ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ ಅಂಕ ಪಡೆಯುವ ವಿಶ್ವಾಸದಲ್ಲಿದೆ Mahindra XUV700 ಎಸ್‌ಯುವಿ
Mahindra ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ XUV700 ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ವಿನೂತನ ವಿನ್ಯಾಸ, ಪವರ್‌ಫುಲ್ ಎಂಜಿನ್ ಆಯ್ಕೆಯ ಜೊತೆಗೆ ಪ್ರಯಾಣಿಕರ ಸುರಕ್ಷತೆಯಲ್ಲೂ ಮುಂಚೂಣಿ ಸಾಧಿಸಿದೆ.

ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣಗೊಂಡಿರುವ XUV700 ಎಸ್‌ಯುವಿ ಕಾರು ಮಾದರಿಯು ಸಂಪೂರ್ಣವಾಗಿ ಹೊಸ ತಂತ್ರಜ್ಞಾನ, ವಿನೂತನ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ಪಡೆದುಕೊಂಡಿದೆ. ಹೀಗಾಗಿ ಹೊಸ ಕಾರು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದು, ಕಂಪನಿಯ ಆಂತರಿಕ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹೊಸ ಕಾರು ಉತ್ತಮ ಪ್ರದರ್ಶನ ತೋರಿದೆ.

ಹೊಸ ಕಾರುಗಳಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸಲು Mahindra ಕಂಪನಿಯು ತನ್ನ ಹೊಸ ಕಾರುಗಳಲ್ಲಿ ಸಾಕಷ್ಟು ಬದಲಾವಣೆ ಪರಿಚಯಿಸುವುದರ ಜೊತೆಗೆ ಗುಣಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡುತ್ತಿದೆ.

XUV300 ಮಾದರಿಯ ಕ್ರ್ಯಾಶ್ ಟೆಸ್ಟಿಂಗ್ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಗ್ರಾಹಕರ ವಿಶ್ವಾಸ ಗಳಿಸುತ್ತಿರುವ Mahindra ಕಂಪನಿಯು ಇದೀಗ XUV700 ಮಾದರಿಯಲ್ಲೂ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Mahindra ಹೊಸ ಕಾರು ಬಿಡುಗಡೆಗೂ ಮುನ್ನ ತನ್ನ ಕಾರು ಉತ್ಪಾದನಾ ಘಟಕದಲ್ಲಿರುವ ಆಂತರಿಕ ಕ್ರ್ಯಾಶ್ ಟೆಸ್ಟಿಂಗ್ ಮೂಲಕ ಹೊಸ ಕಾರಿನಲ್ಲಿರುವ ಸುರಕ್ಷಾ ಫೀಚರ್ಸ್‌ಗಳನ್ನು ಪರೀಕ್ಷಿಸಿದ್ದು, ನಿಗದಿತ ಅವಧಿಯೊಳಗೆ ಏರ್‌ಬ್ಯಾಗ್ ಕಾರ್ಯನಿರ್ವಹಣೆ ಮತ್ತು ಬಾಡಿ ಇಂಪ್ಯಾಕ್ಟ್‌ನಲ್ಲಿ ಉತ್ತಮ ಗುಣಮಟ್ಟದೊಂಗಿಗೆ ಕನಿಷ್ಠ ಹಾನಿಯ ಬಗ್ಗೆ ಖಾತ್ರಿಪಡಿಸಿಕೊಂಡಿದೆ.

ಹೊಸ ಕಾರು ಬಿಡುಗಡೆಯ ನಂತರ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ನಡೆಸಲಿಸಲಿರುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಭಾಗಿಯಾಗಲಿದ್ದು, ವಿವಿಧ ಹಂತದಲ್ಲಿ ನಡೆಯಲಿರುವ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ XUV700 ಕಾರಿನ ನಿಖರವಾದ ಸೇಫ್ಟಿ ರೇಟಿಂಗ್ಸ್ ಬಹಿರಂಗವಾಗಲಿದೆ.

