ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳುವುದು ಬಹುತೇಕ ಖಚಿತವಾಗಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯಾಗಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದೆ. ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಈಗಾಗಲೇ ಹಲವು ಮಾಹಿತಿಗಳನ್ನು ಹಂಚಿಕೊಂಡಿರುವ ಮಹೀಂದ್ರಾ ಕಂಪನಿಯು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಕಳೆದ ವರ್ಷ ಅಕ್ಟೊಬರ್‌ನಲ್ಲಿ ನ್ಯೂ ಜನರೇಷನ್ ಥಾರ್ ಬಿಡುಗಡೆಯ ನಂತರ ಎಕ್ಸ್‌ಯುವಿ700 ಬಿಡುಗಡೆ ಮಾಡಬೇಕಿದ್ದ ಮಹೀಂದ್ರಾ ಕಂಪನಿಯು ಕೋವಿಡ್ ಪರಿಣಾಮ ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿತ್ತು. ಆದರೆ 2ನೇ ಅಲೆಯ ಪರಿಣಾಮ ಮತ್ತೆ ಮುಂದೂಡಿಕೆ ಮಾಡಿದ್ದ ಮಹೀಂದ್ರಾ ಇದೀಗ ಅಂತಿಮ ಹೊಸ ಕಾರನ್ನು ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡುತ್ತಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಹೊಸ ಬದಲಾವಣೆಗಾಗಿ ಎಕ್ಸ್‌ಯುವಿ500 ಕಾರನ್ನೇ ವಿಸ್ತರಿತ ವ್ಹೀಲ್ ಬೆಸ್ ಜೊತೆ ಹಲವಾರು ಹೊಸ ತಾಂತ್ರಿಕ ಉನ್ನತೀಕರಿಸಿ ಎಕ್ಸ್‌ಯುವಿ700 ಹೆಸರಿನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಎಕ್ಸ್‌ಯುವಿ700 ಬಿಡುಗಡೆಯ ನಂತರ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾರಾಟದಿಂದ ಸ್ಥಗಿತಗೊಳ್ಳಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಮಾದರಿಯು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯ ಹೊಂದಿರಲಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಹೊಂದಿದ್ದರೂ ಹಿಂಬದಿಯ ಆಸನಗಳು ವಯಸ್ಕ ಪ್ರಯಾಣಿಕರು ಕುಳಿತುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯಲ್ಲಿ ವಿಸ್ತರಿತ ವ್ಹೀಲ್‌ಬೆಸ್ ನೀಡಿರುವುದರಿಂದ ಮೂರನೇ ಸಾಲಿನ ಆಸನಗಳು ಸಾಕಷ್ಟು ಸ್ಥಳಾವಕಾಶ ಹೊಂದಿದ್ದು, ಮುಂಬರುವ ದಿನಗಳಲ್ಲಿ ಎಕ್ಸ್‌ಯುವಿ500 ಮಾದರಿಯು 5 ಸೀಟರ್ ಮಾದರಿಯಲ್ಲಿ ಮರುಬಿಡುಗಡೆಯಾಗಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆ ಮಾಡಿದ ನಂತರ ಎಕ್ಸ್‌ಯುವಿ500 ಮಾರಾಟವನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು 5 ಸೀಟರ್ ಮಾದರಿಯಲ್ಲಿ ಮರುಬಿಡುಗಡೆ ಮಾಡಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 7 ಸೀಟರ್ ಮಾದರಿಗಾಗಿ ಎಕ್ಸ್‌ಯುವಿ700 ಮತ್ತು 5 ಸೀಟರ್ ಮಾದರಿ ಬೇಕಿದ್ದಲ್ಲಿ ಎಕ್ಸ್‌ಯುವಿ500 ಮಾದರಿಯನ್ನು ಮಾರಾಟ ಮಾಡಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಕಂಪನಿಯು ಹೊಸ ಎಕ್ಸ್‌ಯುವಿ700 