ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರಿನ ವಿಡಿಯೋ ರಿವ್ಯೂ
ಕಾರು ಉತ್ಪಾದನೆಯಲ್ಲಿ ಸುಮಾರು ನೂರು ವರ್ಷಗಳ ಅನುಭವ ಹೊಂದಿರುವ ಫ್ರೆಂಚ್ ಕಂಪನಿ ಸಿಟ್ರನ್ ಇದೇ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರು ಉತ್ಪನ್ನಗಳೊಂದಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದು, ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಕಾರು ಬಿಡುಗಡೆಗೊಳಿಸುತ್ತಿದೆ.
ಸಿಟ್ರನ್ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಸಿಟ್ರನ್ ಕಂಪನಿಯು ಹೊಸ ಕಾರಿನ ಕಾರ್ಯಕ್ಷಮತೆ ಕುರಿತಾಗಿ ಪರೀಕ್ಷಿಸಲು ಡ್ರೈವ್‌ಸ್ಪಾರ್ಕ್ ತಂಡವನ್ನು ಆಹ್ವಾನಿಸಿತ್ತು. ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಯಲ್ಲೇ ವಿಭಿನ್ನವಾದ ವಿನ್ಯಾಸ ಮತ್ತು ಹಲವಾರು ಐಷಾರಾಮಿ ಸೌಲಭ್ಯಗಳನ್ನು ಒದಗಿಸಲಿದೆ.

ಎಸ್‌ಯುವಿ ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವ ಸಿ5 ಏರ್‌ಕ್ರಾಸ್ ಕಾರು ಮಾದರಿಯು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದೆ.

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಸಿಟ್ರನ್ ಕಂಪನಿಯು 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಎಂಜಿನ್ ಮಾದರಿಯು 8 ಸ್ಟೀಡ್ ಆಟೋಮ್ಯಾಟಿಕ್ ಸ್ಟ್ಯಾಂಡರ್ಡ್ ಗೇರ್‌ಬಾಕ್ಸ್‌ನೊಂದಿಗೆ 175-ಬಿಎಚ್‌ಪಿ ಮತ್ತು 400 ಎನ್ಎಂ ಉತ್ಪಾದಿಸುವ ಮೂಲಕ ಪ್ರತಿ ಲೀಟರ್‌ಗೆ 18.06 ಕಿಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ಟ್ಯುಸಾನ್, ಸ್ಕೋಡಾ ಕರೋಕ್, ಫೋಕ್ಸ್‌ವ್ಯಾಗನ್ ಟಿ ರಾಕ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications