ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರು ಮಾರಾಟ ವಿಭಾಗದಲ್ಲಿ ವಿವಿಧ ಕಂಪನಿಗಳು ವಿನೂತನ ಆವೃತ್ತಿಗಳೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ Citroën ಕೂಡಾ ಶೀಘ್ರದಲ್ಲೇ ತನ್ನ ಹೊಸ ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡಲಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿಯು ಭಾರತದಲ್ಲಿ ಮಾರಾಟವಾಗುತ್ತಿರುವ ಇತರೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರಿನ ಕಂಪನಿಯು ಫ್ಲೆಕ್ಸ್ ಫ್ಯೂಲ್ ಎಂಜಿನ್ ಆಯ್ಕೆ ನೀಡುತ್ತಿರುವುದು ಪ್ರಮುಖ ಆಕರ್ಷಣೆಯಾಗಲಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೌದು, ವಿಶ್ವಾದ್ಯಂತ ಇಂಧನಗಳ ಬೆಲೆ ಏರಿಕೆಯಾಗುತ್ತಿರುವ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್‌ಗೆ ಪರ್ಯಾಯವಾದ ಇಂಧನಗಳ ಮೇಲೆ ಕಾರ್ಯನಿರ್ವಹಿಸುವ ಹೊಸ ವಾಹನಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಫ್ಲೆಕ್ಸ್ ಫ್ಯೂಲ್ ವಾಹನಗಳು ಹೊಸ ಭರವಸೆ ಮೂಡಿಸುತ್ತಿವೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇಂಧನ ಬಳಕೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದ್ದರೂ ಪರ್ಯಾಯ ಇಂಧನಗಳ ಚಾಲಿತ ವಾಹನಗಳ ಆವಿಷ್ಕಾರ ಕೂಡಾ ಜೋರಾಗಿದ್ದು, Citroën ಕಂಪನಿಯು ಭಾರತದಲ್ಲಿ ಬಿಡುಗಡೆಯಾಗುತ್ತಿರುವ ತನ್ನ ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಫ್ಲೆಕ್ಸ್ ಫ್ಯೂಲ್ ಎಂಜಿನ್ ಸೇರ್ಪಡೆಗೆ ಮುಂದಾಗಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಾಕಷ್ಟು ಪ್ರಮಾಣದ ಮೂಲಭೂತ ಸೌಕರ್ಯ ಲಭ್ಯವಿಲ್ಲದ ಕಾರಣ ಮಾರುಕಟ್ಟೆಯಲ್ಲಿ ದುಬಾರಿ ದರದ ನಡುವೆಯೂ ಪೆಟ್ರೋಲ್ ಮತ್ತು ಡೀಸೆಲ್ ವಾಹನ ಮಾರಾಟವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಿಎನ್‌ಜಿ ಕಾರುಗಳು ಇತ್ತೀಚೆಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿವೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಆದರೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸುವಷ್ಟು ಎಲೆಕ್ಟ್ರಿಕ್ ಮತ್ತು ಸಿಎನ್‌ಜಿ ಕಾರುಗಳು ಜನಪ್ರಿಯತೆಯನ್ನು ಸಾಧಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಿಣ ಪ್ರಮಾಣವನ್ನು ಹೆಚ್ಚಳ ಮಾಡಲಾಗುತ್ತಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಕೃಷಿ ತಾಜ್ಯಗಳಿಂದ ಲಭ್ಯವಾಗುವ ಎಥೆನಾಲ್ ಪ್ರಮಾಣವನ್ನು ಪೆಟ್ರೋಲ್‌ನಲ್ಲಿ ಮಿಶ್ರಣ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದ್ದು, ಇದೇ ತಂತ್ರಜ್ಞಾನದ ಮೇಲೆ Citroën ಕಂಪನಿಯು ತನ್ನ ಹೊಸ ಕಾರನ್ನು ಪೆಟ್ರೋಲ್ ಮತ್ತು ಎಥೆನಾಲ್ ಎರಡರಿಂದಲೂ ಚಾಲನೆ ಮಾಡುವಂತೆ ಅಭಿವೃದ್ದಿಪಡಿಸುತ್ತಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ವಾಹನಗಳು ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣದೊಂದಿಗೆ ಚಾಲನೆಗೆ ಹೊಂದಿಕೊಳ್ಳುವುದು ಕಷ್ಟವಾಗಲಿದೆ. ಕೇಂದ್ರ ಸರ್ಕಾರವು ಇದಕ್ಕಾಗಿ ಹಂತ-ಹಂತವಾಗಿ ಎಥೆನಾಲ್ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಇದಕ್ಕೆ ಪೂರಕವಾಗಿ ಫ್ಲೆಕ್ಸ್ ಫ್ಯೂಲ್ ಎಂಜಿನ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ Citroën ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಸಂಪೂರ್ಣವಾಗಿ ಎಥೆನಾಲ್ ಇಲ್ಲವೇ ಪೆಟ್ರೋಲ್ ಮೂಲಕ ಸಂಚರಿಸುವಂತೆ ಅಭಿವೃದ್ದಿಪಡಿಸುತ್ತಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

