Just In
- 5 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 6 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 7 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 8 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನ ಟೀಸರ್ ಬಿಡುಗಡೆ
ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಹೊಸ ಸಿ-ಕ್ಲಾಸ್ ಕಾರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಜ್ಜಾಗಿದೆ. ಇದೀಗ ಈ ಹೊಸ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನ ಟೀಸರ್ ಬಿಡುಗಡೆಯಾಗಿದೆ.
ಮರ್ಸಿಡಿಸ್ ಬೆಂಝ್ ಕಂಪನಿಯು ಈ ಹೊಸ ಐಷಾರಾಮಿ ಸಿ-ಕ್ಲಾಸ್ ಕಾರನ್ನು ಇದೇ ತಿಂಗಳ 23 ರಂದು ಜಾಗತಿಕ ಮಟ್ಟದಲ್ಲಿ ಪರಿಚಯಿಸಬಹುದು. ಇನ್ನು ಹೊಸ ಟೀಸರ್ ಚಿತ್ರಗಳಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನ ಕಾರಿನ ಸಿಲೂಯೆಟ್ ಅನ್ನು ಪ್ರದರ್ಶಿಸಿದೆ. ತೂಹಲಕಾರಿಯಾಗಿ, ಟೀಸರ್ ಚಿತ್ರವು ಸಿ-ಕ್ಲಾಸ್ ವ್ಯಾಗನ್‌ನ ಸಿಲೂಯೆಟ್ ಅನ್ನು ಸಹ ತೋರಿಸುತ್ತದೆ, ಆದರೆ ಇದು ಭಾರತೀಯ ಮಾರುಕಟ್ಟೆಗೆ ಬರುವ ನಿರೀಕ್ಷೆಯಿಲ್ಲ,
ಆದರೆ ಯುರೋಪಿಯನ್ ಮಾರುಕಟ್ಟೆಗಳಲ್ಲಿ ಮಾರಾಟವಾಗಲಿದೆ. ಇನ್ನು ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರು ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸುವಾಗ ಕಾಣಿಸಿಕೊಂಡಿದೆ. ಸ್ಪಾಟ್ ಟೆಸ್ಟ್ ಸ್ಪೈ ಚಿತ್ರಗಳ ಮೂಲಕ ಕೆಲವು ಮಾಹಿತಿಗಳು ಬಹಿರಂಗವಾಗಿತ್ತು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300
ಹೊಸ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಮಾಡಿದ ಬದಲಾವಣೆಗಳು ಇದು ಬೇಬಿ ಎಸ್-ಕ್ಲಾಸ್ ಲುಕ್ ಅನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಇನ್ನು ಹೊಸ ಮಾದರಿಯ ಮುಂಭಾಗ ಶಾರ್ಪ್ ಆಗಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.
ಇನ್ನು ಈ ಕಾರು ಹೊಸ ಮತ್ತು ದೊಡ್ಡ ರೇಡಿಯೇಟರ್ ಗ್ರಿಲ್ ಅನ್ನು ಪಡೆಯುತ್ತದೆ. ನಂತರ ನಯವಾದ ಹೆಡ್‌ಲೈಟ್‌ಗಳಿವೆ, ಹಿಂಭಾಗದಲ್ಲಿ ಅಡ್ಡಲಾಗಿರುವ ಟೈಲ್‌ಲೈಟ್‌ಗಳಿವೆ, ಉಳಿದ ಹೆಚ್ಚಿನ ಹಿಂದಿನ ಮಾದರಿಯಂತಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ
ಹೊಸ ಸಿ-ಕ್ಲಾಸ್‌ನ ಒಳಭಾಗದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಹೊಸ ಡ್ಯಾಶ್‌ಬೋರ್ಡ್‌ನಿಂದ ಪ್ರಾರಂಭಿಸಿ ಅದು ಹೊರಹೋಗುವ ಮಾದರಿಯಲ್ಲಿ ಟ್ಯಾಬ್ಲೆಟ್ನಂತಹ ಟ್ಯಾಬ್ಲೆಟ್ ಬದಲಿಗೆ ಅಂದವಾಗಿ ಸಂಯೋಜಿತ ಟಚ್‌ಸ್ಕ್ರೀನ್ ಯುನಿಟ್ ಅನ್ನು ಹೊಂದಿರುತ್ತದೆ.
ಮರ್ಸಿಡಿಸ್ ಎ-ಜಿ ಸಿ 53 ಮತ್ತು ಸಿ 63 ಮಾದರಿಗಳಲ್ಲಿ ಇರುವ ಕೆಲವು ಅಂಶಗಳನ್ನು ಹೊಸ ಸಿ-ಕ್ಲಾಸ್ ಎರವಲು ಪಡೆದುಕೊಳ್ಳಬಹುದು. ಆದರೆ ಹಿಂದಿನ ಮಾದರಿಯ ಸಿ-ಕ್ಲಾಸ್ ಮಾದರಿಗೆ ಹೋಲಿಸಿದರೆ ಹೊಸ ಸೆಡಾನ್ ನಲ್ಲಿ ಪ್ರಮುಖ ಅಪ್ದೇಟ್ ಗಳನ್ನು ನಿರೀಕ್ಷಿಸಬಹುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಮರ್ಸಿಡಿಸ್ ಬೆಂಝ್ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮಾರಾಟ ತಂತ್ರಗಾರಿಕೆಯನ್ನು ಬಹಿರಂಗಪಡಿಸಿದೆ. ಮರ್ಸಿಡಿಸ್ ಬೆಂಝ್ ಕಂಪನಿಯು ಈ ವರ್ಷದ ಅವಧಿಯಲ್ಲಿ 15 ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದಾರೆ.
ಇನ್ನು ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನಲ್ಲಿ 2.0-ಲೀಟರ್, ನಾಲ್ಕು-ಸಿಲಿಂಡರ್ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್‌ಗಳ ಜೊತೆಗೆ ಮೈಲ್ಡ್-ಹೈಬ್ರಿಡ್ ಯುನಿಟ್ ಅನ್ನು ಅಳವಡಿಸಬಹುದು. ಇನ್ನು ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಐಷಾರಾಮಿ ಕಾರುಗಳಲ್ಲಿ ಇದು ಕೂಡ ಒಂದಾಗಿದೆ.