ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಜಾಗತಿಕವಾಗಿ ಅನಾವರಣಗೊಳಿಸಲು ಸಜ್ಜಾಗಿದೆ. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಇದೇ ತಿಂಗಳ 9 ರಂದು ಅನಾವರಣವಾಗಲಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಟೊಯೊಟಾ ಕಂಪನಿಯು ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟೀಸರ್ ವಿಡಿಯೋ ಮೂಲಕ ಅನಾವರಣವಾಗುವ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷಕ್ಕೆ ಭಾರತಕ್ಕೆ ಬರಬಹುದು. ಇತ್ತೀಚೆಗೆ ಬಹಿರಂಗವಾದ ಮಾಹಿತಿಗಳ ಪ್ರಕಾರ, ದಕ್ಷಿಣ ಆಫ್ರಿಕಾದ ಮಾರುಕಟ್ಟೆಗಳಲ್ಲಿ, ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಜಿಎಕ್ಸ್-ಆರ್, ಜಿಆರ್-ಎಸ್ ಮತ್ತು ಝಡ್‌ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿರಲಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಇದು ಇ-ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಂ (ಇ-ಕೆಡಿಎಸ್ಎಸ್) ಮತ್ತು ಮುಂಭಾಗ ಮತ್ತು ಹಿಂಭಾಗದ ಡಿಫರೆನ್ಷಿಯಲ್ ಲಾಕ್‌ಗಳೊಂದಿಗೆ ಬರಲಿದೆ. ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ರೇಂಜ್-ಟಾಪಿಂಗ್ ಝಡ್‌ಎಕ್ಸ್ ಅನ್ನು ಟಾರ್ಕ್-ಸೆನ್ಸಿಂಗ್ ಸೀಮಿತ-ಸ್ಲಿಪ್ ಡಿಫರೆನ್ಷಿಯಲ್ ಹೊಂದಿರಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಜಿಎಕ್ಸ್-ಆರ್ ಮತ್ತು ಝಡ್ಎಕ್ಸ್ ಎರಡೂ ರೂಪಾಂತರಗಳು ಕ್ರಮವಾಗಿ ಮುಂಭಾಗ ಮತ್ತು ಹಿಂಭಾಗದ ಆಕ್ಸಲ್ ಗಳಲ್ಲಿ ಫ್ಹೋರ್ ಲಿಂಕ್ ಸಸ್ಪೆಂಕ್ಷನ್ ಅನ್ನು ಹೊಂದಿರುತ್ತವೆ. ಎಂಟ್ರಿ-ಲೆವೆಲ್ ರೂಪಾಂತರ ಜಿಎಕ್ಸ್ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರ ಬರಲಿದೆ. ಇನ್ನು ಜಿಆರ್-ಎಸ್ ಮತ್ತು ಝಡ್‌ಎಕ್ಸ್ ರೂಪಾಂತರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.3 ಎಲ್ ವಿ6 ಟರ್ಬೊ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇನ್ನು ಪೆಟ್ರೋಲ್ ರೂಪಾಂತರಗಳು 3.5 ಎಲ್ ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಕೂಡ ಪಡೆಯುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಹೊಸ 3.3-ಲೀಟರ್ ವಿ6 ಡೀಸೆಲ್ ಎಂಜಿನ್ 4,000 ಆರ್‌ಪಿಎಂನಲ್ಲಿ 302 ಬಿಹೆ‍ಪಿ ಪವರ್ ಮತ್ತು 1,600 ಮತ್ತು 2,600 ಆರ್‌ಪಿಎಂ ನಡುವೆ 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 3.5-ಲೀಟರ್ ವಿ6 ಪೆಟ್ರೋಲ್ ಎಂಜಿನ್ 5,400 ಆರ್‌ಪಿಎಂನಲ್ಲಿ 409 ಬಿಹೆ‍ಪಿ ಪವರ್ ಮತ್ತು 2,000 ಮತ್ತು 3,600 ಆರ್‌ಪಿಎಂ ನಡುವೆ 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಈ ಎಂಜಿನ್ ಗಳೊಂದಿಗೆ 10-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ. ಆಯ್ದ ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ 2.8 ಎಲ್, 4-ಸಿಲಿಂಡರ್ ರೈಲ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿಯು ಲಭ್ಯವಿರುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಎಂಜಿನ್ 200 ಬಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಇನ್ನು ಈ ಎಸ್‍ಯುವಿಯಲ್ಲಿ 18 ಇಂಚಿನ ವ್ಹೀಲ್ ಗಳನ್ನು ಒಳಗೊಂಡಿದೆ. ಟಾಪ್-ಎಂಡ್ ಝಡ್ಎಕ್ಸ್ ಅನ್ನು ಪ್ರತ್ಯೇಕವಾಗಿ 20 ಇಂಚಿನ ವ್ಹೀಲ್ ಗಳನ್ನು ಹೊಂದಿರಲಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಇನ್ನು ಈ ಹೊಸ ಎಸ್‍ಯುವಿಯಲ್ಲಿ ಸೈಡ್ ಸ್ಟೆಪ್ಸ್ ಮತ್ತು ಕಿಕ್-ಸೆನ್ಸರ್ ಹೊಂದಿರುವ ಚಾಲಿತ ಟೈಲ್‌ಗೇಟ್‌ನೊಂದಿಗೆ ನೀಡಲಾಗುತ್ತದೆ. 3ಡಿ ಮಲ್ಟಿ-ಟೆರೈನ್ ಮಾನಿಟರ್, ಡ್ಯುಯಲ್ 11.6-ಇಂಚಿನ ಟಚ್‌ಸ್ಕ್ರೀನ್‌ಗಳನ್ನು ಕೂಡ ಹೊಂದಿರಲಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿ

ಸ್ಮಾರ್ಟ್‌ಫೋನ್ ಕನೆಕ್ಟ್ ಮಾಡಬಹುದಾದ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಹೆಡ್ಸ್-ಅಪ್ ಡಿಸ್ ಪ್ಲೇ, ನಾಲ್ಕು ಹಂತದ ಕ್ಲೈಮೇಂಟ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ ಮತ್ತು ಇತರ ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿರುತ್ತದೆ.

Most Read Articles

Kannada
Read more on ಟೊಯೊಟಾ toyota
English summary
New Toyota Land Cruiser To Make Its Global Debut On June 9th. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X