ಸದ್ಯಕ್ಕೆ ಆತಂರಿಕವಾಗಿ ಜೋಡಣೆ ಮಾಡಿಕೊಳ್ಳಲಾಗಿರುವ ಟೆಸ್ಟಿಂಗ್ ಸೌಲಭ್ಯದೊಂದಿಗೆ ಪರೀಕ್ಷೆ ನಡೆಸಲಾಗಿದ್ದು, ಮೋಟಾರ್ ವಿಕಟನ್ ಸುದ್ದಿ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ನಲ್ಲಿ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ.
ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ ಹೊಸ ಸಂಚಲನಕ್ಕಾಗಿ XUV700 ಮಾದರಿಯು ಸುಮಾರು 15 ಕಾರು ಮಾದರಿಗಳಿಗೆ ಪೈಪೋಟಿಯಾಗಿ ಅಚ್ಚರಿಯ ಬೆಲೆಗಳಲ್ಲಿ ಬಿಡುಗಡೆಯಾಗುತ್ತಿದ್ದು, Mahindra ಕಂಪನಿಯು ಹೊಸ ಕಾರಿನ ಆರಂಭಿಕ ಮಾದರಿಯ ಬೆಲೆ ಮಾಹಿತಿ ಬಹಿರಂಗ ಪಡಿಸಿ ಎಸ್‌ಯುವಿ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದೆ.

ಹೊಸ ಕಾರು ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ನಲ್ಲಿ ಬಿಡುಗಡೆಯಾಗಲಿದ್ದು, ಇದರಲ್ಲಿ ಎಂಎಕ್ಸ್ ಸೀರಿಸ್ ಮಾದರಿಗಳು 5 ಸೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದರೆ ಆಂಡ್ರಿನೊಎಕ್ಸ್ ಸೀರಿಸ್ ಕಾರುಗಳು 7 ಸೀಟರ್ ಸೌಲಭ್ಯದೊಂದಿಗೆ ತುಸು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿವೆ.

Mahindra ಕಂಪನಿಯು 5 ಸೀಟರ್ ಸೌಲಭ್ಯದ ಎಂಎಕ್ಸ್ ಸೀರಿಸ್ ಎಕ್ಸ್‌ಯುವಿ700 ಮಾದರಿಯ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆಗೆ ನಿಗದಿಪಡಿಸಿದ್ದು, ಎಂಎಕ್ಸ್ ಸೀರಿಸ್ ಕಾರುಗಳನ್ನು ಮ್ಯಾನುವಲ್ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಮಾತ್ರ ಮಾರಾಟ ಮಾಡಲಿದೆ.

ಸದ್ಯಕ್ಕೆ ಎಂಎಕ್ಸ್ ಸರಣಿ ಕಾರಿನ ಬೆಲೆ ಮಾಹಿತಿ ಹಂಚಿಕೊಂಡರುವ Mahindra ಕಂಪನಿಯು ಶೀಘ್ರದಲ್ಲೇ ಹೈ ಎಂಡ್ ಮಾದರಿಯಾದ ಆಂಡ್ರಿನೊಎಕ್ಸ್ ಸೀರಿಸ್ XUV700 ಎಸ್‌ಯುವಿ ಬೆಲೆ ಮಾಹಿತಿ ಹಂಚಿಕೊಳ್ಳಲಿದ್ದು, ಎಂಎಕ್ಸ್ ಸರಣಿಗಿಂತಲೂ ಆಂಡ್ರಿನೊಎಕ್ಸ್ ಸರಣಿ ಮಾದರಿಗಳ ಬೆಲೆ ತುಸು ದುಬಾರಿಯಾಗಿರಲಿದೆ.

ಹೊಸ ಕಾರಿನಲ್ಲಿ ಹಲವಾರು ಹೊಸ ತಂತ್ರಜ್ಞಾನ ಸೌಲಭ್ಯಗಳನ್ನು ಜೋಡಿಸಿದ್ದು, ಆಕರ್ಷಕ ಗ್ರಿಲ್ ಜೊತೆ ವರ್ಟಿಕಲ್ ಸ್ಲಾಟ್ ಮತ್ತು ಡ್ಯುಯಲ್ ಟೋನ್ ಕ್ರೋಮ್, ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಹಾಗೆಯೇ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಹೊಸ XUV700 ಮಾದರಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. 2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.


Click it and Unblock the Notifications