಿವೆ. ಈ ಚಿತ್ರದಲ್ಲಿ ಎಕ್ಸ್‌ಎಲ್5 ಕಾರು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿದೆ. ಈ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರಿಗೆ ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟಪ್, ಮುಂಭಾಗದ ಬಂಪರ್‌ನಲ್ಲಿ ಏರ್ ಡ್ಯಾಮ್ ಮತ್ತು ಎರಡೂ ತುದಿಯಲ್ಲಿ ಫಾಗ್ ಲ್ಯಾಂಪ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಎಕ್ಸ್‌ಎಲ್5 ಕಾರಿನಲ್ಲಿ ಸ್ಲಿಕ್ ಗ್ರಿಲ್ ಮತ್ತು ಹಿಂಭಾಗದಲ್ಲಿ ಕೆಲವು ಸಣ್ಣ ಬದಲಾವಣೆಗಳೊಂದಿಗೆ ವ್ಯಾಗನ್ಆರ್ ಗಿಂತ ಭಿನ್ನವಾಗಿ ಕಾಣುತ್ತದೆ. ಇನ್ನು ಈ ಕಾರಿನಲ್ಲಿ ಹೊಸ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಎಕ್ಸ್‌ಎಲ್5 ಮಾದರಿಯ ಒಟ್ಟಾರೆ ಸಿಲೂಯೆಟ್ ವ್ಯಾಗನ್ಆರ್ ಕಾರಿಗೆ ಹೋಲುತ್ತದೆ. ಸ್ಪೈ ಚಿತ್ರಗಳಲ್ಲಿ ಕಂಡು ಬಂದ ಹಾಗೆ ಎಕ್ಸ್‌ಎಲ್5 ಕಾರು ಸ್ಟ್ಯಾಂಡರ್ಡ್ ವ್ಯಾಗನ್ಆರ್ ಕಂಡುಬರುವಂತಹ ಕ್ಯಾಬಿನ್ ವಿನ್ಯಾಸವನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಹೊಸ ಕಾರಿನಲ್ಲಿ ಕ್ಲೈಮೆಂಟ್ ಕಂಟ್ರೋಲ್ ಏರ್-ಕಾನ್ ಯುನಿಟ್ ಮತ್ತು 7.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇನ್ನು ಇತರ ಪ್ರೀಮಿಯಂ ಫೀಚರ್ ಗಳನ್ನು ಕೂಡ ಹೊಂದಿರಲಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಹೊಸ ಮಾರುತಿ ಬಿಎಸ್-6 ಎಕ್ಸ್‌ಎಲ್5 ಕಾರಿನಲ್ಲಿ 1.2-ಲೀಟರ್ ಕೆ12ಬಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನಲ್ಲಿಯು ಇದೇ ಮಾದರಿಯ ಎಂಜಿನ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಈ ಎಂಜಿನ್ 82 ಬಿಹೆಚ್‍ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಎಜಿಎಸ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅದೇ 5-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಅನ್ನು ಒಳಗೊಂಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಮಾರುತಿ ಎಕ್ಸ್‌ಎಲ್5 ಕಾರನ್ನು ಬ್ರ್ಯಾಂಡ್‌ನ ಪ್ರೀಮಿಯಂ ನೆಕ್ಸಾ ಡೀಲರ್ ಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ. ನೆಕ್ಸಾ ಪ್ರೀಮಿಯಂ ವಿಭಾಗದಲ್ಲಿ ಈ ಕಾರನ್ನು ಎಂಟ್ರಿ-ಲೆವೆಲ್ ಮಾದರಿಯಾಗಿ ಮಾರಾಟ ಮಾಡಲಾಗುವುದು, ನೆಕ್ಸಾ ಡೀಲರ್ ಗಳು ಇಗ್ನೀಸ್, ಬಲೆನೊ, ಎಸ್-ಕ್ರಾಸ್ ಮತ್ತು ಎಕ್ಸ್‌ಎಲ್6 ಕಾರುಗಳನ್ನು ಕೂಡ ಮಾರಾಟ ಮಾಡಲಾಗುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್‌ಎಲ್5 ಕಾರು

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಪ್ರೀಮಿಯಂ ಆವೃತ್ತಿಯಾಗಿ ಎಕ್ಸ್‌ಎಲ್5 ಅನ್ನು ಬಿಡುಗಡೆಗೊಳಿಸುತ್ತಿದೆ. ಈ ಹೊಸ ಮಾರುತಿ ಸುಜುಕಿ ಎಕ್ಸ್‌ಎಲ್5 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇದೇ ವರ್ಷ ಬಿಡುಗಡೆಯಾಗಲಿದೆ.

Most Read Articles

Kannada
English summary
2021 Maruti XL5 Spotted With New Alloy Wheels. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X