ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಸಿಟ್ರನ್ ಕಂಪನಿಯು ಭಾರತದಲ್ಲಿ ತನ್ನ ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಐಷಾರಾಮಿ ಎಸ್‌ಯುವಿ ಮಾದರಿಯ ಬಿಡುಗಡೆಯೊಂದಿಗೆ ದೇಶಿಯ ಮಾರುಕಟ್ಟೆ ಪ್ರವೇಶಿಸಿದ್ದು, ಕಂಪನಿಯು ಎರಡನೇ ಕಾರು ಮಾದರಿಯಾಗಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಸಿ5 ಏರ್‌ಕ್ರಾಸ್ ಏಸ್‌ಯುವಿ ಕಾರು ಮಾದರಿಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 31.90 ಲಕ್ಷಕ್ಕೆ ಬಿಡುಗಡೆ ಮಾಡಿದ್ದು, ಎರಡನೇ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ. ಸಿ5 ಏರ್‌ಕ್ರಾಸ್ ಏಸ್‌ಯುವಿ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಐಷಾರಾಮಿ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮಧ್ಯಮ ಗ್ರಾಹಕರನ್ನು ಗುರಿಯಾಗಿಸಿಕೊಂಡು ಅಭಿವೃದ್ದಿಗೊಳಿಸಲಾಗುತ್ತಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಸಿಟ್ರನ್ ಕಂಪನಿಯು ವಿವಿಧ ಮಾದರಿಯ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು ಬಿಡುಗಡೆ ಮಾಡುತ್ತಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಯೊಂದಿಗೆ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿರುವ ಸಿಟ್ರನ್ ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವ ಯೋಜನೆ ಹೊಂದಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡಿರುವ ಸಿಟ್ರನ್ ಕಂಪನಿಯ ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ಬಿಡುಗಡೆ ಮಾಡುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಪೂರ್ವ ನಿಗದಿಯೆಂತೆ ಸಿ5 ಏರ್‌ಕ್ರಾಸ್ ಮಾದರಿಗಾಗಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿರುವುದಾಗಿ ಹೇಳಿಕೊಂಡಿದ್ದ ಸಿಟ್ರನ್ ಕಂಪನಿಯು ಮುಂಬರುವ ಕಾರುಗಳಲ್ಲಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಹೀಗಾಗಿ ಮುಂಬರುವ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಗೇರ್‌ಬಾಕ್ಸ್ ಆಯ್ಕೆಗಳಿರಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಸಿಟ್ರನ್ ಕಂಪ್ಯಾಕ್ಟ್ ಎ‌ಸ್‌ಯುವಿ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದ್ದು, ಹೊಸ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಉತ್ತಮ ಪೈಟೋಟಿ ನೀಡಲಿದೆ.

More from DriveSpark

Article Published On: Friday, April 9, 2021, 23:54 [IST]
English summary
Upcoming Citroen Cars Will Launch With More Affordable Price. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+