E85 ಗ್ಯಾಸ್ ಮೇಲೆ ಸಂಚರಿಸುವ ಫ್ಲೆಕ್ಸ್ ಫ್ಯೂಲ್ ಕಾರುಗಳು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಕಾರ್ಯಕ್ಷಮತೆ ಜೊತೆಗೆ ಅತಿ ಕಡಿಮೆ ಮಾಲಿನ್ಯವನ್ನು ಹೊರಸೂಸುತ್ತದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೀಗಾಗಿ ಹೊಸ ತಂತ್ರಜ್ಞಾನ ಪ್ರೇರಿತ ಕಾರು ಮಾದರಿಗಳನ್ನು ಅಭಿವೃದ್ದಿಗೊಳಿಸುತ್ತಿರುವ Citroën ಕಂಪನಿಯು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ C3 ಮಾದರಿಗಾಗಿ ಫ್ಲೆಕ್ಸ್ ಫ್ಯೂಲ್ ಎಂಜಿನ್ ಜೋಡಣೆ ಮಾಡುತ್ತಿದ್ದು, ಹೊಸ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯ ನೀರಿಕ್ಷೆಯಲ್ಲಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ Citroën ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಹಂತ-ಹಂತವಾಗಿ ಪೂರ್ಣಗೊಳಿಸುತ್ತಿದ್ದು, ಶೀಘ್ರದಲ್ಲೇ ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಲಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್(4 ಮೀಟರ್ ಉದ್ದಳತೆಗಿಂತಲೂ ಕಡಿಮೆ) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಆಕರ್ಷಕ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕನ್ನು ಸೆಳೆಯಲಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು Citroën ಕಂಪನಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು 1.2-ಲೀಟರ್ ಪೆಟ್ರೋಲ್( ಫ್ಲೆಕ್ಸ್ ಫ್ಯೂಲ್) ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಹೊಸ ಭಾರತದಲ್ಲಿ ಫ್ಲೆಕ್ಸ್ ಫ್ಯೂಲ್ ಆಯ್ಕೆ ಹೊಂದಿರುವ ಮೊದಲ ಕಾರು ಮಾದರಿಯಾಗಿದೆ.

ಫ್ಲೆಕ್ಸ್ ಫ್ಯೂಲ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ Citroën ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ಮೂಲಕ Citroën ಕಂಪನಿಯು ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್, ರೆನಾಲ್ಟ್ ಕಿಗರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ಯೋಜನೆಯಲ್ಲಿದೆ.

Most Read Articles

Kannada
English summary
All new citroen c3 compact suv likely to be the first car with a flex fuel engine in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X