ಪ್ರತಿ ಸ್ಪರ್ಧಿ ಕಾರುಗಳಿಂತಲೂ ಉತ್ತಮ ಇಂಧನ ದಕ್ಷತೆ ಹೊಂದಿದೆ ಹ್ಯುಂಡೈ ಅಲ್ಕಾಜರ್
ಹೊಚ್ಚ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ ಇದೇ ತಿಂಗಳು 18ರಂದು ಅಧಿಕೃತವಾಗಿ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಹಲವಾರು ವಿಭಿನ್ನ ತಾಂತ್ರಿಕ ಅಂಶಗಳೊಂದಿಗೆ ಗ್ರಾಹಕರನ್ನು ಸೆಳೆಯಲು ಸಿದ್ದವಾಗಿದೆ.

ಅಲ್ಕಾಜರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅತ್ಯುತ್ತಮ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದ್ದು, ಹೊಸ ಕಾರು ಅಧಿಕೃತವಾಗಿ ಬಿಡುಗಡೆಗೂ ಮುನ್ನ ಹೊಸ ಕಾರಿನಲ್ಲಿ ಪ್ರಮುಖ ತಾಂತ್ರಿಕ ಸೌಲಭ್ಯಗಳ ಮಾಹಿತಿ ಲಭ್ಯವಾಗಿದೆ.

ಕ್ರೆಟಾ ಕಾರು ಮಾದರಿಯನ್ನು ಆಧರಿಸಿರುವ ಅಲ್ಕಾಜರ್ ಕಾರು ಮಾದರಿಯಲ್ಲಿ ಹ್ಯುಂಡೈ ಕಂಪನಿಯು ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

2.0-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಗಳು ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ಪೆಟ್ರೋಲ್ ಮಾದರಿಯು 159-ಬಿಎಚ್‌ಪಿ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 115-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲವು.

ಎರಡು ಎಂಜಿನ್‌ಗಳಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳಿದ್ದು, ಪೆಟ್ರೋಲ್ ಮಾದರಿಯ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 14.5 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 14.5 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5 ಲೀಟರ್ ಡೀಸೆಲ್ ಮಾದರಿಯ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 20.4 ಕಿ.ಮೀ ಮತ್ತು ಆಟೋಮ್ಯಾಟಿಕ್ ಮಾದರಿಯು 18.1 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇದರೊಂದಿಗೆ ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ 150 ಎಂಎಂ ಹೆಚ್ಚುವರಿ ವೀಲ್ಹ್‌ಬೆಸ್‌ನೊಂದಿಗೆ ಮೂರನೇ ಸಾಲಿನ ಆಸನಕ್ಕಾಗಿ ಉತ್ತಮ ಸ್ಥಳಾವಕಾಶ ಹೊಂದಿದ್ದು, ಪ್ಲ್ಯಾಟಿನಂ, ಪ್ರೆಸ್ಟಿಜ್, ಸಿಗ್ನಿಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟಿಜ್ ಆಪ್ಷನ್ ಮತ್ತು ಸಿಗ್ನಿಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರಲಿದೆ.

ಹೊಸ ಕಾರು ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಅಲ್ಕಾಜರ್ ಕಾರಿನಲ್ಲಿ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.


Click it and Unblock the Notifications