ಎಸ್‌ಯುವಿಯಲ್ಲಿ ಮಹತ್ವದ ಬದಲಾವಣೆಗಾಗಿ ಬಲಿಷ್ಠ ವಿನ್ಯಾಸದೊಂದಿಗೆ ಆಕರ್ಷಕ ಫೀಚರ್ಸ್‌ಗಳನ್ನು ಜೋಡಣೆ ಮಾಡಿದ್ದು, ವರ್ಟಿಕಲ್ ಗ್ರಿಲ್ ಸ್ಲಾಟ್ ಜೊತೆ ಜೆ ಆಕಾರದಲ್ಲಿರುವ ಎಲ್ಇಡಿ ಹೆಡ್‌ಲೈಟ್ಸ್ ಹೊಸ ಕಾರಿಗೆ ಮತ್ತಷ್ಟು ಮೆರಗು ನೀಡಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಜೊತೆಗೆ ಹೊಸ ಕಾರಿನಲ್ಲಿ ಎಲ್ಇಡಿ ಫಾಗ್ ಲ್ಯಾಂಪ್, ಸಿಲ್ವರ್ ಕೋಟ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, ಡ್ಯುಯಲ್ ಟೋನ್ ಹೊಂದಿರುವ ಮಲ್ಟಿ ಸ್ಪೋರ್ಕ್ ಅಲಾಯ್ ವ್ಹೀಲ್, ಸ್ಪೋರ್ಟಿ ರಿಯರ್ ಬಂಪರ್, ಅಂಡರ್ ಬಾಡಿ ಫ್ಲಕ್ಸ್ ಸ್ಕೀಡ್ ಪ್ಲೇಟ್, ಬೂಟ್ ಲಿಡ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಜೋಡಿಸಲಾಗಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಹಾಗೆಯೇ ಹೊಸ ಕಾರಿನಲ್ಲಿ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳಾದ ಆಟೋ ಬೂಸ್ಟರ್ ಹೆಡ್‌ಲ್ಯಾಂಪ್, ಸೆಗ್ಮೆಂಟ್ ಫಸ್ಟ್ ಲಾರ್ಜ್ ಸನ್‌ರೂಫ್, ಡ್ರೈವರ್ ಡ್ರಾವ್ಸಿನೆಸ್ ಡಿಟೆಕ್ಷನ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳಿದ್ದು, ಸ್ಮಾರ್ಟ್ ಏರ್ ಫಿಲ್ಟರ್ ಟೆಕ್ನಾಲಜಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಇದರೊಂದಿಗೆ ಮಹೀಂದ್ರಾ ಕಂಪನಿಯು ತನ್ನ ಬ್ರಾಂಡ್ ಲೋಗೋ ಬದಲಾವಣೆಗೆ ಮುಂದಾಗಿದ್ದು, ಹೊಸ ಲೋಗೋ ಅನ್ನು ಮೊದಲ ಬಾರಿಗೆ ಎಕ್ಸ್‌ಯುವಿ700 ಮಾದರಿಯಲ್ಲಿ ಜೋಡಣೆ ಮಾಡುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 180-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದ್ದರೆ ಹೊಸದಾಗಿ ನೀಡಲಾಗುತ್ತಿರುವ 2.0-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 210 ಬಿಎಚ್‌ಪಿ ಉತ್ಪಾದನಾ ಮಾದರಿಯಾಗುವ ಸಾಧ್ಯತೆಗಳಿವೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ ಮಹೀಂದ್ರಾ ಕಂಪನಿಯು 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತರುತ್ತಿದೆ.

ಇದೇ ತಿಂಗಳು 14ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.51 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.03 ಲಕ್ಷ ಬೆಲೆ ಹೊಂದಿದ್ದು, ನ್ಯೂ ಜನರೇಷನ್ ಮಾದರಿಯು ಹಳೆಯ ಆವೃತ್ತಿಗಿಂತ ಹೆಚ್ಚುವರಿಯಾಗಿ ರೂ. 80 ಸಾವಿರದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿದೆ.

Most Read Articles

Kannada
English summary
All new mahindra xuv700 suv to unveil on 14th august details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X