ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ. ಸಿನಿಮಾ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಆವರು ತಮ್ಮ ಮೆಚ್ಚಿನ ಬ್ರ್ಯಾಂಡ್‌ನ ಐಷಾರಾಮಿ ಕಾರುಗಳನ್ನು ಖರೀದಿಸುತ್ತಾರೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಇತ್ತೀಚೆಗೆ ಬಹುಭಾಷಾ ನಟಿ ಭಾವನಾ ಮೆನನ್ ಅವರು ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಬೆಂಗಳೂರಿನ ಮರ್ಸಿಡಿಸ್ ಬೆಂಝ್ ಡೀಲರ್ ಆದ ಕ್ಷಯ ಮೋಟಾರ್ಸ್ ಅವರ ಬಳಿಯಿಂದ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ್ದಾರೆ. ಅಕ್ಷಯ ಮೋಟಾರ್ಸ್ ತನ್ನ ಸಾಮಾಜಿಕ ಜಾಲತಾಣಗಳ ಪುಟದಲ್ಲಿ ನಟಿ ಭಾವನಾ ಮೆನನ್ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಇನ್ನು ನಟಿ ಭಾವನಾ ಖರೀದಿಸಿರುವ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರು ಪೆಟ್ರೋಲ್ ಮತ್ತು ಡೀಸೆಲ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಆದರೆ ಇವರು ಯಾವ ಮಾದರಿಯನ್ನು ಖರೀದಿಸಿದ್ದಾರೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಸಿ-ಕ್ಲಾಸ್ ಮಾದರಿಯು ಬ್ರ್ಯಾಂಡ್‌ನ ಸಾಲಿನಲ್ಲಿರುವ ಅತ್ಯುತ್ತಮ ಮಾದರಿಗಳಲ್ಲಿ ಒಂದಾಗಿದೆ. ಇನ್ನು ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನಲ್ಲಿರುವ 2.0 ಲೀಟರ್ ಪೆಟ್ರೋಲ್ ಎಂಜಿನ್ 203 ಬಿಹೆಚ್‌ಪಿ ಪವರ್ ಮತ್ತು 280 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಇನ್ನು ಇದರೊಂದಿಗೆ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 194 ಬಿಹೆಚ್‌ಪಿ ಪವರ್ ಮತ್ತು 370 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಈ ಎರಡು ಎಂಜಿನ್ ಗಳೊಂದಿಗೆ 9-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಹೊಸ ಸಿ-ಕ್ಲಾಸ್ ಕಾರನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ಇತ್ತೀಚೆಗೆ ಈ ಹೊಸ ಕಾರನ್ನು ಜಾಗತಿಕವಾಗಿ ಅನಾವರಣಗೊಳಿಸಿತ್ತು. ಈ 2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಅನ್ನು ಸೆಡಾನ್ ಮತ್ತು ಎಸ್ಟೇಟ್ ಬಾಡಿ ಪ್ರಕಾರಗಳಲ್ಲಿ ಅನಾವರಣಗೊಳಿಸಿದೆ. ಆದರೆ ಭಾರತದಲ್ಲಿ ಸೆಡಾನ್ ಮಾದರಿಯಲ್ಲಿ ಮಾತ್ರ ಈ ಐಷಾರಮಿ ಕಾರನ್ನು ಬಿಡುಗಡೆಗೊಳಿಸಲಾಗುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

ಕಾರಿನ ಒಟ್ಟಾರೆ ಸಿಲೂಯೆಟ್ ಸಿ-ಕ್ಲಾಸ್‌ನ ಹಳೆಯ ಮಾದರಿಯಂತೆಯೇ ಉಳಿದಿದೆ. ಎರಡೂ ಸೆಡಾನ್‌ನಲ್ಲಿನ ವೀಲ್‌ಬೇಸ್ ಅನ್ನು ಹಳೆಯ ಮಾದರಿಯಿಂದ 25 ಎಂಎಂ ಹೆಚ್ಚಿಸಲಾಗಿದೆ. ಹಿಂದಿನ ಮಾದರಿಗಿಂತ 30 ಲೀಟರ್ ಬೂಟ್-ಸ್ಪೇಸ್ ಹೆಚ್ಚಳದೊಂದಿಗೆ ಒಟ್ಟಾರೆ ಉದ್ದವು ಈಗ 65 ಎಂಎಂ ಆಗಿದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರನ್ನು ಖರೀದಿಸಿದ ಬಹುಭಾಷಾ ನಟಿ ಭಾವನಾ

2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರು ಹೊಸ ಫೀಚರ್ ಗಳು, ತಂತ್ರಜ್ಞಾನ ಮತ್ತು ವಿನ್ಯಾಸದೊಂದಿಗೆ ನವೀಕರಿಸಲಾಗಿದೆ. ಈ ಹೊಸ ಸಿ-ಕ್ಲಾಸ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 3 ಸೀರಿಸ್, ಆಡಿ ಎ4 ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Actress Bhavana Bought Mercedes Benz C-class. Read In Kannada.
Story first published: Wednesday, March 3, 2021, 18:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X