ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಹ್ಯುಂಡೈ ಕಂಪನಿಯು ಮುಂದಿನ ಏಪ್ರಿಲ್ 6ರಂದು ತನ್ನ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಅನಾವರಣಕ್ಕೂ ಮುನ್ನ ಹೊಸ ಕಾರಿನ ವಿನ್ಯಾಸದ ಕುರಿತಾಗಿ ರೇಖಾಚಿತ್ರಗಳನ್ನು ಬಿಡುಗಡೆಗಳನ್ನು ಬಿಡುಗಡೆ ಮಾಡಿದೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಬಹುನೀರಿಕ್ಷಿತ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕ್ರೆಟಾ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಕಾರು ಎಸ್‌ಯುವಿ ಕಾರು ಮಾದರಿಗಳ ಜೊತೆಗೆ ಎಂಪಿವಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಅಲ್ಕಾಜರ್ ಕಾರಿನಲ್ಲಿ ವಿಸ್ತರಿತ ಕ್ಯಾಬಿನ್‌ನೊಂದಿಗೆ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಆಯ್ಕೆ ಮಾಡಬಹುದಾಗಿದೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಹೊಸ ಕಾರಿನ 6 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿವೆ. ಹೊಸ ವೈಶಿಷ್ಟ್ಯತೆಗಳಿವೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಕ್ಯಾಬಿನ್ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಈ ಮೂಲಕ ಮಧ್ಯಮ ಕ್ರಮಾಂಕದಲ್ಲೇ 7 ಸೀಟರ್ ಕಾರು ಮಾದರಿಗಳನ್ನು ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿರುವ ಕಂಪನಿಯು ಹೊಸ ಕಾರನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಇನ್ನು ಹೊಸ ಅಲ್ಕಾಜರ್ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಹೊಸ ಕಾರಿಗಾಗಿ ಸದ್ಯ ಕ್ರೆಟಾ ಮಾದರಿಯಲ್ಲಿ ಜೋಡಿಸಲಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಅನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಯು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೀಗಿರಲಿದೆ ಹ್ಯುಂಡೈ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ವರ್ಷನ್!

ಈ ಮೂಲಕ ಎಂಪಿವಿ ಮಾದರಿಯಲ್ಲಿ ಸದ್ಯ ಜನಪ್ರಿಯವಾಗಿರುವ ಇನೋವಾ ಕ್ರಿಸ್ಟಾ ಗ್ರಾಹಕರನ್ನು ಸಹ ಸೆಳೆಯಲು ಯತ್ನಿಸುತ್ತಿಸುರುವ ಹ್ಯುಂಡೈ ಕಂಪನಿಯು ಬೃಹತ್ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

More from DriveSpark

Article Published On: Tuesday, March 23, 2021, 14:49 [IST]
English summary
Hyundai ALCAZAR Sketches Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+