Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ
ಹ್ಯುಂಡೈ ಇಂಡಿಯಾ ಮುಂದಿನ ವಾರವಷ್ಟೇ ತನ್ನ ಹೊಚ್ಚ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಹೊಂದಿರುವ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಹುನೀರಿಕ್ಷಿತ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕ್ರೆಟಾ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತ್ಯುತ್ತಮ ಎಂಜಿನ್ ಆಯ್ಕೆಗಳನ್ನು ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕ್ರೆಟಾ ಮಾದರಿಯನ್ನು ಆಧರಿಸಿರುವ ಹೊಸ ಅಲ್ಕಾಜರ್ ಕಾರು ಕ್ರೆಟಾ ಕಾರು ಮಾದರಿಯಲ್ಲೇ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆಯ್ಕೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿತ್ತು. ಆದರೆ ಹೊಸ ಕಾರಿನಲ್ಲಿ ಕಂಪನಿಯು ಎಲಾಂಟ್ರಾ ಮತ್ತು ಟ್ಯುಸಾನ್ ಮಾದರಿಯಲ್ಲಿರುವ 2.0-ಲೀಟರ್ ಪೆಟ್ರೋಲ್ ಮಾದರಿಯನ್ನು ಪಡೆದುಕೊಳ್ಳಲಿದೆ.

ಹಾಗೆಯೇ ಪರ್ಫಾಮೆನ್ಸ್ ಮಾದರಿಗಾಗಿ 1.4-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಡೀಸೆಲ್ ಎಂಜಿನ್ ಬಿಡುಗಡೆ ಮಾಡುವ ಬಗ್ಗೆ ಯಾವುದೇ ನಿಖರ ಮಾಹಿತಿಗಳು ಲಭ್ಯವಿಲ್ಲ.

ಮುಂದಿನ ತಿಂಗಳು ಏಪ್ರಿಲ್ 6ರಂದು ಉತ್ಪಾದನಾ ಆವೃತ್ತಿಯ ಅನಾವರಣದೊಂದಿಗೆ ಹೊಸ ಕಾರಿನ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ಅಲ್ಕಾಜರ್ ಮಾರಾಟಕ್ಕೆ ಚಾಲನೆ ನೀಡಲಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಆಯ್ಕೆ ಮಾಡಬಹುದಾಗಿದೆ.

ಅಲ್ಕಾಜರ್ ಕಾರಿನಲ್ಲಿ ವಿಸ್ತರಿತ ಕ್ಯಾಬಿನ್ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನ 6 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಹಿಂಬದಿಯ ಸವಾರರಿಗೂ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿದ್ದು, 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

ಈ ಮೂಲಕ ಮಧ್ಯಮ ಕ್ರಮಾಂಕದಲ್ಲೇ 7 ಸೀಟರ್ ಕಾರು ಮಾದರಿಗಳನ್ನು ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿರುವ ಕಂಪನಿಯು ಹೊಸ ಕಾರನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇನ್ನು ಹೊಸ ಅಲ್ಕಾಜರ್ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಯು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಎಂಪಿವಿ ಮಾದರಿಯಲ್ಲಿ ಸದ್ಯ ಜನಪ್ರಿಯವಾಗಿರುವ ಇನೋವಾ ಕ್ರಿಸ್ಟಾ ಗ್ರಾಹಕರನ್ನು ಸಹ ಸೆಳೆಯಲು ಯತ್ನಿಸುತ್ತಿಸುರುವ ಹ್ಯುಂಡೈ ಕಂಪನಿಯು ಬೃಹತ್ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.