Just In
- 53 min ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 14 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 15 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 16 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಮುಖ ಮೂರು ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಮಹೀಂದ್ರಾ ಎಕ್ಸ್ಯುವಿ700
ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್ಯುವಿ700 ಎಸ್ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆಯಲ್ಲಿದ್ದು, ಮುಂಬರುವ ಅಗಸ್ಟ್ ಹೊತ್ತಿಗೆ ಬಿಡುಗಡೆಯಾಗಲಿರುವ ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್ಯುವಿ ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುವ ಸಿದ್ದತೆಯಲ್ಲಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನೇ ಎಕ್ಸ್ಯುವಿ700 ಮಾದರಿಯಾಗಿ ಮಾರಾಟ ಮಾಡಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್ಸೈಟ್ನಲ್ಲೂ ಪ್ರದರ್ಶನಗೊಳಿಸಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್ಗಳೊಂದಿಗೆ ಬಲಿಷ್ಠ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಿದ್ದತೆಯಲ್ಲಿದೆ.
ಹೊಸ ಎಕ್ಸ್ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್ಯುವಿ500 ಮಾದರಿಯು ಎಕ್ಸ್ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಮಾರುಕಟ್ಟೆ ಪ್ರವೇಶಿಸಲಿದೆ.
ಹೊಸ ಎಕ್ಸ್ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಡೀಸೆಲ್ ಪವರ್ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.
2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸದ್ಯ ಕಂಪನಿಯು 180 ಬಿಎಚ್ಪಿ, 190 ಬಿಎಚ್ಪಿ ಮತ್ತು 210 ಬಿಎಚ್ಪಿ ಟ್ಯೂನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಹೊಸ ಕಾರು ಉತ್ಪಾದನಾ ಮಾದರಿಯಲ್ಲಿ 180-ಬಿಎಚ್ಪಿ ಮಾದರಿಯನ್ನು ಪಡೆದುಕೊಳ್ಳುವ ನೀರಿಕ್ಷೆಗಳಿವೆ.
ಹೊಸ ಕಾರಿನಲ್ಲಿ ನೀಡಲಾಗುತ್ತಿರುವ ಪೆಟ್ರೋಲ್ ಎಂಜಿನ್ ಮಾಹಿತಿ ಲಭ್ಯವಿಲ್ಲವಾದರೂ ಥಾರ್ ಮಾದರಿಯಲ್ಲಿ ನೀಡಲಾಗಿರುವ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ಕಂಪನಿಯು ಡೀಸೆಲ್ ಮಾದರಿಯ ಹೈ ಎಂಡ್ ಆವೃತ್ತಿಯಲ್ಲಿ 210 ಬಿಎಚ್ಪಿ ಮಾದರಿಯನ್ನು ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿಗಳಿವೆ.
ಇನ್ನು ಮಹೀಂದ್ರಾ ಕಂಪನಿಯು ಎಕ್ಸ್ಯುವಿ500 ಮಾದರಿಯನ್ನು ಎಕ್ಸ್ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಲಾಗಿದ್ದು, ಎಕ್ಸ್ಯುವಿ700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್ಯುವಿ500 ಮಾದರಿಯನ್ನು ಹೊಸ ಬದಲಾವಣೆಯೊಂದಿಗೆ 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.
ಎಕ್ಸ್ಯುವಿ700 ಬಿಡುಗಡೆಯ ನಂತರ ಎಕ್ಸ್ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.
ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.