Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ವಿಶೇಷತೆ ಏನು?

MG Motor ಕಂಪನಿಯು ಭಾರತದಲ್ಲಿ ವಿವಿಧ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ Astor ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಹೊಸ Astor ಕಾರು ಕಂಪ್ಯಾಕ್ಟ್ ಎಸ್‌ಯುವಿಯು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಿ ಗ್ರಾಹಕರಿಗೆ ವಿಭಿನ್ನವಾದ ಚಾಲನಾ ಅನುಭವ ನೀಡಲಿದ್ದು, ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳಲಿರುವ MG Astor ಕಾರು ಮಾರುಕಟ್ಟೆಯಲ್ಲಿ Hyundai Creta, Kia Seltos, Maruti S-Cross ಮತ್ತು Renault Duster ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದಾಗಿದ್ದು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಚಾಲನೆಯನ್ನು ಸರಳಗೊಳಿಸುತ್ತದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಹೊಸ ಕಾರಿನಲ್ಲಿ MG ಕಂಪನಿಯು ಬಾಷ್ ಕಂಪನಿಯ ಜೊತೆಗೂಡಿ ಅಭಿವೃದ್ದಿಗೊಳಿಸಲಾದ ಎರಡನೇ ಹಂತದ ಆಟೊನಮಸ್ ಟೆಕ್ನಾಲಜಿ ಪ್ರೇರಿತ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಸಹ ಈ ಕಾರಿನಲ್ಲಿದ್ದು, ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಸುರಕ್ಷಿತ ಕಾರು ಚಾಲನೆಗೆ ಅನುಕೂಲಕರವಾಗಿದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ವಿಶೇಷತೆ ಏನು?

ಹಾಗೆಯೇ ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಜೊತೆಗೆ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಸೌಲಭ್ಯವಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಅಪಾಯದ ಮುನ್ಸೂಚನೆಯನ್ನು ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಜೊತೆಗೆ 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಹೊಸ Mg Astor ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

Hyundi Creta ಮತ್ತು Kia Seltos ಕಾರುಗಳಿಗೆ ಪೈಪೋಟಿ ನೀಡಲಿರುವ MG Astor ಎಸ್‌ಯುವಿ ವಿಶೇಷತೆ ಏನು?

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷ ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಮಧ್ಯಂತರದಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.

Most Read Articles

Kannada
English summary
All new mg astor suv interior and key features revealed a head of india launch
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X