ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್ ತನ್ನ ಹೊಸ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿರುವ ಸಿಟ್ರನ್ ಕಂಪನಿಯು ಹೊಸ ಕಾರಿನ ಮಾರಾಟಕ್ಕೆ ಚಾಲನೆ ನೀಡಲು ಆಯ್ದ ಡೀಲರ್ಸ್‌ಗಳಲ್ಲಿ ಹೊಸ ಕಾರನ್ನು ಪ್ರದರ್ಶನಗೊಳಿಸಲಾಗುತ್ತಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಎಸ್‌ಯುವಿ ಕಾರು ಮಾದರಿಯಲ್ಲೇ ವಿಭಿನ್ನವಾದ ಶೈಲಿ ಹೊಂದಿರುವ ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದು, ಶೀಘ್ರದಲ್ಲೇ ಕಂಪನಿಯು ಆಸಕ್ತ ಗ್ರಾಹಕರಿಗೆ ಟೆಸ್ಟ್ ಡ್ರೈವ್ ಆರಂಭಿಸಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿಯಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಕಾರಿನ ಖದರ್‌ಗೆ ಪೂರಕವಾದ ಸರೌಂಡ್ ಬ್ಲ್ಯಾಕ್ ಕ್ಲಾಡಿಂಗ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಹಾಗೆಯೇ ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ಎಲ್ಇಡಿ ಟೈಲ್‌ಲೈಟ್, ರೂಫ್ ಮೌಂಟೆಡ್ ಸ್ಪಾಯ್ಲರ್‌ನೊಂದಿಗೆ ಆಕರ್ಷಕ ನೋಟ ಹೊಂದಿದ್ದು, ಹೊಸ ಕಾರಿನ ಕಾರಿನ ಒಳಭಾಗವು ಕೂಡಾ ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳಿಂದ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ. ಇದರೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೊಲ್ ಜೊತೆ ಎಂಟು ಇಂಚಿನ ಟಚ್‌ಸ್ಕ್ರೀನ್ ಇನ್ಟೋಟೈನ್‌ಮೆಂಟ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಹೈ ಎಂಡ್ ಮಾದರಿಗಳಲ್ಲಿ ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್, ಏರ್ ಪ್ಯೂರಿಫೈರ್, ಪ್ರತ್ಯೇಕವಾಗಿರುವ ಆಗಿರುವ ಎಸಿ ವೆಂಟ್ಸ್ ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಜೊತೆಗೆ ಹೊಸ ಕಾರಿನ ಹಿಂಬದಿಯಲ್ಲಿ ಆಸನ ಸಾಲಿನಲ್ಲಿ ಮೂರು ಜನ ಪ್ರಯಾಣಿಕರು ಆರಾಮವಾಗಿ ಕುಳಿತುಕೊಳ್ಳಬಹುದಾದ ಆಸನ ಸೌಲಭ್ಯವನ್ನು ನೀಡಿದ್ದು, ಸೆಗ್ಮೆಂಟ್ ಮಾದರಿಯಲ್ಲೇ ಅತಿ ಹೆಚ್ಚು ಉದ್ದಳತೆ ಮತ್ತು ಅಗಲವಾದ ವಿನ್ಯಾಸವನ್ನು ಹೊಂದಿರುವುದೇ ಕ್ಯಾಬಿನ್ ವಿಶಾಲವಾಗಿರಲು ಪ್ರಮುಖ ಕಾರಣವಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 1,969 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಾಗಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಸಿ5 ಏರ್‌ಕ್ರಾಸ್ ಕಾರಿನಲ್ಲಿ ಸಿಟ್ರನ್ ಕಂಪನಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಎಂಜಿನ್ ಮಾದರಿಯು 8 ಸ್ಟೀಡ್ ಆಟೋಮ್ಯಾಟಿಕ್ ಸ್ಟ್ಯಾಂಡರ್ಡ್ ಗೇರ್‌ಬಾಕ್ಸ್‌ನೊಂದಿಗೆ 175-ಬಿಎಚ್‌ಪಿ ಮತ್ತು 400 ಎನ್ಎಂ ಉತ್ಪಾದಿಸುವ ಮೂಲಕ ಪ್ರತಿ ಲೀಟರ್‌ಗೆ 18.06 ಕಿಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಾದ ಹ್ಯುಂಡೈ ಟ್ಯುಸಾನ್, ಸ್ಕೋಡಾ ಕರೋಕ್, ಫೋಕ್ಸ್‌ವ್ಯಾಗನ್ ಟಿ ರಾಕ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 27 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

Most Read Articles

Kannada
English summary
Citroen C5 Aircross Reaches Dealerships. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X