ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಫಸ್ಟ್ ಡ್ರೈವ್ ರಿವ್ಯೂ ವಿಡಿಯೋ
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ತನ್ನ ಎಂಟ್ರಿ ಲೆವಲ್ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಆವೃತ್ತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸುತ್ತಿದ್ದು, ಏರೋ ಡೈನಾಮಿಕ್ ವಿನ್ಯಾಸ ಹೊಂದಿರುವ ಹೊಸ ಕಾರು ಐಷಾರಾಮಿ ಕಾರುಗಳ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.
ಎ-ಕ್ಲಾಸ್ ಲಿಮೋಸಿನ್ ಹೊಸ ಕಾರು ಇದೇ ತಿಂಗಳು 25ರಂದು ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದ್ದು, ಎಂಟ್ರಿ ಲೆವಲ್ ಐಷಾರಾಮಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎ-ಕ್ಲಾಸ್ ಲಿಮೋಸಿನ್ ಮಾದರಿಯು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ. ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಕಾರ್ಯಕ್ಷಮತೆ ಕುರಿತಂತೆ ಫಸ್ಟ್ ಡ್ರೈವ್ ಆಯೋಜಿಸಿದ್ದ ಕಂಪನಿಯು ಡ್ರೈವ್‌ಸ್ಪಾರ್ಕ್ ತಂಡಕ್ಕೆ ವಿಶೇಷ ಡ್ರೈವ್ ಕಲ್ಪಿಸಿತ್ತು. ಹಾಗಾದ್ರೆ ಹೊಸದಾಗಿ ಮಾರುಕಟ್ಟೆ ಪ್ರವೇಶಿಸುತ್ತಿರುವ ಎ-ಕ್ಲಾಸ್ ಲಿಮೋಸಿನ್ ಕಾರ್ಯಕ್ಷಮತೆಯ ಮಾಹಿತಿಯನ್ನು ವಿಡಿಯೋದಲ್ಲಿ ತಿಳಿಯೋಣ.

ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿನಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯು 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಪೆಟ್ರೋಲ್ ಮಾದರಿಯ 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಡೀಸೆಲ್ ಎಂಜಿನ್‌ನಲ್ಲಿ 8-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ.

ಪೆಟ್ರೋಲ್ ಮಾದರಿಯು 161-ಬಿಹೆಚ್‍ಪಿ, 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದ್ದಲ್ಲಿ ಡೀಸೆಲ್ ಎಂಜಿನ್ ಮಾದರಿಯು 148-ಬಿಹೆಚ್‍ಪಿ ಮತ್ತು 320-ಎನ್ಎಂ ಟಾರ್ಕ್ ಅನ್ನು ಅನ್ನು ಉತ್ಪಾದಿಸುತ್ತದೆ. ಹೊಸ ಕಾರಿನಲ್ಲಿ ಇಕೋ, ಕಂಫರ್ಟ್, ಸ್ಪೋರ್ಟ್ ಮತ್ತು ಇಂಡಿವಿಜ್ಯುವಲ್ ಎಂಬ ನಾಲ್ಕು ಡ್ರೈವ್ ಮೋಡ್ ನೀಡಲಾಗಿದ್ದು, ಪ್ರತಿ ಡ್ರೈವ್ ಮೋಡ್ ಚಾಲನೆಯಲ್ಲೂ ವಿಭಿನ್ನವಾದ ಥ್ರೊಟಲ್ ರೆಸ್ಪಾನ್ಸ್ ಪಡೆಯಬಹುದಾಗಿದೆ.

ಬಲಿಷ್ಠ ಎಂಜಿನ್ ಆಯ್ಕೆ, ಐಷಾರಾಮಿ ಫೀಚರ್ಸ್ ಜೊತೆಗೆ ವಿಶಾಲವಾದ ಕ್ಯಾಬಿನ್ ಹೊಂದಿರುವ ಹೊಸ ಕಾರು 4549 ಎಂಎಎಂ ಉದ್ದ, 1796 ಎಂಎಂ ಅಗಲ, 1446 ಎಂಎಂ ಎತ್ತರ, 2729 ಎಂಎಂ ವೀಲ್ಹ್‌ಬೆಸ್, 405-ಲೀಟರ್ ಸಾಮರ್ಥ್ಯ ಬೂಟ್‌ಸ್ಪೆಸ್ ಮತ್ತು 127-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 40 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಬಿಎಂಡಬ್ಲ್ಯು ಹೊಸ 2-ಸೀರಿಸ್ ಗ್ರ್ಯಾನ್ ಕೂಪೆ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ.


Click it and Unblock the Notifications








